/kannada/photo-gallery/this-south-star-has-helped-more-than-500-families-these-are-the-netizens-who-are-the-real-heroes-221337 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!!  ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!! ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 221337

ಬೆಂಗಳೂರು:  ಕೇಂದ್ರದ ಬಜೆಟ್ ನಿಂದ ರಾಜ್ಯಕ್ಕೆ ಆಗಿರುವ ಅನ್ಯಾದ ಕುರಿತಾಗಿ ಆಕ್ರೋಶ ವ್ಯಕ್ತಪಡಿಸುತ್ತಾ ಪ್ರತ್ಯೇಕ ರಾಷ್ಟ್ರದ ಕೂಗನ್ನು ಎತ್ತಿದ್ದ ಸಂಸದ ಡಿಕೆ ಸುರೇಶ ಈಗ ತಮ್ಮ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ ದಕ್ಷಿಣ ರಾಜ್ಯಗಳು ಅದರಲ್ಲಿಯೂ ವಿಶೇಷವಾಗಿ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತುವುದು ನನ್ನ ಧರ್ಮ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ರಾಜ್ಯದ ಮೇಲೆ ತೋರಿಸುತ್ತಿರುವ ಮಲತಾಯಿ ಧೋರಣೆಯನ್ನು ಪ್ರಶ್ನೆ ಮಾಡುವ ಹಕ್ಕು ಎಲ್ಲರಿಗೂ ಇದೆ.ಈ ಅನ್ಯಾಯ ಹೀಗೆ ಮುಂದುವರೆದರೆ, ಪ್ರತ್ಯೇಕದ ಕೂಗು ಈಗಾಗಲೇ ಎಲ್ಲ ಕಡೆ ಬಂದಿದೆ ಎಂದು ನಾನು ಹೇಳಿದ್ದೇನೆ.ಭಾರತೀಯ ಜನತಾ ಪಕ್ಷದವರು ನನ್ನ ಹೇಳಿಕೆಯನ್ನು ತಿರುಚುವುದರಲ್ಲಿ ನಿಸ್ಸೀಮರು ಎಂದು ಅವರು ಕಿಡಿ ಕಾರಿದ್ದಾರೆ.

ನಮ್ಮ ರಾಜ್ಯ ಕೇಂದ್ರದ ಬೊಕ್ಕಸಕ್ಕೆ ಅತಿ ಹೆಚ್ಚು ಕೊಡುಗೆ ನೀಡುವ ರಾಜ್ಯಗಳಲ್ಲಿ ಒಂದಾಗಿದೆ. ಅದಕ್ಕೆ ಪ್ರತಿಯಾಗಿ ನಾವು ಪಡೆದುಕೊಂಡ ಅನುದಾನ, ಯೋಜನೆಗಳ ವಿಚಾರದಲ್ಲಿ ಸಂಪೂರ್ಣ ಮಲತಾಯಿ ಧೋರಣೆ ನಮಗೆ ಸಿಕ್ಕಿದೆ. ಕರ್ನಾಟಕ ಭಾರತದಲ್ಲೇ ಇದೆ. ಇದನ್ನು ಒಕ್ಕೂಟ ಸರ್ಕಾರ ಮರೆಯಬಾರದು.ಇದಕ್ಕೆ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡಿದರೆ ನಾವು "ಪ್ರತ್ಯೇಕತಾವಾದಿ"ಗಳು! ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೇಕೆದಾಟು ಇರಲಿ, ಮಹದಾಯಿ ಇರಲಿ, ಬರ ಪರಿಹಾರ ಇರಲಿ, ಕೇಂದ್ರ ಬಿಜೆಪಿ ಸರಕಾರ ನಮ್ಮ ಯಾವುದೇ ಸಮಸ್ಯೆಗಳಿಗೆ ಈವರೆಗೆ ಸ್ಪಂದಿಸಿಲ್ಲ. ನಮ್ಮ ನಾಡಿನ ಭಾಷೆ ಉಳಿಸಿಕೊಳ್ಳಲು ನಾಮಫಲಕಗಳನ್ನು ಕನ್ನಡದಲ್ಲಿ ಕಡ್ಡಾಯ ಮಾಡಿದರೆ, ಅದನ್ನು ಬದಲಾಯಿಸಲು ಸುಗ್ರೀವಾಜ್ಞೆಗಳನ್ನೂ ಇವರು ರಾತ್ರೋ ರಾತ್ರಿ ತರುತ್ತಾರೆ.ದೇಶಭಕ್ತಿ, ಐಕ್ಯತೆ ಮತ್ತು ಸಮಗ್ರತೆ ಬಗ್ಗೆ ಬೋಗಸ್ ಜನತಾ ಪಾರ್ಟಿಯವರಿಂದ ಕಲಿಯುವ ದುಸ್ಥಿತಿ ನಮಗೆ ಬಂದಿಲ್ಲ, ಬರುವುದೂ ಇಲ್ಲ.ಜೈ ಹಿಂದ್! ಜೈ ಕರ್ನಾಟಕ ಮಾತೆ! ಎಂದು ಅವರು ವಾಗ್ದಾಳಿ ನಡೆಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

 

Section: 
English Title: 
We have not had the plight of learning about patriotism, unity and integrity from the bogus Janata Party- MP DK Suresh
News Source: 
Home Title: 

"ಬೋಗಸ್ ಜನತಾ ಪಾರ್ಟಿಯವರಿಂದ ದೇಶಭಕ್ತಿ, ಐಕ್ಯತೆ & ಸಮಗ್ರತೆ ಬಗ್ಗೆ ಕಲಿಯುವ ದುಸ್ಥಿತಿ ಬಂದಿಲ್ಲ"

"ಬೋಗಸ್ ಜನತಾ ಪಾರ್ಟಿಯವರಿಂದ ದೇಶಭಕ್ತಿ, ಐಕ್ಯತೆ ಮತ್ತು ಸಮಗ್ರತೆ ಬಗ್ಗೆ ಕಲಿಯುವ ದುಸ್ಥಿತಿ ನಮಗೆ ಬಂದಿಲ್ಲ"- ಸಂಸದ ಡಿ.ಕೆ ಸುರೇಶ
Yes
Is Blog?: 
No
Tags: 
Facebook Instant Article: 
Yes
Highlights: 

ನಮ್ಮ ರಾಜ್ಯ ಕೇಂದ್ರದ ಬೊಕ್ಕಸಕ್ಕೆ ಅತಿ ಹೆಚ್ಚು ಕೊಡುಗೆ ನೀಡುವ ರಾಜ್ಯಗಳಲ್ಲಿ ಒಂದಾಗಿದೆ.

ಅದಕ್ಕೆ ಪ್ರತಿಯಾಗಿ ನಾವು ಪಡೆದುಕೊಂಡ ಅನುದಾನ, ಯೋಜನೆಗಳ ವಿಚಾರದಲ್ಲಿ ಸಂಪೂರ್ಣ ಮಲತಾಯಿ ಧೋರಣೆ ನಮಗೆ ಸಿಕ್ಕಿದೆ.

ಕರ್ನಾಟಕ ಭಾರತದಲ್ಲೇ ಇದೆ. ಇದನ್ನು ಒಕ್ಕೂಟ ಸರ್ಕಾರ ಮರೆಯಬಾರದು.

Mobile Title: 
"ಬೋಗಸ್ ಜನತಾ ಪಾರ್ಟಿಯವರಿಂದ ದೇಶಭಕ್ತಿ, ಐಕ್ಯತೆ & ಸಮಗ್ರತೆ ಬಗ್ಗೆ ಕಲಿಯುವ ದುಸ್ಥಿತಿ ಬಂದಿಲ್ಲ"
Zee Kannada News Desk
Publish Later: 
No
Publish At: 
Friday, February 2, 2024 - 08:29
Created By: 
Manjunath Naragund
Updated By: 
Manjunath Naragund
Published By: 
Manjunath Naragund
Request Count: 
1
Is Breaking News: 
No
Word Count: 
245