ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರಪೀಠದ ವತಿಯಿಂದ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಾತ್ರೆ- 2024 ಹಾಗೂ ಜನಜಾಗೃತಿ ಜಾಥಾ ಉದ್ಘಾಟಿಸಿ, ಮಾತನಾಡಿದರು.
ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ, ಜಿಲ್ಲೆಗಳಲ್ಲಿರುವ ಪರಿವಾರ / ತಳವಾರ ಜನಾಂಗದವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ ಮಾಡಲಾಗಿದೆ. ಕೂಡಲೇ ಈ ಬಗ್ಗೆ ಸಭೆ ಕರೆದು ಕ್ರಮ ವಹಿಸಲಾಗುವುದು.ಕೇಂದ್ರ ಸರ್ಕಾರ ಈಗಾಗಲೇ ಈ ಸಮುದಾಯವನ್ನು ಎಸ್.ಟಿ ಗೆ ಸೇರ್ಪಡೆ ಮಾಡಿದೆ. ಇಲ್ಲಿ ಇನ್ನೂ ಪ್ರವರ್ಗದಲ್ಲಿರುವ ನಿಮ್ಮ ಮೇಲಿದ್ದ ಎಲ್ಲಾ ಪ್ರಕರಣಗಳನ್ನು ವಾಪಸ್ಸು ಪಡೆಯಲೂ ಸೂಚನೆ ನೀಡಲಾಗಿದೆ.
ಇದನ್ನೂ ಓದಿ: ನಿರ್ಮಲಾ ಸೀತಾರಾಮನ್ ಹೆಸರು ಹೇಳಿಕೊಂಡು ವಂಚನೆ
ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿರುವುದರಿಂದ ಸಾಮಾಜಿಕ, ಆರ್ಥಿಕ ಅಸಮಾನತೆ ನಿರ್ಮಾಣವಾಗಿದೆ. ವಿದ್ಯೆ, ಬುದ್ಧಿವಂತಿಕೆ ಯಾರ ಸ್ವತ್ತಲ್ಲ. ಬುದ್ಧಿ, ಜ್ಞಾನ ಪಡೆದಾಗ ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯ. ಎಲ್ಲರಿಗೂ ಸಮಾನ ಎಂಬ ಭಾವ ಬರಲು ಸ್ವಾಭಿಮಾನ ಅಗತ್ಯ.
ಇದನ್ನೂ ಓದಿ: “ರವೀಂದ್ರ ಜಡೇಜಾಗೂ ನಮಗೂ ಸಂಬಂಧವಿಲ್ಲ, ಮಾತು ಬಿಟ್ಟು ವರ್ಷಗಳೇ ಕಳೆದಿವೆ”- ಜಡ್ಡು ತಂದೆಯ ಹೇಳಿಕೆ
ಬೇಡ ಜನಾಂಗದಲ್ಲಿ ಜನಿಸಿದ ವಾಲ್ಮೀಕಿಯವರು ರಾಮಾಯಣವನ್ನು ರಚಿಸಿ ಮಹರ್ಷಿಯಾದರು. ರಾಮಾಯಣ ಮಹಾನ್ ಗ್ರಂಥ. ಮಹಾನ್ ಗ್ರಂಥಗಳನ್ನು ಮೇಲ್ಜಾತಿಯವರು ಮಾತ್ರ ರಚಿಸಲು ಸಾಧ್ಯವೆಂಬ ಪ್ರತೀತಿಯಿತ್ತು. ಆದರೆ ಕಾವ್ಯಸಾಹಿತ್ಯವನ್ನು ಶೂದ್ರರು ರಚಿಸಬಹುದೆಂಬುದನ್ನು ಮಹರ್ಷಿ ವಾಲ್ಮೀಕಿ ನಿರೂಪಿಸಿದರು. ಶ್ರೀರಾಮಚಂದ್ರನ ಕಾಲದಲ್ಲಿಯೇ ಸಮಾನ ಸಮಾಜದ ಹಾಗೂ ಪ್ರಜಾಪ್ರಭುತ್ವದ ಪರಿಕಲ್ಪನೆಯಿತ್ತು. ಪ್ರಜೆಗಳೇ ಆಡಳಿತ ನಡೆಸುವ ಪ್ರಜಾಪ್ರಭುತ್ವದ ಮೂಲವನ್ನು ರಾಮಾಯಣದಲ್ಲಿ ಕಾಣಬಹುದು. ಬಸವಾದಿ ಶರಣರು ತಿಳಿಸಿದಂತೆ ವರ್ಗರಹಿತ, ಜಾತಿರಹಿತ, ಸಮಾನ ಅವಕಾಶ ನೀಡುವ ಸಮಾಜ ನಿರ್ಮಾಣವಾದಾಗ ರಾಮರಾಜ್ಯ ಎಂದು ಹೇಳಬಹುದು.
ಇಂದು ಜಾತಿ - ಜಾತಿಗಳನ್ನು ಒಡೆಯುವ ಕೆಲಸವನ್ನು ಪಟ್ಟಭದ್ರ ಹಿತಾಸಕ್ತಿಗಳು ಮಾಡುತ್ತಿವೆ. ಸಮಸಮಾಜದ ಆಶಯವನ್ನೇ ಸಂವಿಧಾನ ಪ್ರತಿಪಾದಿಸುತ್ತದೆ. ಸಂವಿಧಾನದ ಆಶಯಗಳನ್ನು ಜಾರಿಗೆ ತರುವುದೇ ಸರ್ಕಾರದ ಗುರಿಯಾಗಿದೆ. ಸಹಿಷ್ಣುತೆ ಹಾಗೂ ಸಹಬಾಳ್ವೆಯನ್ನು ಮಾಡಬೇಕೆಂದು ಸಂವಿಧಾನ ಹೇಳುತ್ತದೆ. ಎಸ್.ಸಿ , ಎಸ್.ಟಿ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರಿಗೆ ಸರಿಯಾದ ಅವಕಾಶ ದೊರೆತಲ್ಲಿ ಉತ್ತಮವಾಗಿ ಜೀವನ ರೂಪಿಸಿಕೊಳ್ಳುತ್ತಿದ್ದರು. ಇವರಿಗೆ ಸಮಾನ ಅವಕಾಶಗಳು ದೊರೆತಾಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.