ಬೆಂಗಳೂರು: ಕರ್ನಾಟಕದ ರಾಜ್ಯಸಭೆಯಿಂದ ನಾರಾಯಣಸಾ ಭಾಂಡಗೆ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ. ಮುಂಬರುವ ರಾಜ್ಯಸಭೆ ಚುನಾವಣೆಗೆ ಬಿಜೆಪಿಯು ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿ ಅಚ್ಚರಿ ಮೂಡಿಸಿದೆ.
ಈ ಬಗ್ಗೆ ಭಾನುವಾರ ಟ್ವೀಟ್ ಮಾಡಿರುವ ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ, ʼಕರ್ನಾಟಕದಿಂದ ಬಾಗಲಕೋಟೆ ಜಿಲ್ಲೆಯ ಪಕ್ಷದ ಹಿರಿಯ ಕಾರ್ಯಕರ್ತ ನಾರಾಯಣಸಾ ಭಾಂಡಗೆ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆʼ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿ ಹುಕ್ಕಾ ಬ್ಯಾನ್ ಬೆನ್ನಲ್ಲೇ ಸಿಸಿಬಿ ಪೊಲೀಸರು ಅಲರ್ಟ್
ಸಾಮಾನ್ಯ ಕಾರ್ಯಕರ್ತರನ್ನು ನಾಯಕರನ್ನಾಗಿಸುವ ಏಕೈಕ ಪಕ್ಷ ಭಾರತೀಯ ಜನತಾ ಪಕ್ಷ ಮಾತ್ರ.
ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಭಾರತೀಯ ಜನತಾ ಪಕ್ಷದಿಂದ ಅಭ್ಯರ್ಥಿಯಾಗಿ ಆಯ್ಕೆಯಾದ ಬಾಗಲಕೋಟೆ ಜಿಲ್ಲೆಯ ಹಿರಿಯ ಕಾರ್ಯಕರ್ತ ಶ್ರೀ ನಾರಾಯಣಸಾ ಭಾಂಡಗೆ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
ಶ್ರೀ ನಾರಾಯಣಸಾ ಭಾಂಡಗೆ ಅವರು ಸಮರ್ಥವಾಗಿ ಪಕ್ಷವನ್ನು… pic.twitter.com/d7ZsSdZ3WS
— Pralhad Joshi (@JoshiPralhad) February 11, 2024
ʼಒಬ್ಬ ಸಾಮಾನ್ಯ ಕಾರ್ಯಕರ್ತರನ್ನು ನಾಯಕರನ್ನಾಗಿಸುವ ಏಕೈಕ ಪಕ್ಷ ಅದು ಭಾರತೀಯ ಜನತಾ ಪಕ್ಷ ಮಾತ್ರ. ರಾಜ್ಯಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಬಾಗಲಕೋಟೆ ಜಿಲ್ಲೆಯ ಹಿರಿಯ ಕಾರ್ಯಕರ್ತ ನಾರಾಯಣಸಾ ಭಾಂಡಗೆ ಅವರಿಗೆ ಜೋಶಿ ಅಭಿನಂದನೆ ಸಲ್ಲಿಸಿದ್ದಾರೆ.
ಮಾಜಿ ವಿಧಾನಪರಿಷತ್ ಸದಸ್ಯರಾಗಿರುವ ಭಾಂಡಗೆ ಅವರು ಸಮರ್ಥವಾಗಿ ಪಕ್ಷವನ್ನು ಪ್ರತಿನಿಧಿಸಿ ರಾಜ್ಯಸಭೆ ಚುನಾವಣೆಯಲ್ಲಿ ಯಶಸ್ಸು ಸಾಧಿಸಲೆಂದು ಜೋಶಿ ಇದೇ ವೇಳೆ ಶುಭ ಹಾರೈಸಿದ್ದಾರೆ.
ಇದನ್ನೂ ಓದಿ: ಅಮಿತ್ ಶಾ ಕರ್ನಾಟಕಕ್ಕೆ ಬರಿಗೈಯಲ್ಲಿ ಬಂದಿದ್ದಾರೆ: ಸಿಎಂ ಆಕ್ರೋಶ
ಫೆಬ್ರವರಿ 27ರಂದು ಚುನಾವಣೆ
ಮುಂಬರುವ ರಾಜ್ಯಸಭಾ ಚುನಾವಣೆಯ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಭಾನುವಾರ ಬಿಡುಗಡೆ ಮಾಡಿದೆ. ಉತ್ತರ ಪ್ರದೇಶದಿಂದ ಸುಧಾಂಶು ತ್ರಿವೇದಿ ಮತ್ತು ಆರ್ಪಿಎನ್ ಸಿಂಗ್ ಹೆಸರುಗಳನ್ನು ಘೋಷಣೆ ಮಾಡಲಾಗಿದೆ. ಹರಿಯಾಣ ಬಿಜೆಪಿಯ ಮಾಜಿ ಮುಖ್ಯಸ್ಥ ಸುಭಾಷ್ ಬರಾಲರನ್ನು ಹರಿಯಾಣದಿಂದ ಪಕ್ಷದ ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಬಿಹಾರ, ಛತ್ತೀಸ್ಗಢ, ಕರ್ನಾಟಕ, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳದ ಅಭ್ಯರ್ಥಿಗಳನ್ನೂ ಸಹ ಘೋಷಿಸಲಾಗಿದೆ. ರಾಜ್ಯಸಭೆಯ 56 ಸ್ಥಾನಗಳಿಗೆ ಇದೇ ಫೆಬ್ರವರಿ 27ರಂದು ಚುನಾವಣೆ ನಡೆಯಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.