Belli Parva D-25 At Srirangapatna: ಚಂದನವನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 25 ವರ್ಷ ಪೂರೈಸಿದೆ. ನಟ ದರ್ಶನ್ ಪ್ರಾರಂಭದಲ್ಲಿ ಪೋಷಕ ಪಾತ್ರಗಳನ್ನು ಮಾಡುತ್ತ, ಆನಂತರ ಹೀರೋ ಆಗಿ ಅಭಿನಯಸಿ, ಬಳಿಕ ಬಾಕ್ಸ್ ಫೀಸ್ ಸುಲ್ತಾನ ಅಂತ ಅನಿಸಿಕೊಂಡರು. ಸದ್ಯ ಈ ನಟನ ಸಿನಿ ಪಯಣಕ್ಕೆ 25 ವರ್ಷ ತುಂಬಿರುವುದರಿಂದ, ಅದ್ಧೂರಿ ಕಾರ್ಯಕ್ರಮ ಮಾಡುವುದಕ್ಕಾಗಿ ಸಕಲ ತಯಾರಿಗಳು ಮಾಡಲಾಗುತ್ತಿದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ವೃತ್ತಿ ಬದುಕಿಗೆ 25 ವರ್ಷ ತುಂಬಿರುವ ಹಿನ್ನೆಲೆ ಇದೇ ಫೆಬ್ರವರಿ 17 ರಂದು ಶನಿವಾರ ಸಂಜೆ 5 ಗಂಟೆಗೆ 'ಬೆಳ್ಳಿ ಪರ್ವ ಡಿ-25' ಎಂಬ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಈ ಬೆಳ್ಳಿ ಪರ್ವ ಕಾರ್ಯಕ್ರಮವನ್ನು ಶ್ರೀರಂಗಪಟ್ಟಣದ ಶ್ರೀ ರಂಗನಾಥಸ್ವಾಮಿ ದೇವಸ್ಥಾನ ಮೈದಾನದಲ್ಲಿ ನಡೆಯಲಿದ್ದು, ಅದಕ್ಕೂ ಒಂದು ದಿನ ಮುಂಚೆ ಅಂದರೆ ಫೆಬ್ರವರಿ 16 ರಂದು ದರ್ಶನ್ ಹುಟ್ಟುಹಬ್ಬದ ಕಾರ್ಯಕ್ರಮವನ್ನು ಮುಗಿಸಿಕೊಂಡು ಮಾರನೇ ದಿನ ಶ್ರೀರಂಗಪಟ್ಟಣಕ್ಕೆ ಬರಲಿದ್ದಾರೆ.
ಇದನ್ನೂ ಓದಿ: Radhika Pandit: ಪ್ರೇಮಿಗಳ ದಿನ ಟೈಮ್‌ನಲ್ಲಿ ಸ್ಯಾಂಡಲ್‌ವುಡ್ ಸಿಂಡ್ರೆಲಾಳ ನ್ಯೂ ಫೋಟೋಶೂಟ್!
'ಬೆಳ್ಳಿ ಪರ್ವ ಡಿ-25' ಕಾರ್ಯಕ್ರಮ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳು, ಶ್ರೀ ಸುತ್ತೂರು ಶ್ರೀಗಳು, ಸಂಸದೆ ಮತ್ತು ನಟಿ ಸುಮಲತಾ ಅಂಬರೀಶ್ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನೆರವೇರಲಿದೆ. ಈ ಸಮಾರಂಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಸೇರುವ ನಿರೀಕ್ಷೆಯಿದ್ದು, ಆ ದಿನ ನಟ ದರ್ಶನ್ ಕನ್ನಡ ಚಿತ್ರರಂಗದಲ್ಲಿ 25 ವರ್ಷ ಪಯಣದ ಸಂಭ್ರಮದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಈ ಅದ್ದೂರಿ ಕಾರ್ಯಕ್ರಮಕ್ಕೆ ಚಿತ್ರರಂಗದ ಹಲವಾರು ಕಲಾವಿದರಾದ ಡಾಲಿ ಧನಂಜಯ್, ಅಭಿಷೇಕ್ ಅಂಬರೀಶ್, ವಿನೋದ್ ರಾಜ್, ವಿನೋದ್ ಪ್ರಭಾಕರ್, ಸತೀಶ್ ನೀನಾಸಂ, ಧನ್ವೀರ್, ಝೈದ್ ಖಾನ್, ಶಿವರಾಜ್ ಕೆ ಆರ್ ಪೇಟೆ, ಚಿಕ್ಕಣ್ಣ, ಸೂರಜ್ ಸೇರಿದಂತೆ ಸಾಕಷ್ಟು ಮಂದಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಅಂದು ನಿಮಿಕಾ ರತ್ನಾಕರ್, ನಿಶ್ವಿಕಾ ನಾಯ್ಡು, ಬೃಂದಾ ಆಚಾರ್ಯ, ಶರಣ್ಯ ಶೆಟ್ಟಿ, ನಮ್ರತಾ ಗೌಡ, ತನ್ವಿ ಬಾಲರಾಜ್, ಪ್ರಿಯಾಂಕಾ ಗೌಡ ಮುಂತಾದವರು ನೃತ್ಯ ಮಾಡಲಿದ್ದಾರೆ.
ಇದನ್ನೂ ಓದಿ: Deepika Padukone: ಕಲ್ಕಿಯಲ್ಲಿ ಪ್ರಭಾಸ್ ಜೊತೆ ನಟಿಸಲು ದೀಪಿಕಾ ತೆಗೆದುಕೊಂಡ ಸಂಭಾವನೆ ಎಷ್ಟು ಗೊತ್ತಾ..?
ಹಾಗೆಯೇ ಇದೇ 'ಬೆಳ್ಳಿ ಪರ್ವ ಡಿ-25' ಕಾರ್ಯಕ್ರಮದಲ್ಲಿ ಮ್ಯೂಸಿಕ್ ಡೈರೆಕ್ಟರ್ ವಿ ಹರಿಕೃಷ್ಣ ಸಂಗೀತ ರಸಸಂಜೆ ಸೇರಿದಂತೆ ಇನ್ನೂ ಹಲವಾರು ಮನರಂಜನಾ ಕಾರ್ಯಕ್ರಮಗಳು ಇರಲಿವೆ. ಇದೇ ವೇಳೆ ಹಲವು ಸಾಮಾಜಿಕ ಕಾರ್ಯಕ್ರಮಗಳು ಕೂಡ ಜರುಗಲಿದ್ದು, ಇವೆಲ್ಲ ಕಾರ್ಯಗಳ ಉಸ್ತುವಾರಿಯನ್ನು ದರ್ಶನ್ ಆಪ್ತ ಎಸ್ ಸಚ್ಚಿದಾನಂದ ಇಂಡುವಾಳು ವಹಿಸಿಕೊಂಡಿದ್ದಾರೆ. ಹಾಗೆಯೇ ನಟ ದರ್ಶನ್ ಜನ್ಮದಿನದಂದು 'ಡೆವಿಲ್' ಚಿತ್ರದ ಫಸ್ಟ್ ಲುಕ್ ಕೂಡ ರಿಲೀಸ್ ಆಗಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ