ಪ್ರಜ್ವಲ್ ದೇವರಾಜ್ ನಟನೆಯ 'ಕರಾವಳಿ' ಸಿನಿಮಾಗೆ ನಾಯಕಿ ಫಿಕ್ಸ್!!

Sampada heroine for the Karavali: ಕರಾವಳಿ, ಫಸ್ಟ್ ಲುಕ್ ಮತ್ತು ಟೀಸರ್ ಮೂಲಕ ಭಾರಿ ನಿರೀಕ್ಷೆ ಮೂಡಿಸಿರುವ ಸಿನಿಮಾ. ಗುರುದತ್ ಗಾಣಿಗ ನಿರ್ದೇಶದ ಪ್ರಜ್ವಲ್ ದೇವರಾಜ್ ನಟನೆಯ 'ಕರಾವಳಿ' ಸಿನಿಮಾದ ಅಪ್‌ಡೇಟ್ ಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. 

Written by - Chetana Devarmani | Last Updated : Feb 14, 2024, 12:09 PM IST
  • ಕರಾವಳಿಗೆ ನಾಯಕಿಯಾಗಿ ಸಂಪದಾ ಎಂಟ್ರಿ
  • ಪ್ರಜ್ವಲ್ ಜೊತೆ ಸಂಪದಾ ರೊಮ್ಯಾನ್ಸ್
  • ಗುರು-ಪ್ರಜ್ವಲ್ ಕಾಂಬಿನೇಷನ್‌ನ ಕರಾವಳಿಗೆ ಸಂಪದಾ ನಾಯಕಿ
ಪ್ರಜ್ವಲ್ ದೇವರಾಜ್ ನಟನೆಯ 'ಕರಾವಳಿ' ಸಿನಿಮಾಗೆ ನಾಯಕಿ ಫಿಕ್ಸ್!! title=

Karavali movie heroine : ಕರಾವಳಿ, ಫಸ್ಟ್ ಲುಕ್ ಮತ್ತು ಟೀಸರ್ ಮೂಲಕ ಭಾರಿ ನಿರೀಕ್ಷೆ ಮೂಡಿಸಿರುವ ಸಿನಿಮಾ. ಗುರುದತ್ ಗಾಣಿಗ ನಿರ್ದೇಶದ ಪ್ರಜ್ವಲ್ ದೇವರಾಜ್ ನಟನೆಯ 'ಕರಾವಳಿ' ಸಿನಿಮಾದ ಅಪ್‌ಡೇಟ್ ಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಕರಾವಳಿ, ಫಸ್ಟ್ ಲುಕ್ ಮತ್ತು ಟೀಸರ್ ಮೂಲಕ ಭಾರಿ ನಿರೀಕ್ಷೆ ಮೂಡಿಸಿರುವ ಸಿನಿಮಾ. ಗುರುದತ್ ಗಾಣಿಗ ನಿರ್ದೇಶದ ಪ್ರಜ್ವಲ್ ದೇವರಾಜ್ ನಟನೆಯ 'ಕರಾವಳಿ' ಸಿನಿಮಾದ ಅಪ್‌ಡೇಟ್ ಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು. ಇದೀಗ ಸಿನಿಮಾದಿಂದ ನಾಯಕಿ ಯಾರು ಎನ್ನುವ ಮಾಹಿತಿ ಬಹಿರಂಗವಾಗಿದೆ. ಕರಾವಳಿಗೆ ನಾಯಕಿ ಯಾರಾಗಲಿದ್ದಾರೆ? ಕನ್ನಡದವರಾ ಅಥವಾ ಪರಭಾಷೆಯ ನಟಿನಾ ಎನ್ನುವ ಕುತೂಹಲ ಅಭಿಮಾನಿಗಳಲ್ಲಿತ್ತು. ಆದರೀಗ ಆ ಕುತೂಹಲಕ್ಕೆ ತೆರೆ ಎಳೆದಿದೆ ಸಿನಿಮಾತಂಡ. 

ನಟಿ ಸಂಪದಾ ಕರಾವಳಿ ಸಿನಿಮಾಗೆ ನಾಯಕಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಕಿರುತೆರೆಯಲ್ಲಿ ಮಿಂಚಿದ್ದ ಸಂಪದಾ ಇದೀಗ ಪ್ಜಜ್ವಲ್‌ಗೆ ನಾಯಕಿಯಾಗುವ ಮೂಲಕ ಸಿನಿಮಾದಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಕಿರುತೆರೆ ಬಳಿಕ ಹೆಚ್ಚಾಗಿ ಎಲ್ಲೂ ಕಾಣಿಸಿಕೊಳ್ಳದ ಸಂಪದಾ ಇದೀಗ ಬಹುನಿರೀಕ್ಷೆಯ ಸಿನಿಮಾಗೆ ನಾಯಕಿಯಾಗಿ ಪದಾರ್ಪಣೆ ಮಾಡಿದ್ದಾರೆ. ಅಂದಹಾಗೆ ಸಂಪದಾಗೆ ಇದು  ಮೊದಲ ಸಿನಿಮಾವಲ್ಲ. ಈಗಾಗಲೇ ನಿಖಿಲ್ ಕುಮಾರ್ ನಟನೆಯ ರೈಡರ್ ಸಿನಿಮಾದಲ್ಲಿ ಸಂಪದಾ ನಟಿಸಿದ್ದರು. ಇದೀಗ ಕರಾವಳಿ ಕಥೆ ಕೇಳಿ ಇಂಪ್ರೆಸ್ ಆದ ಸಂಪದಾ ಪ್ರಜ್ವಲ್ ಜೊತೆ ನಟಿಸಲು ಗ್ರೀನ್ ಸಿಗ್ನಲ್ ನೀಡಿದ್ದಾರೆ. 

ಇದನ್ನೂ ಓದಿ: ರಾಕ್‌ಲೈನ್‌ ವೆಂಕಟೇಶ್‌ ಒಡೆತನದ ʻರಾಕ್‌ಲೈನ್‌ ಮಾಲ್ʼ ಸೀಜ್.!

ಇಂದು ಪ್ರೇಮಿಗಳ ದಿನದ ವಿಶೇಷವಾಗಿ ಕರಾವಳಿ ಸಿನಿಮತಂಡ ನಾಯಕಿ ಯಾರೆಂದು ರಿವೀಲ್ ಮಾಡಿದೆ. ಸದ್ಯ ರಿಲೀಸ್ ಆಗಿರುವ ಪೋಸ್ಟರ್ ನಲ್ಲಿ ಸಂಪದಾ ಕೆಂಪು ಸೀರೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ  ಟೈಟಲ್ ಹೇಳುವ ಹಾಗೆ ಇದು ಪಕ್ಕಾ ಕರಾವಳಿ ಭಾಗದ  ಸಿನಿಮಾ. ಸಂಪೂರ್ಣ ಬ್ಯಾಕ್ ಡ್ರಾಪ್ ಕರಾವಳಿ ಭಾಗದ್ದೆ ಆಗಿರಲಿದೆ. ಸಂಪದಾ ಕೂಡ ಕರಾವಳಿ ಹುಡುಗಿಯಾಗಿ ಮಿಂಚಲಿದ್ದಾರೆ. 

 

 

ಕರಾವಳಿ ಚಿತ್ರಕ್ಕೆ ಸಚಿನ್ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ. ಅಭಿಮನ್ಯೂ ಸದಾನಂದನ್ ಅವರ ಛಾಯಾಗ್ರಹಣ ಚಿತ್ರಕ್ಕಿದೆ. ಪ್ರಜ್ವಲ್ ನಟನೆಯ 40ನೇ ಸಿನಿಮಾ ಇದಾಗಿದೆ. ಡೈನಾಮಿಕ್ ಪ್ರಿನ್ಸ್ ಈ ಸಿನಿಮಾದಲ್ಲಿ ಇದುವರೆಗೂ ಕಾಣಿಸಿಕೊಳ್ಳದೆ ಇರುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಸದ್ಯ ಫಸ್ಟ್ ಮತ್ತು ಟೀಸರ್ ಮೂಲಕ ಕುತೂಹಲ ಹೆಚ್ಚಿಸಿರುವ  ಕರಾವಳಿ ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭ ಮಾಡಲಿದೆ. ಸಂಪೂರ್ಣ ಚಿತ್ರೀಕಣ ಮಂಗಳೂರು ಸುತ್ತಮುತ್ತ ನಡೆಯಲಿದೆ.

ಇದನ್ನೂ ಓದಿ: 15ನೇ ವಯಸ್ಸಿಗೆ ನಾಯಕಿ.. 100ಕ್ಕೂ ಹೆಚ್ಚು ಚಿತ್ರಗಳು.. ಈ ಚೆಲುವೆ ಯಾರೆಂದು ನೆನಪಿದೆಯಾ? 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News