Installation of registration plates on vehicles : ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ಆದೇಶದಂತೆ 2019ರ ಏಪ್ರಿಲ್ ನಂತರ ನೋಂದಣಿಯಾದ ವಾಹನಗಳಿಗೆ ಸುರಕ್ಷತಾ ನೋಂದಣಿ ಫಲಕ ಅಳವಡಿಸಲಾಗುತ್ತಿದೆ.
ವಾಹನಗಳನ್ನು ಉಪಯೋಗಿಸಿಕೊಂಡು ಮಾಡುವ ಅಪರಾಧಗಳನ್ನು ತಡೆಯಲು ಮತ್ತು ವಾಹನಗಳನ್ನು ಖಚಿತವಾಗಿ ಗುರುತಿಸಲು ಈ ನೊಂದಣಿ ಫಲಕಗಳನ್ನು ಅಳವಡಿಸಲಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಮಧು ಜಿ ಮಾದೇಗೌಡ ಅವರ ಪ್ರಶ್ನೆಗೆ ಉತ್ತರಿಸಿದರು.
ಇದನ್ನು ಓದಿ : ಕಡು ನೀಲಿ ಬಣ್ಣದಲ್ಲಿ ಕಂಗನಾ ರಣಾವತ್ : ಫೋಟೋಸ್ ವೈರಲ್
2019ರ ಏಪ್ರಿಲ್ ಗೂ ಮೊದಲು 2.45 ಕೋಟಿ ವಾಹನಗಳು ರಾಜ್ಯದಲ್ಲಿ ನೋಂದಣಿಯಾಗಿವೆ. ಅವುಗಳಲ್ಲಿ ಶೇ.90ಕ್ಕೂ ಹೆಚ್ಚು ವಾಹನಗಳು ಫಲಕಗಳನ್ನು ಅಳವಡಿಸಲು ಬಾಕಿ ಉಳಿದಿದ್ದು, ಕೇವಲ 18.32 ಲಕ್ಷ ವಾಹನಗಳಷ್ಟೇ ಫಲಕವನ್ನು ಅಳವಡಿಸಿಕೊಂಡಿವೆ.
ಫಲಕ ಅಳವಡಿಕೆಗೆ ನೀಡಿದ ಅವಧಿ ಇದೇ ಫೆಬ್ರವರಿ 17ಕ್ಕೆ ಮುಗಿಯಲಿದ್ದು, ಮತ್ತೆ ವಿಸ್ತರಿಸಲು ನಿರ್ಧರಿಸಲಾಗಿದೆ ಇದಾದ ನಂತರ ದಂಡ ಪ್ರಕ್ರಿಯೆ ಆರಂಭವಾಗುತ್ತದೆ ಎಂದು ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.