ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಬಂಧನ

ಫಾರೂಕ್ ಅಬ್ದುಲ್ಲಾ ಅವರನ್ನು ಸಾರ್ವಜನಿಕ ರಕ್ಷಣಾ ಕಾಯ್ದೆ(ಪಿಎಸ್ಎ) ಅಡಿಯಲ್ಲಿ ಬಂಧಿಸುವ ನಿರ್ಧಾರವನ್ನು ಭಾನುವಾರ ರಾತ್ರಿ ತೆಗೆದುಕೊಳ್ಳಲಾಗಿದ್ದು, ಈ ಮೂಲಕ  ವಿಚಾರಣೆಯಿಲ್ಲದೆ ಒಬ್ಬ ವ್ಯಕ್ತಿಯನ್ನು 2 ವರ್ಷಗಳವರೆಗೆ ಬಂಧಿಸುವ ಅಧಿಕಾರವನ್ನು ಸರ್ಕಾರ ಪಡೆಯಲಿದೆ. 

Last Updated : Sep 16, 2019, 01:39 PM IST
ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಬಂಧನ title=

ನವದೆಹಲಿ: ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮನತ್ರಿ ಫಾರೂಕ್ ಅಬ್ದುಲ್ಲಾ ಅವರನ್ನು ಸಾರ್ವಜನಿಕ ರಕ್ಷಣಾ ಕಾಯ್ದೆಯಡಿಯಲ್ಲಿ ಸೋಮವಾರ ಬಂಧಿಸಲಾಗಿದೆ. 

ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ 370 ನೇ ವಿಧಿಯನ್ನು ಕೇಂದ್ರವು ರದ್ದುಪಡಿಸಿದ ಬಳಿಕ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ ಅವರನ್ನು ಆಗಸ್ಟ್ 5 ರಿಂದ ಗೃಹಬಂಧನದಲ್ಲಿರಿಸಲಾಗಿದೆ. 

ಆದರೆ, ಫಾರೂಕ್ ಅಬ್ದುಲ್ಲಾ ಅವರನ್ನು ಸಾರ್ವಜನಿಕ ರಕ್ಷಣಾ ಕಾಯ್ದೆ(ಪಿಎಸ್ಎ) ಅಡಿಯಲ್ಲಿ ಬಂಧಿಸುವ ನಿರ್ಧಾರವನ್ನು ಭಾನುವಾರ ರಾತ್ರಿ ತೆಗೆದುಕೊಳ್ಳಲಾಗಿದ್ದು, ಈ ಮೂಲಕ  ವಿಚಾರಣೆಯಿಲ್ಲದೆ ಒಬ್ಬ ವ್ಯಕ್ತಿಯನ್ನು 2 ವರ್ಷಗಳವರೆಗೆ ಬಂಧಿಸುವ ಅಧಿಕಾರವನ್ನು ಸರ್ಕಾರ ಪಡೆಯಲಿದೆ. ಫಾರೂಕ್ ಅಬ್ದುಲ್ಲಾ ಅವರನ್ನು ಪಿಎಸ್ಎ ಅಡಿಯಲ್ಲಿ ಬಂಧಿಸಲಾಗಿದ್ದರೂ, ಅವರ ಶ್ರೀನಗರ ನಿವಾಸದಲ್ಲಿ ಸಂಬಂಧಿಕರು ಮತ್ತು ಸ್ನೇಹಿತರನ್ನು ಭೇಟಿಯಾಗಲು ಯಾವುದೇ ನಿರ್ಬಂಧ ಹೇರಲಾಗಿಲ್ಲ. 

ಏತನ್ಮಧ್ಯೆ, ಫಾರೂಕ್ ಅಬ್ದುಲ್ಲಾ ಅವರನ್ನು ಬಿಡುಗಡೆ ಮಾಡುವಂತೆ ಕೋರಿ ಎಂಡಿಎಂಕೆ ನಾಯಕ ವೈಕೊ ಸಲ್ಲಿಸಿದ್ದ ಮನವಿಗೆ ಸ್ಪಂದಿಸುವಂತೆ ಕೋರಿ ಕೇಂದ್ರ ಮತ್ತು ಜಮ್ಮು ಮತ್ತು ಕಾಶ್ಮೀರ ಆಡಳಿತಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ನೋಟಿಸ್ ನೀಡಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ನ್ಯಾಯಮೂರ್ತಿಗಳಾದ ಎಸ್.ಎ.ಬೊಬ್ಡೆ ಮತ್ತು ಎಸ್.ಎ.ನಜೀರ್ ಅವರಿದ್ದ ನ್ಯಾಯಪೀಠ ನೋಟಿಸ್ ನೀಡಿ, ಸೆಪ್ಟೆಂಬರ್ 30 ರಂದು ಈ ಮುಂದಿನ ವಿಚಾರಣೆ ನಡೆಸುವುದಾಗಿ ಹೇಳಿದೆ. 

Trending News