Cholesterol Control Tips: ಚಳಿಗಾಲದಲ್ಲಿ ಇದನ್ನು ಚಹಾದಂತೆ ಕುಡಿಯುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ ಮತ್ತು ಶೀತ ಮತ್ತು ಕೆಮ್ಮಿನಂತಹ ಸಮಸ್ಯೆಗಳನ್ನು ತಡೆಯುತ್ತದೆ. ಅಲ್ಲದೇ ಈ ಪಾನೀಯವನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿದರೆ ಹೊಟ್ಟೆಯಲ್ಲಿರುವ ಕೊಲೆಸ್ಟ್ರಾಲ್ ಕರಗುತ್ತದೆ.
ಪ್ರತಿಯೊಂದು ಆರೋಗ್ಯ ಸಮಸ್ಯೆಗೂ ಆಯುರ್ವೇದದಲ್ಲಿ ಪರಿಹಾರವಿದೆ. ಅಧಿಕ ಕೊಬ್ಬು ಮತ್ತು ತೂಕದಿಂದ ಬಳಲುತ್ತಿರುವವರು ವ್ಯಾಯಾಮದ ಜೊತೆಗೆ ಈ ಆಮ್ಲಾ ಟೀಯನ್ನು ಕುಡಿಯುವುದರಿಂದ ತ್ವರಿತವಾಗಿ ತೂಕವನ್ನು ಕಳೆದುಕೊಳ್ಳಬಹುದು ಎಂದು ಆಯುರ್ವೇದ ಹೇಳುತ್ತದೆ. ಅಲ್ಲದೆ, ಚಳಿಗಾಲದಲ್ಲಿ ಇದನ್ನು ಚಹಾದಂತೆ ಕುಡಿಯುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ ಮತ್ತು ಶೀತ ಮತ್ತು ಕೆಮ್ಮಿನಂತಹ ಸಮಸ್ಯೆಗಳು ಬರುವುದಿಲ್ಲ..
ಹೆಚ್ಚು ಕಾಫಿ ಮತ್ತು ಟೀ ಕುಡಿಯುವುದರಿಂದ ದೇಹದಲ್ಲಿ ಅನೇಕ ಸಮಸ್ಯೆಗಳು ಉಂಟಾಗುತ್ತವೆ. ಅಲ್ಲದೇ ಈ ಕೆಫಿನ್ ಮಾನವನ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಅಲ್ಲದೇ ಇದು ಮಧುಮೇಹದಂತಹ ಕಾಯಿಲೆಗಳ ಅಪಾಯಯನ್ನು ಹೆಚ್ಚಿಸುತ್ತದೆ.. ಅಪಾಯವನ್ನು ಹೆಚ್ಚಿಸುತ್ತದೆ. ಹಾಗಾಗಿ ಎರಡ್ಮೂರು ಗಂಟೆಗೊಮ್ಮೆ ಟೀ ಕುಡಿಯುವ ಅಭ್ಯಾಸವಿರುವವರು ನಿತ್ಯದ ಟೀ ಬಿಟ್ಟು ಆಮ್ಲಾ ಟೀ ಕುಡಿಯಬಹುದು.
ಆಮ್ಲಾ ಟೀ ತ್ವರಿತವಾಗಿ ತೂಕ ಕಳೆದುಕೊಳ್ಳು ಸಹಾಯ ಮಾಡುತ್ತದೆ. ಇದರಲ್ಲಿ ವಿಟಮಿನ್ ಸಿ ಸಮೃದ್ಧವಾಗಿರುವುದರಿಂದ ಇದು ಕೂದಲು, ಕಣ್ಣು ಮತ್ತು ಚರ್ಮಕ್ಕೆ ಒಳ್ಳೆಯದು. ಅಲ್ಲದೇ ಇದರ ಪ್ರತಿನಿತ್ಯದ ಸೇವನೆ ನಿಮ್ಮನ್ನು ಸ್ಲಿಮ್ಆಗಿ ಕಾಣುವಂತೆ ಮಾಡುತ್ತದೆ..
ಆಮ್ಲಾ ಟೀ ಮಾಡುವುದು ಹೇಗೆ? : ಒಂದು ಪಾತ್ರೆಯಲ್ಲಿ 2 ಕಪ್ ನೀರನ್ನು ಕುದಿಸಿ. ಕುದಿಯುವ ನೀರಿಗೆ ಸ್ವಲ್ಪ ಶುಂಠಿ ಮತ್ತು 4-5 ತುಳಸಿ ಎಲೆಗಳನ್ನು ಸೇರಿಸಿ. ನಂತರ 1 ಚಮಚ ಆಮ್ಲಾ ಪುಡಿಯನ್ನು ನೀರಿನಲ್ಲಿ ಹಾಕಿ ಕುದಿಸಿ.. ಸಿಹಿ ರುಚಿಗೆ ಬೆಲ್ಲ, ಜೇನುತುಪ್ಪ ಸೇರಿಸಿ ಕುಡಿಯಿರಿ..
ಆಮ್ಲಾ ಟೀ ಕುಡಿಯುವುದರಿಂದ ಆಗುವ ಪ್ರಯೋಜನಗಳು: ಈ ಟೀಯನ್ನು ಪ್ರತಿದಿನ ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆಯು ಬಲಗೊಳ್ಳುತ್ತದೆ. ಇದು ಮಲಬದ್ಧತೆ ಮತ್ತು ಅಜೀರ್ಣದಂತಹ ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸುತ್ತದೆ. ಆಮ್ಲಾ ಟೀ ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿರುತ್ತದೆ.
(ಸೂಚನೆ : ಇಲ್ಲಿ ನೀಡಲಾದ ಮಾಹಿತಿ ಮತ್ತು ಮನೆಮದ್ದುಗಳು ಸಾಮಾನ್ಯ ಮಾಹಿತಿಯನ್ನು ಆಧರಿಸಿವೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee Kannada News ಅದನ್ನು ಅನುಮೋದಿಸುವುದಿಲ್ಲ.)