Job Alert: ಸೆಂಟ್ರಲ್ ಬ್ಯಾಂಕ್​​ನಲ್ಲಿ 3000 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ

Central Bank of India Recruitment 2024: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

Written by - Puttaraj K Alur | Last Updated : Mar 3, 2024, 10:53 PM IST
  • ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
  • ಒಟ್ಟು 3000 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಸಲು ಮಾ.​6 ಕೊನೆಯ ದಿನವಾಗಿದೆ
  • ಅಭ್ಯರ್ಥಿಗಳು ಆನ್​ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ
Job Alert: ಸೆಂಟ್ರಲ್ ಬ್ಯಾಂಕ್​​ನಲ್ಲಿ 3000 ಹುದ್ದೆಗಳ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ title=
Central Bank of India Recruitment

Central Bank of India Recruitment 2024: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಸಿಹಿಸುದ್ದಿ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಮೊದಲು ನೀಡಿದ್ದ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಲಾಗಿದೆ. ಒಟ್ಟು 3000 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಸಲು ಮಾರ್ಚ್​ 6 ಕೊನೆಯ ದಿನವಾಗಿದೆ. 

ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಕರ್ನಾಟಕದಲ್ಲಿ 110 ಹುದ್ದೆಗಳು ಖಾಲಿ ಇವೆ. ಅದೇ ರೀತಿ ಬೇರೆ ಬೇರೆ ರಾಜ್ಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತು ತಿಳಿಯುವುದು ಮುಖ್ಯ. ಈ ಎಲ್ಲದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.  

ಇದನ್ನೂ ಓದಿ: NTPC : 30, 000 ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳಿಗೆ ನಾಳೆ ಪ್ರಧಾನಿ ಮೋದಿ ಚಾಲನೆ

ಶೈಕ್ಷಣಿಕ ಅರ್ಹತೆ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ: ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಏಪ್ರಿಲ್ 1, 1996ರಿಂದ ಮಾರ್ಚ್ 31, 2004ರೊಳಗೆ ಜನಿಸಿರಬೇಕು.

ವಯೋಮಿತಿ ಸಡಿಲಿಕೆ: OBC (NCL) ಅಭ್ಯರ್ಥಿಗಳಿಗೆ 3 ವರ್ಷ, SC/ST ಅಭ್ಯರ್ಥಿಗಳಿಗೆ 5 ವರ್ಷ ಮತ್ತು PWD ಅಭ್ಯರ್ಥಿಗಳಿಗೆ 10 ವರ್ಷಗಳು

ಅರ್ಜಿ ಶುಲ್ಕ: PWD ಅಭ್ಯರ್ಥಿಗಳಿಗೆ 400 ರೂ., SC/ST/ಮಹಿಳೆಯರು/EWS ಅಭ್ಯರ್ಥಿಗಳಿಗೆ 600 ರೂ. ಮತ್ತು ಇತರ ಎಲ್ಲಾ ಅಭ್ಯರ್ಥಿಗಳಿಗೆ 800 ರೂ. 

ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹15,000 ವೇತನ ನೀಡಲಾಗುತ್ತದೆ. 

ಉದ್ಯೋಗದ ಸ್ಥಳ: ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳು

ಆಯ್ಕೆ ಪ್ರಕ್ರಿಯೆ: ಆನ್​ಲೈನ್ ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಆನ್​ಲೈನ್ ಮೂಲಕ ಮಾತ್ರವೇ ಅರ್ಜಿ ಸಲ್ಲಿಸಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. 

ಇದನ್ನೂ ಓದಿ: ಕೈ ತಪ್ಪಿದ ಟಿಕೆಟ್‌: ರಾಜಕೀಯಕ್ಕೆ ಗುಡ್‌ ಬೈ ಹೇಳಿದ ಬಿಜೆಪಿ ಸಂಸದ ಹರ್ಷವರ್ಧನ್!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News