Free LPG Cylinder: ಜನ ಸಾಮಾನ್ಯರಿಗೆ ಸಂಬಂಧಿಸಿದ ಈ ಯೋಜನೆಯ ಬಗ್ಗೆ ಹೊರಬೀಳಲಿದೆಯಾ ಗುಡ್ ನ್ಯೂಸ್!

Free LPG Cylinder: ಮಾರ್ಚ್ 7  ರಂದು ಅಂದರೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಉಜ್ವಲ ಯೋಜನೆ ಕುರಿತು ಮಹತ್ವದ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ (Business News In Kannada)  

Written by - Nitin Tabib | Last Updated : Mar 7, 2024, 06:38 PM IST
  • ಪ್ರಧಾನ ಮಂತ್ರಿ ಉಜ್ವಲ ಯೋಜನೆ 2016 ರಲ್ಲಿ ಆರಂಭವಾಗಿದೆ.
  • ಇದರ ಅಡಿಯಲ್ಲಿ, ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ ನೀಡಲಾಗುತ್ತದೆ.
  • ಕೇಂದ್ರ ಸರ್ಕಾರ ಮಹಿಳೆಯರನ್ನು ಗಮನದಲ್ಲಿಟ್ಟುಕೊಂಡು ಪ್ರಧಾನ ಮಂತ್ರಿ ಉಜ್ವಲ ಯೋಜನೆ ಆರಂಭಿಸಿದೆ.
Free LPG Cylinder: ಜನ ಸಾಮಾನ್ಯರಿಗೆ ಸಂಬಂಧಿಸಿದ ಈ ಯೋಜನೆಯ ಬಗ್ಗೆ ಹೊರಬೀಳಲಿದೆಯಾ ಗುಡ್ ನ್ಯೂಸ್! title=

Free LPG Scheme: ಪ್ರಧಾನ ಮಂತ್ರಿ ಉಜ್ವಲ ಯೋಜನೆಯು ಕೇಂದ್ರದ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಆರಂಭಿಸಿದ ಅತ್ಯಂತ ಯಶಸ್ವಿ ಯೋಜನೆಗಳಲ್ಲಿ ಒಂದಾಗಿದೆ, ಇದು ದೇಶದ ಕೋಟ್ಯಾಂತರ ನಾಗರಿಕರಿಗೆ ಸಾಕಷ್ಟು ಪ್ರಯೋಜನವನ್ನು ನೀಡಿದೆ. ಇಂದು ಕೇಂದ್ರ ಸರ್ಕಾರ (Modi Government) ಈ ಯೋಜನೆ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆಯನ್ನು ವರ್ತಿಸಲಾಗುತ್ತಿದೆ. ವಾಣಿಜ್ಯ ಪತ್ರಿಕೆಯೊಂದರಲ್ಲಿ ಪ್ರಕಟಗೊಂಡ ವರದಿಯೊಂದರ ಪ್ರಕಾರ, ಸರ್ಕಾರದ ಉಜ್ವಲ ಎಲ್ಪಿಜಿ ಸಬ್ಸಿಡಿ ಯೋಜನೆಯು 1 ವರ್ಷ ವಿಸ್ತರಣೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇಂದು ಕ್ಯಾಬಿನೆಟ್ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು 2025 ರ ಹಣಕಾಸು ವರ್ಷದವರೆಗೆ ವಿಸ್ತರಿಸುವ ಸಾಧ್ಯತೆ ಇದೆ (Business News In Kannada).

ಕೋಟ್ಯಾಂತರ ಜನರಿಗೆ ಲಾಭ ಸಿಗಲಿದೆ
ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ವಿಸ್ತರಣೆಯಾಗುವುದರಿಂದ ದೇಶದ ಕೋಟಿಗಟ್ಟಲೆ ನೇರವಾಗಿ ಯೋಜನೆಯ ಪ್ರಯೋಜನಗಳು ಸಿಗಲಿವೆ. 2023 ರ ಅಕ್ಟೋಬರ್‌ನಲ್ಲಿಯೇ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆ ಸಬ್ಸಿಡಿಯನ್ನು ಪ್ರತಿ ಸಿಲಿಂಡರ್‌ಗೆ 100 ರೂ.ನಿಂದ 300 ರೂ.ಗೆ ಹೆಚ್ಚಿಸಿತ್ತು ಎಂಬುದು ಇಲ್ಲಿ ಉಲ್ಲೇಖನೀಯ. 2025 ರ ಹಣಕಾಸು ವರ್ಷಕ್ಕೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಸಬ್ಸಿಡಿ (LPG Subsidy Scheme) ಅಂದಾಜು 12,000 ಕೋಟಿ ರೂ. ತಲುಪುವ ಸಾಧ್ಯತೆ ಇದೆ. 

ಇದನ್ನೂ ಓದಿ-Salary Hike: ಇಂದು ಸಂಜೆಯೊಳಗೆ ಸರ್ಕಾರಿ ನೌಕರರಿಗೆ ಸಿಗಲಿದೆಯಾ ಈ ಗುಡ್ ನ್ಯೂಸ್?

ಪ್ರಧಾನ ಮಂತ್ರಿ ಉಜ್ವಲ ಯೋಜನೆ ಎಂದರೇನು?
ಪ್ರಧಾನ ಮಂತ್ರಿ ಉಜ್ವಲ ಯೋಜನೆ 2016 ರಲ್ಲಿ ಆರಂಭವಾಗಿದೆ. ಇದರ ಅಡಿಯಲ್ಲಿ, ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ ನೀಡಲಾಗುತ್ತದೆ. ಕೇಂದ್ರ ಸರ್ಕಾರ ಮಹಿಳೆಯರನ್ನು ಗಮನದಲ್ಲಿಟ್ಟುಕೊಂಡು ಪ್ರಧಾನ ಮಂತ್ರಿ ಉಜ್ವಲ ಯೋಜನೆ ಆರಂಭಿಸಿದೆ. ಯೋಜನೆಯಡಿ ಬಡ ಕುಟುಂಬಗಳಿಗೆ ಸಬ್ಸಿಡಿ ದರದಲ್ಲಿ ಸಿಲಿಂಡರ್ ನೀಡಲಾಗುತ್ತದೆ. ಅಷ್ಟೇ ಅಲ್ಲ, ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಯಾರಾದರೂ ಗ್ಯಾಸ್ ಸಿಲಿಂಡರ್ ಮತ್ತು ಗ್ಯಾಸ್ ಸ್ಟೌವ್ ಅನ್ನು ಮೊದಲ ಬಾರಿಗೆ ಖರೀದಿಸಿದರೆ, ಅವರಿಗೆ ಇಎಂಐ ಸೌಲಭ್ಯವನ್ನು ಕೂಡ ಒದಗಿಸಲಾಗುತ್ತದೆ. 

ಇದನ್ನೂ ಓದಿ-Internet Banking ಗಾಗಿ ಬರಲಿದೆ ಹೊಸ ವ್ಯವಸ್ಥೆ, ಆರ್ಬಿಐನಿಂದ ಮಹತ್ವದ ಘೋಷಣೆ!
 
ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಲಾಭ ಯಾರು ಪಡೆದುಕೊಳ್ಳಬಹುದು?
ಪ್ರಧಾನ ಮಂತ್ರಿ ಉಜ್ವಲ ಯೋಜನೆ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಮಾತ್ರ ಇರುವ ಒಂದು ಯೋಜನೆಯಾಗಿದೆ. ಈ ಹಿಂದೆ ಕೇವಲ ಐದು ಕೋಟಿ ಕುಟುಂಬಗಳು ಇದರಲ್ಲಿ ಶಾಮೀಲಾಗಿದ್ದವು. ಆದರೆ, ಬದಲಾವಣೆಯ ಬಳಿಕ  ಫಲಾನುಭವಿಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ ಮತ್ತು ಇದುವರೆಗೆ ದೇಶದ ಕೋಟ್ಯಂತರ ಜನರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಂಡಿದ್ದಾರೆ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News