ನವದೆಹಲಿ: ಬಿಹಾರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಪ್ರತ್ಯೇಕ ಪ್ರದೇಶಗಳಲ್ಲಿ ಗುರುವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪೂರ್ವ ಉತ್ತರ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್ಗಢ ಮತ್ತು ಜಾರ್ಖಂಡ್ನ ಕೆಲವು ಪ್ರದೇಶಗಳಲ್ಲಿ ದಿನವಿಡೀ ಭಾರಿ ಮಳೆಯಾಗುವ ಸಾಧ್ಯತೆಯಿದೆ. "ಪಶ್ಚಿಮ ಬಂಗಾಳ, ಒಡಿಶಾ, ಗುಜರಾತ್, ಮಧ್ಯ ಮಹಾರಾಷ್ಟ್ರ, ಕೊಂಕಣ, ಗೋವಾ, ಆಂಧ್ರಪ್ರದೇಶದ ಉತ್ತರ ಕರಾವಳಿ, ಕರ್ನಾಟಕ, ಕೇರಳ ಮತ್ತು ಲಕ್ಷದ್ವೀಪಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ" ಎಂದು ಐಎಂಡಿ ತನ್ನ ಬುಲೆಟಿನ್ ನಲ್ಲಿ ತಿಳಿಸಿದೆ.
ಮುಂದಿನ ಎರಡು ದಿನಗಳವರೆಗೆ ಈ ಪ್ರದೇಶಗಳಲ್ಲಿ ಮೀನುಗಾರರು ಸಮುದ್ರಕೆಕ್ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೆ, ನದಿ ತೀರದಲ್ಲಿ ಹಾಗೂ ತಗ್ಗು ಪ್ರದೇಶಗಳಲ್ಲಿನ ವಾಸಿಸುವ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.