Job Alert: ಕರ್ನಾಟಕ ನಗರ ನೀರು ಸರಬರಾಜು & ಒಳಚರಂಡಿ ಮಂಡಳಿಯಲ್ಲಿ ಉದ್ಯೋಗವಕಾಶ!

Karnataka Urban Water Supply and Drainage Board Vacancy: ಒಟ್ಟು 50 ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್) ಮತ್ತು 14 ಫಸ್ಟ್ ಡಿವಿಶನ್ ಅಕೌಂಟ್ಸ್​ ಅಸಿಸ್ಟೆಂಟ್ (ಗ್ರೂಪ್-C) ಹುದ್ದೆಗಳು ಖಾಲಿ ಇವೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Written by - Puttaraj K Alur | Last Updated : Mar 11, 2024, 08:14 PM IST
  • ಕರ್ನಾಟಕ ನಗರ ನೀರು ಸರಬರಾಜು & ಒಳಚರಂಡಿ ಮಂಡಳಿಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ
  • ಒಟ್ಟು 64 ಅಸಿಸ್ಟೆಂಟ್ ಎಂಜಿನಿಯರ್ ಮತ್ತು ಫಸ್ಟ್ ಡಿವಿಶನ್ ಅಕೌಂಟ್ಸ್​ ಅಸಿಸ್ಟೆಂಟ್​ ಹುದ್ದೆಗಳು ಖಾಲಿ ಇವೆ
  • ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ
Job Alert: ಕರ್ನಾಟಕ ನಗರ ನೀರು ಸರಬರಾಜು & ಒಳಚರಂಡಿ ಮಂಡಳಿಯಲ್ಲಿ ಉದ್ಯೋಗವಕಾಶ!  title=
ಸರ್ಕಾರಿ ಉದ್ಯೋಗವಕಾಶ

Karnataka Urban Water Supply and Drainage Board: ಕರ್ನಾಟಕ ನಗರ ನೀರು ಸರಬರಾಜು & ಒಳಚರಂಡಿ ಮಂಡಳಿಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 64 ಅಸಿಸ್ಟೆಂಟ್ ಎಂಜಿನಿಯರ್ ಮತ್ತು ಫಸ್ಟ್ ಡಿವಿಶನ್ ಅಕೌಂಟ್ಸ್​ ಅಸಿಸ್ಟೆಂಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ಹುದ್ದೆಯ ಮಾಹಿತಿ: ಒಟ್ಟು 50 ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್) ಮತ್ತು 14 ಫಸ್ಟ್ ಡಿವಿಶನ್ ಅಕೌಂಟ್ಸ್​ ಅಸಿಸ್ಟೆಂಟ್ (ಗ್ರೂಪ್-C) ಹುದ್ದೆಗಳು ಖಾಲಿ ಇವೆ.

ವಿದ್ಯಾರ್ಹತೆ: ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್)ಗೆ ಸಿವಿಲ್​​ನಲ್ಲಿ ಬಿಇ/ಬಿ.ಟೆಕ್ ಮತ್ತು ಫಸ್ಟ್ ಡಿವಿಶನ್ ಅಕೌಂಟ್ಸ್​ ಅಸಿಸ್ಟೆಂಟ್(ಗ್ರೂಪ್-C)ಗೆ ಬಿ.ಕಾಂ ಪೂರ್ಣಗೊಳಿಸಿರಬೇಕು.

ಇದನ್ನೂ ಓದಿ: CAA: ಮೋದಿ ಸರ್ಕಾರದಿಂದ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ: ‘ಲೋಕ’ ಚುನಾವಣೆಗೂ ಮುನ್ನ ಬ್ರಹ್ಮಾಸ್ತ್ರ

ವಯೋಮಿತಿ: ಕರ್ನಾಟಕ ನಗರ ನೀರು ಸರಬರಾಜು & ಒಳಚರಂಡಿ ಮಂಡಳಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಮಾರ್ಚ್​ 10, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ: SC/ST/ಪ್ರವರ್ಗ-I ಅಭ್ಯರ್ಥಿಗಳಿಗೆ 5 ವರ್ಷಗಳು ಮತ್ತು ಪ್ರವರ್ಗ-2A/2B/3A/3B ಅಭ್ಯರ್ಥಿಗಳಿಗೆ 3 ವರ್ಷಗಳು

ಅರ್ಜಿ ಶುಲ್ಕ: SC/ST/ಪ್ರವರ್ಗ-I/ಮಾಜಿ ಸೈನಿಕರು/ಮಾನಸಿಕ ವಿಕಲಚೇತನ ಅಭ್ಯರ್ಥಿಗಳಿಗೆ 500 ರೂ., ಸಾಮಾನ್ಯ/ಪ್ರವರ್ಗ-2A/2B/3A/3B ಅಭ್ಯರ್ಥಿಗಳಿಗೆ 750 ರೂ. ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿರುವುದಿಲ್ಲ. ಆನ್‌ಲೈನ್ ಮೂಲಕವಷ್ಟೇ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಉದ್ಯೋಗದ ಸ್ಥಳ: ಕರ್ನಾಟಕ

ವೇತನ: ಅಸಿಸ್ಟೆಂಟ್ ಎಂಜಿನಿಯರ್(ಸಿವಿಲ್)ಗೆ ಮಾಸಿಕ ₹43,100-83,900 ಮತ್ತು ಫಸ್ಟ್ ಡಿವಿಶನ್ ಅಕೌಂಟ್ಸ್​ ಅಸಿಸ್ಟೆಂಟ್(ಗ್ರೂಪ್-C)ಗೆ ಮಾಸಿಕ ₹27,650-52,650

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಇದನ್ನೂ ಓದಿ: Lok Sabha Elections 2024: NDA 400 ಅಂಕ ತಲುಪುವುದು ಕಷ್ಟಸಾಧ್ಯ, ಪ್ರತಿಪಕ್ಷಗಳಿಗೆ ಎಷ್ಟು ಸ್ಥಾನ? ಇಲ್ಲಿದೆ ಶಾಕಿಂಗ್ ಸಮೀಕ್ಷೆ!

ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳು ಈ ಲಿಂಕ್‌ https://cetonline.karnataka.gov.in/kea/ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು. ಇದೇ ಮಾರ್ಚ್ 14 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News