ನವದೆಹಲಿ: ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ಮತ್ತೆ ಅಧಿಕಾರಕ್ಕೆ ಬಂದರೆ ಶಿವಸೇನೆ ಮುಖ್ಯಸ್ಥ ಉದವ್ ಠಾಕ್ರೆ ಅವರ ಪುತ್ರ ಆದಿತ್ಯ ಠಾಕ್ರೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವ ಸಾಧ್ಯತೆ ಇದೆ.
ಶಿವಸೇನಾ ಬಿಜೆಪಿಯೊಂದಿಗೆ ಮೈತ್ರಿ ಅನಿಶ್ಚಿತತೆಯ ಮಧ್ಯೆ ಈ ಬೆಳವಣಿಗೆ ಸಂಭವಿಸಿದೆ, ಆದರೆ ಮೂಲಗಳು ಹೇಳುವಂತೆ 'ಮೈತ್ರಿ ಮುಂದುವರೆಯಲಿದೆ ಎನ್ನಲಾಗಿದೆ. ಆದಿತ್ಯ ಠಾಕ್ರೆ ಶಿವಸೇನೆ ಸಂಸ್ಥಾಪಕ ಬಾಳ್ ಠಾಕ್ರೆ ಅವರ ಮೊಮ್ಮಗ, ಇದೇ ಮೊದಲ ಬಾರಿಗೆ ಅವರು ಚುನಾವಣಾ ರಾಜಕಾರಣಕ್ಕೆ ಪ್ರವೇಶಿಸಿದ್ದಾರೆ. 2019 ರ ಲೋಕಸಭಾ ಚುನಾವಣೆಯಲ್ಲಿ ಯಶಸ್ವಿಯಾಗಿ ಸ್ಪರ್ಧಿಸಿದ್ದ ಎಂಎನ್ಎಸ್ ಸಂಸ್ಥಾಪಕ ರಾಜ್ ಠಾಕ್ರೆ ಅವರ ಸೋದರ ಸಂಬಂಧಿ ಜೀತೆಂದ್ರ ಠಾಕ್ರೆ ಅವರ ಪತ್ನಿ ಶಾಲಿನಿ ಠಾಕ್ರೆ ಅವರ ನಂತರ ಚುನಾವಣಾ ಕಣಕ್ಕೆ ಪ್ರವೇಶಿಸಿದ ಮೊದಲ ಸದಸ್ಯರಾಗಲಿದ್ದಾರೆ.
ಇತ್ತೀಚೆಗೆ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಆದಿತ್ಯ ಠಾಕ್ರೆಗೆ ಉಪ ಮುಖ್ಯಮಂತ್ರಿ ಹುದ್ದೆಯನ್ನು ನೀಡಲು ಬಿಜೆಪಿ ಸಿದ್ಧವಾಗಿದೆ ಮತ್ತು ಅವರನ್ನು ಸರ್ಕಾರದಲ್ಲಿ ಹೊಂದಲು ಸಂತೋಷವಾಗುತ್ತದೆ ಎಂದು ಹೇಳಿದ್ದರು. 288 ಸದಸ್ಯರ ಮಹಾರಾಷ್ಟ್ರ ವಿಧಾನಸಭೆ ಅಕ್ಟೋಬರ್ 21 ರಂದು ಚುನಾವಣೆಗೆ ಹೋಗಲಿದ್ದು, ಅಕ್ಟೋಬರ್ 24 ರಂದು ಫಲಿತಾಂಶ ಪ್ರಕಟವಾಗಲಿದೆ.