Benefits Of Flaxseeds For Hair: ಅಗಸೆ ಬಿಜಾವು ಹಲವು ಪೋಷಕಾಂಶಗಳಲ್ಲಿ ಸಮೃದ್ಧವಾಗಿದ್ದು ಇದು ಕೂದಲಿನ ಹಲವು ಸಮಸ್ಯೆಗಳಿಗೆ ವರದಾನವಿದ್ದಂತೆ ಎಂದು ಹೇಳಲಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಪೋಷಕಾಂಶಗಳಿಂದ ಸಮೃದ್ಧವಾಗಿರುವ ಅಗಸೆ ಬೀಜಗಳು ಉತ್ತಮ ಆರೋಗ್ಯವನ್ನು ಉತ್ತೇಜಿಸುತ್ತದೆ. ಆರೋಗ್ಯಕರ ಚರ್ಮ, ಮಹಿಳೆಯರು ಮತ್ತು ಪುರುಷರ ಆರೋಗ್ಯಕ್ಕೆ ವರದಾನದಂತಿರುವ ಅಗಸೆಬೀಜಗಳನ್ನು ಸಾಮಾನ್ಯವಾಗಿ ತೂಕ ಇಳಿಕೆಗಾಗಿ ಹೆಚ್ಚಾಗಿ ಬಳಸಲಾಗುತ್ತದೆ. ಅಗಸೆ ಬೀಜಗಳು ಕೂದಲು ಉದುರುವಿಕೆ ಸೇರಿದಂತೆ ಕೂದಲಿನ ಹಲವು ಸಮಸ್ಯೆಗಳಿಗೆ ಪರಿಹಾರವನ್ನು ನೀಡಬಲ್ಲದು. ತಜ್ಞರ ಪ್ರಕಾರ, ಅಗಸೆ ಬೀಜದ ಬಳಕೆಯಿಂದ ಕೂದಲು ದಟ್ಟವಾಗಿ, ಉದ್ದವಾಗಿ ಬೆಳೆಯುತ್ತದೆ ಎಂದು ಹೇಳಲಾಗುತ್ತದೆ. ಹಾಗಿದ್ದರೆ, ಕೂದಲಿನ ಆರೈಕೆಯಲ್ಲಿ ಅಗಸೆಬೀಜ ಹೇಗೆ ಪ್ರಯೋಜನಕಾರಿ ಆಗಿದೆ ಎಂದು ತಿಳಿಯೋಣ...
ಅಗಸೆ ಬೀಜಗಳಲ್ಲಿ ಕೂದಲ ಬೆಳವಣಿಗೆಗೆ ಸಹಕಾರಿಯಾಗಿರುವ ವಿಟಮಿನ್ ಇ ಹೇರಳವಾಗಿ ಕಂಡು ಬರುತ್ತದೆ. ಹಾಗಾಗಿ, ಕೂದಲು ಉದುರುವಿಕೆ ಸಮಸ್ಯೆಯಿಂದ ಪರಿಹಾರ ಪಡೆಯಲು ಅಗಸೆ ಬೀಜ ರಾಮಬಾಣದಂತೆ ಕಾರ್ಯನಿರ್ವಹಿಸುತ್ತದೆ.
ಅಗಸೆ ಬೀಜಗಳಲ್ಲಿ ಉತ್ತಮ ಪ್ರಮಾಣದ ಪ್ರೊಟೀನ್ ಮತ್ತು ಸೆಲೆನಿಯಮ್ ಕಂಡು ಬರುತ್ತದೆ. ಇದು ಕೂದಲಿನ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹಾಗಾಗಿ, ಅಗಸೆ ಬೀಜಗಳ ಬಳಕೆಯು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ.
ಅಗಸೆ ಬೀಜಗಳ ಎಣ್ಣೆಯೂ ಉರಿಯೂತದ ಅಂಶಗಳನ್ನು ಒಳಗೊಂಡಿದ್ದು ಇದು ಬ್ಯಾಕ್ಟೀರಿಯಾ ವಿರುದ್ಧ ಹೋರಾಡುವ ಸಾಮರ್ಥ್ಯವನ್ನು ಹೊಂದಿದೆ. ಇದರ ಬಳಕೆಯಿಂದ ತಲೆಹೊಟ್ಟಿನ ಸಮಸ್ಯೆಯಿಂದ ಸುಲಭ ಪರಿಹಾರ ಪಡೆಯಬಹುದು.
ಅಗಸೆ ಬೀಜಗಳಲ್ಲಿ ಆಲ್ಪಾ-ಲಿನೋಲೆನಿಕ್ ಆಮ್ಲ ಹೇರಳವಾಗಿ ಕಂಡು ಬರುತ್ತದೆ. ಮಾತ್ರವಲ್ಲ ಇದರಲ್ಲಿ ಒಮೆಗಾ-3 ಕೊಬ್ಬಿನಾಂಶವೂ ಕಂಡು ಬರುವುದರಿಂದ ಅಗಸೆ ಬೀಜಗಳ ಬಳಕೆಯಿಂದ ಉದ್ದವಾದ ಬಲವಾದ ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.