ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಹರಿಯಾಣ ಕಾಂಗ್ರೆಸ್ ಮಾಜಿ ಮುಖ್ಯಸ್ಥ ಅಶೋಕ್ ತನ್ವರ್

ಟಿಕೆಟ್ ವಿತರಣೆಯಲ್ಲಿನ ಅಕ್ರಮಗಳ ಆರೋಪದ ಮೇಲೆ ಸೋನಿಯಾ ಗಾಂಧಿಯವರ ನಿವಾಸದ ಹೊರಗೆ ಪ್ರತಿಭಟನೆ ನಡೆಸಿದ ಕೆಲ ದಿನಗಳ ನಂತರ, ಹರಿಯಾಣ ಕಾಂಗ್ರೆಸ್ ಮಾಜಿ ಮುಖ್ಯಸ್ಥ ಅಶೋಕ್ ತನ್ವರ್ ಶನಿವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

Last Updated : Oct 5, 2019, 02:08 PM IST
ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಹರಿಯಾಣ ಕಾಂಗ್ರೆಸ್ ಮಾಜಿ ಮುಖ್ಯಸ್ಥ ಅಶೋಕ್ ತನ್ವರ್ title=
Photo courtesy: ANI

ನವದೆಹಲಿ: ಟಿಕೆಟ್ ವಿತರಣೆಯಲ್ಲಿನ ಅಕ್ರಮಗಳ ಆರೋಪದ ಮೇಲೆ ಸೋನಿಯಾ ಗಾಂಧಿಯವರ ನಿವಾಸದ ಹೊರಗೆ ಪ್ರತಿಭಟನೆ ನಡೆಸಿದ ಕೆಲ ದಿನಗಳ ನಂತರ, ಹರಿಯಾಣ ಕಾಂಗ್ರೆಸ್ ಮಾಜಿ ಮುಖ್ಯಸ್ಥ ಅಶೋಕ್ ತನ್ವರ್ ಶನಿವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ತನ್ವಾರ್ ಗುರುವಾರದಂದು ಪಕ್ಷದ ಎಲ್ಲಾ ಚುನಾವಣಾ ಸಮಿತಿಗಳಿಗೆ ರಾಜೀನಾಮೆ ನೀಡಿದ ನಂತರ ಪಕ್ಷದ ಸಾಮಾನ್ಯ  ಕಾರ್ಯಕರ್ತರಾಗಿ ಕೆಲಸ ಮಾಡುವುದನ್ನು ಮುಂದುವರಿಸುವುದಾಗಿ ಹೇಳಿದದ್ದರು, ಇದಾದ ನಂತರ ಈ ಬೆಳವಣಿಗೆ ಸಂಭವಿಸಿದೆ. ಹರಿಯಾಣದಲ್ಲಿ ಕಾಂಗ್ರೆಸ್ ಹೂಡಾ ಕಾಂಗ್ರೆಸ್ ಆಗಿ ಮಾರ್ಪಟ್ಟಿದೆ, ಕಳೆದ ಐದು ವರ್ಷಗಳಲ್ಲಿ ಪಕ್ಷದ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡಿದವರಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ ಎಂದು ಅವರು ಆರೋಪಿಸಿದರು.

ಇತ್ತೀಚಿಗಷ್ಟೇ ತನ್ವಾರ್ ಮತ್ತು ಅವರ ಬೆಂಬಲಿಗರು ಸೋನಿಯಾ ಗಾಂಧಿಯವರ 10 ಜನಪಥ್ ನಿವಾಸದ ಹೊರಗೆ ಪ್ರತಿಭಟನೆ ನಡೆಸಿ, ಹರಿಯಾಣದಲ್ಲಿ ವಿಧಾನಸಭಾ ಚುನಾವಣೆಗೆ ಟಿಕೆಟ್ ವಿತರಣೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದರು. 'ನಾನು ವರ್ಷಗಳಿಂದ ಶ್ರಮಿಸಿದ್ದೇನೆ. 15 ದಿನಗಳ ಹಿಂದೆ ಪಕ್ಷಕ್ಕೆ ಸೇರಿದ ಜನರಿಗೆ ಪಕ್ಷದ ಟಿಕೆಟ್ ನೀಡಲಾಗುತ್ತಿದೆ ಎಂದು ಆರೋಪಿಸಿದರು. 
 

Trending News