Lok Sabha Election 2024: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಲೋಕಸಭಾ ಟಿಕೆಟ್ ತಪ್ಪಿಸುವ ಕುತಂತ್ರ ನಡೆದಿದೆ. ಒಂದು ವೇಳೆ ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿ ಕ್ಷೇತ್ರದ ಟಿಕೆಟ್ ತಪ್ಪಿದ್ದೇ ಆದರೇ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಹುಬ್ಬಳ್ಳಿಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಎಚ್ಚರಿಕೆ ನೀಡಿದೆ.
ಹುಬ್ಬಳ್ಳಿಯಲ್ಲಿಂದು ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಉಪಾಧ್ಯಕ್ಷ ಪ್ರೋ ವಿ.ಸಿ.ಸವದಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪಕ್ಷವನ್ನ ಕಟ್ಟಿ ಬೆಳೆಸಿದ್ದಾರೆ. ಈ ಹಿಂದೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ತಪ್ಪಿಸುವ ಹುನ್ನಾರ ನಡೆದಿತ್ತು, ಇದೀಗ ಇದು ಮತ್ತೆ ಮುಂದುವರೆಯುತ್ತಿದೆ ಎಂದಿದ್ದಾರೆ.
ಇದನ್ನೂ ಓದಿ- ಚುನಾವಣಾ ಬಾಂಡ್ನಿಂದ ಮೋದಿ ಮುಖವಾಡ ಕಳಚಿ ಬಿದ್ದಿದೆ: ಸಚಿವ ಎಂ.ಬಿ ಪಾಟೀಲ
ಪ್ರಸ್ತುತ, ಜಗದೀಶ ಶೆಟ್ಟರ್ ಅವರು ಧಾರವಾಡ, ಹಾವೇರಿ ಲೋಕಸಭಾ ಕ್ಷೇತ್ರಗಳ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ ಎರಡೂ ಕ್ಷೇತ್ರಗಳಲ್ಲೂ ಅವರಿಗೆ ಟಿಕೆಟ್ ನೀಡಲಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೆ, ಈಗ ಅವರ ಹೆಸರು ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ಆದ್ರೆ ಶೆಟ್ಟರ್ಗೆ ಆಗದ ಕೆಲವರು ಕುತಂತ್ರ ಮಾಡಿ ವ್ಯವಸ್ಥಿತವಾಗಿ ಅವರಿಗೆ ಟಿಕೆಟ್ ತಪ್ಪಿಸುವ ಹುನ್ನಾರ ನಡೆದಿದೆ ಎಂದವರು ಆರೋಪಿಸಿದರು.
ಇದನ್ನೂ ಓದಿ- Lok Sabha Election 2024: ಶಿವಮೊಗ್ಗದಲ್ಲಿ ಇಂದು ಪ್ರಧಾನಿ ಮೋದಿ ಅಬ್ಬರ
ಇದೇ ವೇಳೆ, ಜಗದೀಶ್ ಶೆಟ್ಟರ್ ಅವರಿಗೆ ಲೋಕಸಭಾ ಚುನಾವಣೆ ಟಿಕೆಟ್ ತಪ್ಪಿಸಲು ಪ್ರಯತ್ನಿಸುತ್ತಿರುವವರ ಕುತಂತ್ರಕ್ಕೆ ಬಿಜೆಪಿ ವರಿಷ್ಠರು ಒಳಗಾದಗೆ ಶೆಟ್ಟರ್ಗೆ ಟಿಕೆಟ್ ನೀಡಬೇಕು. ಟಿಕೆಟ್ ನೀಡದೆ ಹೋದ್ರೆ ಬೀದಿಗಿಳಿದು ಉಗ್ರವಾದ ಹೋರಾಟ ಮಾಡಿ, ಚುನಾವಣೆಯಲ್ಲಿ ನಮ್ಮ ಶಕ್ತಿ ತೋರಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಶೇಖರ ಕವಳಿ, ರಾಜಶೇಖರ ಉಪ್ಪಿನ, ಪರಮೇಶ್ವರ ನಿಗದಿ ಮುಂತಾದವರು ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.