ಬೆಂಗಳೂರು: ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರೇ, ಕಾಂಗ್ರೆಸ್ ಪಕ್ಷದಲ್ಲಿ ಸೂಪರ್ ಸಿಎಂ, ಶ್ಯಾಡೋ ಸಿಎಂ ಗಳಿದ್ದಾರೆ ಎಂದು ಶಿವಮೊಗ್ಗದ ನಿಮ್ಮ ಪಕ್ಷದ ಸಭೆಯಲ್ಲಿ ನೀವು ಗೇಲಿ ಮಾಡಿದ್ದೀರಿ! ನಮ್ಮಲ್ಲಿ ಸೂಪರ್ರೂ ಇಲ್ಲ, ಶ್ಯಾಡೋನೂ ಇಲ್ಲ, ಇರುವುದು ಒಬ್ಬರೇ ಸಿಎಂ ಅದು ‘‘ಸ್ಟ್ರಾಂಗ್ ಸಿಎಂ’’, ನಿಮ್ಮ ಹಾಗೆ ನಾನು ‘‘ವೀಕ್ ಪಿಎಂ’’ ಅಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಮೋದಿಯವರೇ ನಿಮ್ಮನ್ನು ನೀವು 56 ಇಂಚಿನ ಎದೆಯುಳ್ಳವನು ಎಂದು ಬಣ್ಣಿಸಿಕೊಳ್ಳುತ್ತೀರಿ, ನಿಮ್ಮ ಅಭಿಮಾನಿಗಳು ನಿಮ್ಮನ್ನು ವಿಶ್ವಗುರು ಎಂದು ಕೊಂಡಾಡುತ್ತಾರೆ. ಆದರೆ ನೀವೊಬ್ಬ ‘‘ವೀಕ್ ಪಿಎಂ’’ ಎಂದು ಮತ್ತೆ ಮತ್ತೆ ತೋರಿಸಿಕೊಡುತ್ತಿದ್ದೀರಿ. ಬಿ.ಎಸ್ ಯಡಿಯೂರಪ್ಪನವರು ಒಂದು ಕಾಲದಲ್ಲಿ ನಿಮ್ಮ ನಾಯಕತ್ವದ ವಿರುದ್ಧವೇ ಬಂಡಾಯ ಎದ್ದವರು, ನಿಮ್ಮನ್ನು ಹೀನಾಯವಾಗಿ ನಿಂದಿಸಿದವರು. ಅಂತಹವರ ಕಾಲಿಗೆ ಬಿದ್ದು ಮತ್ತೆ ಪಕ್ಷಕ್ಕೆ ಕರೆತಂದು ಮೆರವಣಿಗೆ ಮಾಡುವ ಮೂಲಕ ನೀವೊಬ್ಬ ‘‘ವೀಕ್ ಪಿಎಂ’’ ಎಂದು ನೀವೇ ತೋರಿಸಿಕೊಟ್ಟಂತಾಗಲಿಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ- ಬಿಜೆಪಿ ಅಭ್ಯರ್ಥಿ ಬಾಲರಾಜ್ ಗೆ ಬೆಂಬಲ ಘೋಷಿಸಿದ ಸಂಸದ ಶ್ರೀನಿವಾಸಪ್ರಸಾದ ಅಳಿಯ
ಕರ್ನಾಟಕದಲ್ಲಿ ನಿಮ್ಮ ನಾಯಕತ್ವದ ವಿರುದ್ಧ ಅರ್ಧ ಡಜನ್ ನಾಯಕರು ಬಂಡೆದಿದ್ದಾರೆ. ಟಿಕೆಟ್ ಪಡೆಯಲು ಅಸಮರ್ಥರಾದ ನಿಮ್ಮ ಪಕ್ಷದ ನಾಯಕರು ಹಾದಿ ಬೀದಿಲಿ ಹೊಡೆದಾಡಿಕೊಳ್ಳುತ್ತಿದ್ದಾರೆ, ಪರಸ್ಪರ ಕೆಸರೆರಚಾಟ ನಡೆಸುತ್ತಿದ್ದಾರೆ. ನಿಮ್ಮ ಯಾವ ಮನವಿಗೂ ಅವರು ಕಿವಿಕೊಟ್ಟಿಲ್ಲ. ಇವರಲ್ಲಿ ಕೆಲವರು ನಮ್ಮನ್ನೂ ಸಂಪರ್ಕಿಸುತ್ತಿದ್ದಾರೆ. ಶಿಸ್ತಿನ ಪಕ್ಷದಲ್ಲಿ ಇದೆಂತಹ ಅಶಿಸ್ತಿನ ತಾಂಡವ. ಇದಕ್ಕೆಲ್ಲ ಕಾರಣ ನೀವೊಬ್ಬ ‘‘ವೀಕ್ ಪಿಎಂ’’ ಆಗಿರುವುದಲ್ಲವೇ? ಎಂದು ಅವರು ಕುಟುಕಿದರು.
ಶಿವಮೊಗ್ಗದಲ್ಲಿ ನೀವು ಪಕ್ಷದ ಪ್ರಚಾರ ಸಭೆ ನಡೆಸುತ್ತಿದ್ದಾಗ ಬಂಡುಕೋರ ನಾಯಕ ಈಶ್ವರಪ್ಪನವರು ಕೂಗಳತೆ ದೂರದ ತಮ್ಮ ಮನೆಯಲ್ಲಿದ್ದರೂ ಕ್ಯಾರೇ ಅನ್ನದೆ ಸಭೆಗೆ ಗೈರು ಹಾಜರಾಗಿದ್ದರು. ಇಷ್ಟು ಮಾತ್ರವಲ್ಲ ನಿರಂತರವಾಗಿ ಬಿಜೆಪಿ ನಾಯಕತ್ವದ ವಿರುದ್ಧ ಕಿಡಿಕಾರುತ್ತಿದ್ದರು. ಅವರ ವಿರುದ್ಧ ಕ್ರಮಕೈಗೊಳ್ಳಲಾಗದ ನೀವು ‘‘ವೀಕ್ ಪಿಎಂ’’ ಅಲ್ಲದೆ ಮತ್ತೇನು? ಎಂದು ಪ್ರಶ್ನಿಸಿದರು.
ಇದನ್ನೂ ಓದಿ- ಬಿಜೆಪಿ- ಜೆಡಿಎಸ್ ಮೈತ್ರಿ ಸುಸೂತ್ರವಾಗಿ ಮುಂದುವರೆಯಲಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ
ನಮ್ಮದು ಆಂತರಿಕ ಪ್ರಜಾಪ್ರಭುತ್ವ ಇರುವ ಪಕ್ಷ, ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರಾದವರು ಹಲವು ಮಂದಿ ಇದ್ದಾರೆ. ನಿಮ್ಮ ಪಕ್ಷದ ಕತೆ ಏನು? ವಿಶ್ವದಲ್ಲಿಯೇ ಅತ್ಯಂತ ಹೆಚ್ಚು ಸದಸ್ಯರನ್ನು ಹೊಂದಿದ್ದೇವೆ ಎಂದು ಕೊಚ್ಚಿಕೊಳ್ಳುತ್ತಿರುವ ನಿಮ್ಮ ಪಕ್ಷದಲ್ಲಿ ಪಿಎಂ ಆಗುವ ಅರ್ಹತೆ ಇರುವ ಒಬ್ಬ ನಾಯಕನೂ ಇಲ್ಲವಲ್ಲಾ? ಅಂತಹ ನಾಯಕರೇ ಇಲ್ವಾ? ಕುರ್ಚಿ ಕಳೆದುಕೊಳ್ಳುವ ಭಯದಿಂದ ಅಂತಹ ನಾಯಕರನ್ನು ಬೆಳೆಯಲು ನೀವೇ ಬಿಡುತ್ತಿಲ್ವಾ? ಎಂದು ತರಾಟೆಗೆ ತಗೆದುಕೊಂಡರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.