ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಹಾಗೂ ಮಾಜಿ ಸಚಿವ ಜಾಲಪ್ಪ ಅವರ ಮನೆ ಹಾಗೂ ಆಸ್ತಿ ಮೇಲಿನ ಐಟಿ ದಾಳಿ ರಾಜಕೀಯ ಪ್ರೇರಿತ ಎಂದು ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, "ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿ ಐಟಿ ಇಲಾಖೆ ನಡೆಸುತ್ತಿರುವ ದಾಳಿಗಳ ಹಿಂದೆ ರಾಜಕೀಯ ದುರುದ್ದೇಶ ಇದೆ.
ನಮ್ಮ ಪಕ್ಷವನ್ನು ರಾಜಕೀಯವಾಗಿ ಎದುರಿಸಲಾಗದೆ ನರೇಂದ್ರ ಮೋದಿ ಸರ್ಕಾರ ಈ ರೀತಿ ಅಧಿಕಾರ ದುರ್ಬಳಕೆ ಮಾಡಿಕೊಂಡು ನಮ್ಮನ್ನು ದಮನಿಸಲು ಹೊರಟಿದೆ. ಇದಕ್ಕೆ ನಾವು
ಜಗ್ಗುವುದೂ ಇಲ್ಲ, ಬಗ್ಗುವುದೂ ಇಲ್ಲ" ಎಂದಿದ್ದಾರೆ.
ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿ ಐಟಿ ಇಲಾಖೆ ನಡೆಸುತ್ತಿರುವ ದಾಳಿಗಳ ಹಿಂದೆ ರಾಜಕೀಯ ದುರುದ್ದೇಶ ಇದೆ.
ನಮ್ಮ ಪಕ್ಷವನ್ನು ರಾಜಕೀಯವಾಗಿ ಎದುರಿಸಲಾಗದೆ @narendramodi ಸರ್ಕಾರ ಈ ರೀತಿ ಅಧಿಕಾರ ದುರ್ಬಳಕೆ ಮಾಡಿಕೊಂಡು ನಮ್ಮನ್ನು ದಮನಿಸಲು ಹೊರಟಿದೆ. ಇದಕ್ಕೆ ನಾವು
ಜಗ್ಗುವುದಿಲ್ಲ,
ಬಗ್ಗುವುದಿಲ್ಲ.— Siddaramaiah (@siddaramaiah) October 10, 2019
ಇಂದು ಬೆಳಿಗ್ಗೆ ಮಾಜಿ ಡಿಸಿಎಂ ಪರಮೇಶ್ವರ್ ಹಾಗೂ ಮಾಜಿ ಸಚಿವ ಜಾಲಪ್ಪ ಅವರ ಮನೆ ಹಾಗೂ ಶಿಕ್ಷಣ ಸಂಸ್ಥೆಗಳ ಮೇಲೆ ಅದ್ದಾಯ ತೆರಿಗೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದೊಂದು ರಾಜಕೀಯ ಪಿತೂರಿ ಎಂದಿದ್ದಾರೆ.