Watermelon in the Fridge : ಬೇಸಿಗೆ ಬಿಸಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.. ಈ ಸಮಯದಲ್ಲಿ ಹೆಚ್ಚಿನ ಜನರು ಕಲ್ಲಂಡಗಿ ಹಣ್ಣನ್ನು ತಿನ್ನಲು ಬಯಸುತ್ತಾರೆ. ಇದು ದೇಹವನ್ನು ನಿರ್ಜಲೀಕರಣ ಸಮಸ್ಯೆಯಿಂದ ಕಾಪಾಡುತ್ತದೆ.. ಅದರೆ ಕೆಲವು ಕಲ್ಲಂಗಡಿ ಹಣ್ಣನ್ನು ಕಟ್ ಮಾಡಿ ಫ್ರಿಡ್ಜ್ನಲ್ಲಿ ಇಟ್ಟು ತಿನ್ನುತ್ತಾರೆ.. ಈ ವಿಧಾನ ಆರೋಗ್ಯಕ್ಕೆ ಉತ್ತಮವೇ..? ಬನ್ನಿ ತಿಳಿಯೋಣ..
ಹೌದು.. ಬೇಸಿಗೆಯಲ್ಲಿ ನಮ್ಮನ್ನು ದೇಹವನ್ನು ತೇವಾಂಶದಿಂದ ಇಟ್ಟುಕೊಳ್ಳುವುದು ಅತ್ಯಗತ್ಯ. ಅದಕ್ಕಾಗಿ ಹೆಚ್ಚು ನೀರು ಕುಡಿಯುವುದು ಹೈಡ್ರೇಟೆಡ್ ಆಗಿರಲು ಉತ್ತಮ ಮಾರ್ಗ. ಅಲ್ಲದೆ, ಹಣ್ಣುಗಳ ಜ್ಯೂಸ್ ಕುಡಿಯುವುದರಿಂದ ದೇಹವನ್ನು ತಂಪಾಗಿಸಲು ಮತ್ತು ರಿಫ್ರೆಶ್ ಮಾಡಲು ಸಹಾಯವಾಗುತ್ತದೆ. ಹಣ್ಣುಗಳ ಪೈಕಿ ಕಲ್ಲಂಗಡಿ ಹಣ್ಣು ಉತ್ತಮ.
ಇದನ್ನೂ ಓದಿ:ಈ ಕೆಂಪು ಹೂವು ಕೂದಲಿನಿಂದ ಹಿಡಿದು ನಿಮ್ಮ ಆರೋಗ್ಯವನ್ನು ಗಟ್ಟಿ ಮಾಡುತ್ತೆ..!
ವಿಶೇಷವಾಗಿ ಕಲ್ಲಂಗಡಿ ಹಣ್ಣು ದೇಹಕ್ಕೆ ಅಗತ್ಯವಾದ ಪೋಷಕಾಂಶಗಳನ್ನು ಒದಗಿಸುತ್ತದೆ. ಈ ಹಣ್ಣು ದೇಹವನ್ನು ತಂಪಾಗಿಸುವ ಗುಣಗಳನ್ನು ಹೊಂದಿದೆ. 92 ರಷ್ಟು ನೀರಿನಿಂದ ತುಂಬಿರುವ ಕಲ್ಲಂಗಡಿ ನಮ್ಮ ದೇಹಕ್ಕೆ ಅಗತ್ಯವಾದ ನೀರಿನ ನಷ್ಟವನ್ನು ತುಂಬುತ್ತದೆ ಮತ್ತು ನಮ್ಮನ್ನು ಹೈಡ್ರೀಕರಿಸುತ್ತದೆ. ಇದರಿಂದಾಗಿ ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣಿಗೆ ಬೇಡಿಕೆ ಹೆಚ್ಚಾಗಿರುತ್ತದೆ.
ಕಲ್ಲಂಗಡಿ ಲೈಕೋಪೀನ್, ಆಂಟಿಆಕ್ಸಿಡೆಂಟ್, ವಿಟಮಿನ್ ಎ, ವಿಟಮಿನ್ ಸಿ, ಪೊಟ್ಯಾಸಿಯಮ್ ಮತ್ತು ಅಮೈನೋ ಆಮ್ಲಗಳಿಂದ ಸಮೃದ್ಧವಾಗಿವೆ. ಇದು ಕಡಿಮೆ ಕ್ಯಾಲೋರಿಗಳನ್ನು ಹೊಂದಿದ್ದು, ದೇಹದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ತೂಕ ನಷ್ಟಕ್ಕೂ ಒಳ್ಳಯದು.
ಇದನ್ನೂ ಓದಿ:ಸೌತೆಕಾಯಿ ಜ್ಯೂಸ್ ಕುಡಿಯುವುದರಿಂದ ಇಷ್ಟೆಲ್ಲಾ ಪ್ರಯೋಜನಗಳಿವೆ
ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿರುವವರಿಗೆ ಕಲ್ಲಂಗಡಿ ತುಂಬಾ ಉಪಯುಕ್ತವಾಗಿದೆ. ಇದರಲ್ಲಿ ಕ್ಯಾಲೋರಿ ತುಂಬಾ ಕಡಿಮೆ ಇರುವುದರಿಂದ ಈ ಹಣ್ಣನ್ನು ಸೇವಿಸುವುದರಿಂದ ನಮ್ಮ ಹೊಟ್ಟೆ ತುಂಬಾ ಹೊತ್ತು ತುಂಬಿರುತ್ತದೆ. ತಜ್ಞರ ಪ್ರಕಾರ, ಕಲ್ಲಂಗಡಿಗಳನ್ನು ರೆಫ್ರಿಜರೇಟರ್ನಲ್ಲಿ ಇಡಬಾರದು. ಹಾಗೆ ಮಾಡುವುದರಿಂದ ಹಣ್ಣಿನ ಪೌಷ್ಟಿಕಾಂಶದ ಮೌಲ್ಯವು ಕಡಿಮೆಯಾಗುತ್ತದೆ ಮತ್ತು ಬ್ಯಾಕ್ಟೀರಿಯಾದ ಸಂತಾನೋತ್ಪತ್ತಿಯ ಸ್ಥಳವಾಗುತ್ತದೆ ಎಂದು ಹೇಳಲಾಗುತ್ತದೆ..
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.