PM Kisan: ಪಿಎಂ ಕಿಸಾನ್ ಯೋಜನೆಯ ಪ್ರಯೋಜನೆಯಲ್ಲಿ ನೋಂದಾಯಿಸದ ರೈತರಿಗೆ ಇಲ್ಲಿದೆ ಹಂತ-ಹಂತದ ಪ್ರಕ್ರಿಯೆ

PM Kisan: ಕೇಂದ್ರ ಸರ್ಕಾರ ಪ್ರಧಾನ್ ಮಂತ್ರಿ ಕಿಸಾನ್ ಯೋಜನೆಯಡಿ ರೈತರಿಗೆ ವಾರ್ಷಿಕ 6,000 ರೋ. ಆರ್ಥಿಕ ನೆರವನ್ನು ನೀಡುತ್ತದೆ. ನೀವು ರೈತರಾಗಿದ್ದು, ಇನ್ನೂ ಕೂಡ ಈ ಯೋಜನೆಯ ಫಲಾನುಭವಿ ಆಗದಿದ್ದರೆ, ಈಗಲೇ ಇದರಲ್ಲಿ ನೋಂದಾಯಿಸಿಕೊಳ್ಳಿ. ಇದಕ್ಕಾಗಿ, ಇಲ್ಲಿದೆ ಸುಲಭ ಪ್ರಕ್ರಿಯೆ. 

Written by - Yashaswini V | Last Updated : Mar 26, 2024, 02:09 PM IST
  • ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಇದುವರೆಗೂ 16 ನೇ ಕಂತುಗಳನ್ನು ಬಿಡುಗಡೆ ಮಾಡಲಾಗಿದೆ.
  • ಈ ಯೋಜನೆಯಡಿ ಡಿಬಿಟಿ ಮೂಲಕ ರೈತರ ಖಾತೆಗೆ ನೇರವಾಗಿ ಹಣವನ್ನು ಕಳುಹಿಸಲಾಗುತ್ತದೆ.
  • ಪ್ರತಿ 4 ತಿಂಗಳ ಅಂತರದಲ್ಲಿ ತಲಾ 2,000 ರೂ.ಗಳಂತೆ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಕಳುಹಿಸಲಾಗುತ್ತದೆ.
PM Kisan: ಪಿಎಂ ಕಿಸಾನ್ ಯೋಜನೆಯ ಪ್ರಯೋಜನೆಯಲ್ಲಿ ನೋಂದಾಯಿಸದ ರೈತರಿಗೆ ಇಲ್ಲಿದೆ ಹಂತ-ಹಂತದ ಪ್ರಕ್ರಿಯೆ  title=

PM Kisan Scheme: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕೇಂದ್ರ ಸರ್ಕಾರವು ದೇಶದ ಕೋಟ್ಯಾಂತರ ರೈತರೈಗೆ ಪ್ರತಿ ವರ್ಷ  ₹ 6000 ಆರ್ಥಿಕ ನೆರವು ನೀಡುತ್ತದೆ. ವಾರ್ಷಿಕ ಮೂರು ಕಂತುಗಳಲ್ಲಿ ಎರಡು ಸಾವಿರ ರೂ.ಗಳಂತೆ ರೈತರ ಖಾತೆಗೆ ಹಣ ಜಮಾ ಮಾಡಲಾಗುತ್ತದೆ. ರೈತರು ಈ ಹಣವನ್ನು ತಮ್ಮ ಕೃಷಿ ವೆಚ್ಚಗಳಿಗಾಗಿ ವಿನಿಯೋಗಿಸಬಹುದು. 

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ (PM Kisan Samman Nidhi Scheme) ಇದುವರೆಗೂ 16 ನೇ ಕಂತುಗಳನ್ನು ಬಿಡುಗಡೆ ಮಾಡಲಾಗಿದೆ. ಈ ಯೋಜನೆಯಡಿ ಡಿಬಿಟಿ ಮೂಲಕ ರೈತರ ಖಾತೆಗೆ ನೇರವಾಗಿ ಹಣವನ್ನು ಕಳುಹಿಸಲಾಗುತ್ತದೆ. ಪ್ರತಿ 4 ತಿಂಗಳ ಅಂತರದಲ್ಲಿ ತಲಾ 2,000 ರೂ.ಗಳಂತೆ 3 ಕಂತುಗಳಲ್ಲಿ ರೈತರ ಖಾತೆಗಳಿಗೆ ಕಳುಹಿಸಲಾಗುತ್ತದೆ. 

ಇದನ್ನೂ ಓದಿ- ಕ್ರೆಡಿಟ್ ಕಾರ್ಡ್ ನಿಯಮಗಳಲ್ಲಿ ಆರ್‌ಬಿ‌ಐ ಮಹತ್ವದ ಬದಲಾವಣೆ, ಗ್ರಾಹಕರಿಗೆ ಬಂಪರ್ ಲಾಭ

ನೀವು ರೈತರಾಗಿದ್ದು, ಇನ್ನೂ ಕೂಡ ಈ ಯೋಜನೆಯ ಪ್ರಯೋಜನವನ್ನು ಪಡೆಯದಿದ್ದರೆ, ಇದರಲ್ಲಿ ನೋಂದಾಯಿಸಿಕೊಳ್ಳುವುದು ಬಹಳ ಮುಖ್ಯ. ಇದಕ್ಕಾಗಿ ಕೆಲವೇ ಕೆಲವು ಸುಲಭ ಹಂತಗಳನ್ನು ಅನುಸರಿಸಿದರೆ ಅಷ್ಟೇ ಸಾಕು. ಅವುಗಳೆಂದರೆ... 

ಇದನ್ನೂ ಓದಿ- EPFO: ಫಾರ್ಮ್ 10C, 10Dಯ ಪ್ರಯೋಜನಗಳೇನು? ಇಪಿಎಫ್ಒ ಸದಸ್ಯರು ಇದನ್ನು ತಿಳಿದಿರಲೇಬೇಕು!

ಪಿಎಂ ಕಿಸಾನ್ ಯೋಜನೆಯಡಿ ನೋಂದಾಯಿಸಿಕೊಳ್ಳಲು ಈ ಸುಲಭ ಹಂತಗಳನ್ನು ಅನುಸರಿಸಿ :- 
>> ಮೊದಲನೆಯದಾಗಿ, pmkisan.gov.in ನ ಪೋರ್ಟಲ್‌ನಲ್ಲಿ 'ಫಾರ್ಮರ್ಸ್ ಕಾರ್ನರ್' ಅನ್ನು ಕ್ಲಿಕ್ ಮಾಡಿ .
>> 'ಹೊಸ ರೈತ ನೋಂದಣಿ' ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
>>  ಇದರ ಬಳಿಕ ನಿಗದಿತ ಜಾಗದಲ್ಲಿ ಆಧಾರ್ ಮತ್ತು ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಮತ್ತು ರಾಜ್ಯವನ್ನು ಆಯ್ಕೆ ಮಾಡಿ.
>> ನಿಮ್ಮ ಮೊಬೈಲ್ ಸಂಖ್ಯೆಯಲ್ಲಿ ಸ್ವೀಕರಿಸುವ ಓಟಿಪಿ ಅನ್ನು ನಮೂದಿಸಿ ಮತ್ತು 'ನೋಂದಣಿಗಾಗಿ ಮುಂದುವರಿಯಿರಿ' ಆಯ್ಕೆಯನ್ನು ಆರಿಸಿ.
>> ಇದರಲ್ಲಿ ಕೇಳಲಾದ ಎಲ್ಲಾ ಅಗತ್ಯ ವಿವರಗಳನ್ನು ಭರ್ತಿ ಮಾಡಿ ಮತ್ತು ಆಧಾರ್ ದೃಢೀಕರಣ ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. 
>> ಮೊಬೈಲ್ ಸಂಖ್ಯೆಯಲ್ಲಿ ಸ್ವೀಕರಿಸಲಾದ ಒಟಿಪಿ ಅನ್ನು ನಮೂದಿಸಿ ಮತ್ತು ಜಮೀನಿಗೆ ಸಂಬಂಧಿಸಿದ ವಿವರಗಳು ಮತ್ತು ದಾಖಲೆಗಳನ್ನು ಅಪ್‌ಲೋಡ್ ಮಾಡಿ.
>> ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ, ನಿಮ್ಮ ನೋಂದಣಿ ಪೂರ್ಣಗೊಂಡ ಸಂದೇಶವು ಮೊಬೈಲ್ ಪರದೆಯಲ್ಲಿ ಗೋಚರಿಸುತ್ತದೆ. ನಂತರ ದಾಖಲೆಗಳ ಪರಿಶೀಲನೆ ಬಳಿಕ ಮುಂದಿನ ಕಂತಿನಿಂದ ನಿಮ್ಮ ಖಾತೆಗೂ ಹಣ ಜಮಾ ಆಗುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News