Ration Card updates: ಇವರು ಮಾತ್ರ ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಸಬಹುದು

Ration Card New Updates:ಇದುವರೆಗೆ 57,651 ಮತ್ತು ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ 744 ಕಾರ್ಡ್‌ಗಳನ್ನು ವಿತರಿಸಲಾಗಿದೆ. ಬಾಕಿ ಉಳಿದಿರುವ ಹೊಸ ಆದ್ಯತಾ ಪಡಿತರ ಚೀಟಿಗಳನ್ನು ಪರಿಶೀಲಿಸಿ ವಿಲೇವಾರಿ ಮಾಡುವಂತೆ ಜಂಟಿ/ಉಪ ನಿರ್ದೇಶಕರಿಗೆ ಸೂಚಿಸಲಾಗಿದೆ ಎಂದು ಸಚಿವ ಕೆ.ಎಚ್.ಮುನಿಯಪ್ಪ ಮಾಹಿತಿ ನೀಡಿದ್ದಾರೆ.

Written by - Puttaraj K Alur | Last Updated : Mar 27, 2024, 02:22 PM IST
  • ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವವರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು
  • ಈಗಾಗಲೇ ಪಡಿತರ ಚೀಟಿಯನ್ನು ಹೊಂದಿರಬಾರದು
  • ಹೊಸದಾಗಿ ಮದುವೆಯಾದ ದಂಪತಿಗಳು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಬಹುದು
Ration Card updates: ಇವರು ಮಾತ್ರ ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಸಬಹುದು title=
ಹೊಸ ಪಡಿತರ ಚೀಟಿಯ ಮಾಹಿತಿ

ಬೆಂಗಳೂರು: ಪಡಿತರ ಚೀಟಿಗೆ ಸಂಬಂಧಿಸಿದಂತೆ ಪ್ರತಿದಿನ ಹೊಸ ಹೊಸ ಮಾಹಿತಿಗಳು ಹೊರಬೀಳುತ್ತಿವೆ. ರಾಜ್ಯದ ಅನೇಕ ಜನರು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಮಾರ್ಚ್ 31ರೊಳಗಡೆ ಎಲ್ಲಾ ಅರ್ಜಿಯನ್ನು ಪರಿಶೀಲಿಸಿ ಏಪ್ರಿಲ್ 1ರಿಂದ ಹೊಸ ಪಡಿತರ ವಿತರಣೆ ಮಾಡಲಾಗುತ್ತದೆ ಎಂದು ರಾಜ್ಯ ಆಹಾರ ಇಲಾಖೆ ಮಾಹಿತಿ ನೀಡಿದೆ.

ಸದ್ಯ ಹೊಸ ಆದ್ಯತಾ ಪಡಿತರ ಚೀಟಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಈ ದಿನಾಂಕದಿಂದಲೇ ನೀವು ಹೊಸ ಆದ್ಯತಾ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು. ಹೊಸ ಆದ್ಯತಾ ಪಡಿತರ ಚೀಟಿಗಗೆ ಬಂದಿರುವ 2,95,986 ಅರ್ಜಿಗಳನ್ನು ಮಾರ್ಚ್ 31ರೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಇದುವರೆಗೆ 57,651 ಮತ್ತು ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ 744 ಕಾರ್ಡ್‌ಗಳನ್ನು ವಿತರಿಸಲಾಗಿದೆ. ಬಾಕಿ ಉಳಿದಿರುವ ಹೊಸ ಆದ್ಯತಾ ಪಡಿತರ ಚೀಟಿಗಳನ್ನು ಪರಿಶೀಲಿಸಿ ವಿಲೇವಾರಿ ಮಾಡುವಂತೆ ಜಂಟಿ/ಉಪ ನಿರ್ದೇಶಕರಿಗೆ ಸೂಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Gold And Silver Price: ಭಾರತದಲ್ಲಿ ಚಿನ್ನದ ದರ ಮತ್ತೆ ಹೆಚ್ಚಳ: ಬೆಳ್ಳಿಯ ಬೆಲೆ ಇಳಿಕೆ!

ಈ ಬಗ್ಗೆ ಮಾತನಾಡಿರುವ ಕೆ.ಎಚ್.ಮುನಿಯಪ್ಪ, ʼಹಿಂದಿನ ಸರ್ಕಾರದ ಅವಧಿಯಲ್ಲಿ ಈ ಅರ್ಜಿಗಳು ಸಲ್ಲಿಕೆಯಾಗಿದ್ದವು. ಚುನಾವಣೆ ಮತ್ತಿತರ ಕಾರಣಗಳಿಂದ ಈ ಪ್ರಕ್ರಿಯೆ ನಿಧಾನಗತಿಯಲ್ಲಿ ಸಾಗಿತ್ತು. ಅವುಗಳ ವಿಲೇವಾರಿ ಪ್ರಗತಿಯಲ್ಲಿದೆ. ಅವುಗಳನ್ನು ಮಾರ್ಚ್ 31ರೊಳಗೆ ವಿಲೇವಾರಿ ಮಾಡಲಿದ್ದು, ಏಪ್ರಿಲ್ 1ರಿಂದ ಹೊಸ ಅರ್ಜಿಗಳನ್ನು ಆಹ್ವಾನಿಸಲಾಗುವುದು ಎಂದು ಹೇಳಿದ್ದಾರೆ.

ಇವರು ಮಾತ್ರ ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಸಬಹುದು

  • ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
  • ಈಗಾಗಲೇ ಪಡಿತರ ಚೀಟಿಯನ್ನು ಹೊಂದಿರಬಾರದು.
  • ಹೊಸದಾಗಿ ಮದುವೆಯಾದ ದಂಪತಿಗಳು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಬಹುದು
  • ಕುಟುಂಬದ ಆದಾಯದ ಆಧಾರದ ಮೇಲೆ ಯಾವ ಪಡಿತರ ಚೀಟಿ ನೀಡಬೇಕು ಎನ್ನುವುದನ್ನು ನಿರ್ಧರಿಸಲಾಗುತ್ತದೆ.
  • ನೀವು https://ahara.kar.nic.inನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲೆಗಳು  

  • ಮತದಾರರ ಗುರುತಿನ ಚೀಟಿ
  • ಆಧಾರ್ ಕಾರ್ಡ್
  • ವಯಸ್ಸಿನ ಪ್ರಮಾಣಪತ್ರ
  • ಚಾಲನಾ ಪರವಾನಿಗೆ
  • ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ
  • ಮೊಬೈಲ್ ನಂ
  • ಸ್ವಯಂ ಘೋಷಿತ ಪ್ರಮಾಣಪತ್ರ

ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವವರು ಸರ್ಕಾರದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಗತ್ಯ ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ. 

ಇದನ್ನೂ ಓದಿ: ಕೆಲಸಕ್ಕೆ ರಾಜೀನಾಮೆ ನೀಡುವಾಗ ನೋಟಿಸ್ ಪೀರಿಯೇಡ್ ಪೂರೈಸುವುದು ನಿಜಕ್ಕೂ ಅಗತ್ಯವೇ? ಇಲ್ಲಿದೆ ನೋಡಿ ಸರಿಯಾದ ಉತ್ತರ !

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News