ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಸ್ಥಿರತೆ; ‌ಇಂದಿನ ದರ ಎಷ್ಟಿದೆ!

ಪೆಟ್ರೋಲ್-ಡೀಸೆಲ್ ಬೆಲೆಯ ದಾಖಲೆಯ ಮಟ್ಟ ತಲುಪಿದ ನಂತರ, ತೈಲ ಕಂಪನಿಗಳು ನಿರಂತರವಾಗಿ ಗ್ರಾಹಕರಿಗೆ ಪರಿಹಾರ ನೀಡುತ್ತಿವೆ. ಮಂಗಳವಾರ ಬೆಲೆ ಕುಸಿದ ನಂತರ, ಬುಧವಾರ ಬೆಳಿಗ್ಗೆ ಪೆಟ್ರೋಲ್ ಮತ್ತು ಡೀಸೆಲ್ ಸ್ಥಿರತೆ ಕಂಡುಬಂದಿದೆ.

Last Updated : Oct 16, 2019, 09:15 AM IST
ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಸ್ಥಿರತೆ; ‌ಇಂದಿನ ದರ ಎಷ್ಟಿದೆ! title=

ನವದೆಹಲಿ: ಪೆಟ್ರೋಲ್-ಡೀಸೆಲ್ ಬೆಲೆ ದಾಖಲೆಯ ಮಟ್ಟ ತಲುಪಿದ ನಂತರ, ತೈಲ ಕಂಪನಿಗಳು ಗ್ರಾಹಕರಿಗೆ ನಿರಂತರವಾಗಿ ಪರಿಹಾರ ನೀಡುತ್ತಿವೆ. ಮಂಗಳವಾರ ಬೆಲೆ ಕುಸಿದ ನಂತರ, ಬುಧವಾರ ಬೆಳಿಗ್ಗೆ ಪೆಟ್ರೋಲ್ ಮತ್ತು ಡೀಸೆಲ್ ಸ್ಥಿರತೆ ಕಂಡುಬಂದಿದೆ. ಅಕ್ಟೋಬರ್ ಆರಂಭದಿಂದ ಪೆಟ್ರೋಲ್ ದರ ಲೀಟರ್‌ಗೆ 1 ರೂಪಾಯಿಗಿಂತಲೂ ಕಡಿಮೆಯಾಗಿದೆ. ಬುಧವಾರ ಬೆಳಿಗ್ಗೆ ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಸ್ಥಿರತೆ ಕಾಯ್ದುಕೊಂಡಿದೆ.

ಪ್ರಪಂಚದಾದ್ಯಂತ ತೈಲ ಪೂರೈಕೆ ಕುಸಿಯುತ್ತಿರುವ ಕಾರಣ, ಏಷ್ಯಾದ ಮಾರುಕಟ್ಟೆಗಳಲ್ಲಿ ತೈಲ ದರದ ಮೇಲೆ ಹೆಚ್ಚು ಪರಿಣಾಮ ಬೀರುತ್ತಿದೆ. ದೆಹಲಿಯಲ್ಲಿ ಬುಧವಾರ ಬೆಳಿಗ್ಗೆ ಪೆಟ್ರೋಲ್ ಪ್ರತಿ ಲೀಟರ್‌ಗೆ 73.27 ರೂ. ಡೀಸೆಲ್ ಅನ್ನು ಲೀಟರ್‌ಗೆ 66.41 ರೂ.ಗೆ ಮಾರಾಟ ಮಾಡಲಾಗುತ್ತಿದೆ. 

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 75.72 ರೂ. ಮತ್ತು ಡೀಸೆಲ್ ಬೆಲೆ 68.62 ರೂ. ಆಗಿದೆ.

ಈ ದರವು ಇಂದು ಬೆಳಿಗ್ಗೆ 6 ಗಂಟೆಯಿಂದ ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ಅನ್ವಯವಾಗಲಿದೆ.

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆಗಳು ಕೆಳಕಂಡಂತಿದೆ

ನಗರಗಳು

ಪೆಟ್ರೋಲ್ 

(ರೂ./ಲೀ)

ಡೀಸೆಲ್ 

(ರೂ./ಲೀ)

ದೆಹಲಿ 73.27 67.41
ಕೊಲ್ಕತ್ತಾ 75.92 68.77
ಮುಂಬೈ 78.88 69.61
ಚೆನ್ನೈ 76.16 70.21
ಬೆಂಗಳೂರು 75.72 68.62
ಹೈದರಾಬಾದ್ 77.91 72.42
ತಿರುವನಂತಪುರಂ 76.48 71.29

ದೇಶಾದ್ಯಂತ ಎಲ್ಲಾ ರಾಜ್ಯಗಳ ಪೆಟ್ರೋಲ್-ಡೀಸೆಲ್ ಬೆಲೆ ತಿಳಿಯಲು ಈ ಲಿಂಕ್ ಕ್ಲಿಕ್ ಮಾಡಿ: 

https://www.iocl.com/TotalProductList.aspx

Trending News