Juice For Uric Acid : ತಪ್ಪು ಆಹಾರ ಪದ್ಧತಿ ಮತ್ತು ಕೆಟ್ಟ ಜೀವನಶೈಲಿಯಿಂದಾಗಿ, ಇತ್ತೀಚಿನ ದಿನಗಳಲ್ಲಿ ಯೂರಿಕ್ ಆಸಿಡ್ ಸಮಸ್ಯೆ ಜನರಲ್ಲಿ ವೇಗವಾಗಿ ಹೆಚ್ಚುತ್ತಿದೆ. ಯೂರಿಕ್ ಆಮ್ಲ ನಮ್ಮ ದೇಹದಲ್ಲಿ ರೂಪುಗೊಳ್ಳುವ ವಿಷಕಾರಿ ವಸ್ತುವಾಗಿದೆ.ಇದು ಪ್ಯೂರಿನ್ ಎಂಬ ರಾಸಾಯನಿಕದ ವಿಭಜನೆಯಿಂದ ರೂಪುಗೊಳ್ಳುತ್ತದೆ. ಸಾಮಾನ್ಯವಾಗಿ,ಇದನ್ನು ಮೂತ್ರಪಿಂಡ ಫಿಲ್ಟರ್ ಮಾಡಿ, ಮೂತ್ರದ ಮೂಲಕ ಹೊರಹಾಕುತ್ತದೆ. ಆದರೆ, ಕಿಡ್ನಿಗಳು ಸರಿಯಾಗಿ ಕಾರ್ಯನಿರ್ವಹಿಸದೇ ಇದ್ದಾಗ ಅದು ಹರಳುಗಳ ರೂಪದಲ್ಲಿ ಕೀಲುಗಳಲ್ಲಿ ಶೇಖರಣೆಯಾಗಲು ಪ್ರಾರಂಭಿಸುತ್ತದೆ. ಈ ಕಾರಣದಿಂದಾಗಿ, ಕೀಲುಗಳಲ್ಲಿ ನೋವು ಮತ್ತು ಊತದಂತಹ ಅನೇಕ ರೀತಿಯ ಸಮಸ್ಯೆಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ. ದೇಹದಲ್ಲಿ ಯೂರಿಕ್ ಆಮ್ಲದ ಮಟ್ಟವನ್ನು ನಿಯಂತ್ರಿಸಲು, ಆಹಾರದ ಬಗ್ಗೆ ವಿಶೇಷ ಕಾಳಜಿಯನ್ನು ತೆಗೆದುಕೊಳ್ಳಬೇಕಾಗುತ್ತದೆ.ಕೆಲವು ಮನೆಮದ್ದುಗಳು ಯೂರಿಕ್ ಆಮ್ಲವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಯೂರಿಕ್ ಆಮ್ಲವನ್ನು ನಿಯಂತ್ರಿಸುವಲ್ಲಿ ಹಾಗಲಕಾಯಿ ಜ್ಯೂಸ್ ಪ್ರಯೋಜನಕಾರಿ :
ಹಾಗಲಕಾಯಿ ಜ್ಯೂಸ್ ಸೇವನೆಯು ದೇಹದಲ್ಲಿ ಯೂರಿಕ್ ಆಮ್ಲದ ಮಟ್ಟವನ್ನು ನಿಯಂತ್ರಿಸುವಲ್ಲಿ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಹಾಗಲಕಾಯಿ ಅನೇಕ ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ. ಇದು ವಿಟಮಿನ್ ಸಿ, ಕಬ್ಬಿಣ, ಮೆಗ್ನೀಸಿಯಮ್, ಪೊಟ್ಯಾಸಿಯಮ್ ಮತ್ತು ಬೀಟಾ-ಕ್ಯಾರೋಟಿನ್ ನಂತಹ ಅನೇಕ ಪೋಷಕಾಂಶಗಳನ್ನು ಒಳಗೊಂಡಿದೆ. ಇದು ರಕ್ತವನ್ನು ಶುದ್ಧೀಕರಿಸುವ ಮೂಲಕ ಯೂರಿಕ್ ಆಮ್ಲದ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ನಿಯಮಿತ ಸೇವನೆಯು ಕೀಲು ನೋವು ಮತ್ತು ಊತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ .
ಇದನ್ನೂ ಓದಿ : ಬೆಳಗ್ಗೆ ಈ ಕಾಫಿ ಕುಡಿದರೆ ಸಾಕು ಬ್ಲಡ್ ಶುಗರ್ ಒಮ್ಮೆಲೇ ನಾರ್ಮಲ್ ಆಗಿ ಬಿಡುತ್ತದೆ! ಅದ್ಯಾವ ಕಾಫೀ ನೋಡಿ !
ಈ ಜ್ಯೂಸ್ ಅನ್ನು ಯಾವಾಗ ಮತ್ತು ಹೇಗೆ ಸೇವಿಸಬೇಕು? :
ದೇಹದಲ್ಲಿ ಯೂರಿಕ್ ಆಮ್ಲದ ಮಟ್ಟವನ್ನು ನಿಯಂತ್ರಿಸಲು,ಪ್ರತಿದಿನ ಬೆಳಿಗ್ಗೆ ಒಂದು ಕಪ್ ಹಾಗಲಕಾಯಿ ಜ್ಯೂಸ್ ಸೇವಿಸಬಹುದು. ಇದಲ್ಲದೇ ಬೇಕಿದ್ದರೆ ಹಾಗಲಕಾಯಿ ಪಲ್ಯ, ಗೊಜ್ಜು ಮಾಡಿಯೂ ಸೇವಿಸಬಹುದು.ಇದು ಅನೇಕ ರೋಗಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ.
ಹಾಗಲಕಾಯಿ ರಸವನ್ನು ಕುಡಿಯುವುದರಿಂದ ಆಗುವ ಇತರ ಪ್ರಯೋಜನಗಳು :
1.ಹಾಗಲಕಾಯಿ ರಸವನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಮಧುಮೇಹ ನಿಯಂತ್ರಣದಲ್ಲಿರುತ್ತದೆ.
2. ಹಾಗಲಕಾಯಿಯ ರಸವನ್ನು ಸೇವಿಸುವುದರಿಂದ ದೇಹದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ.
3. ಹಾಗಲಕಾಯಿ ಜ್ಯೂಸ್ ಕುಡಿಯುವುದರಿಂದ ಯಕೃತ್ನಲ್ಲಿರುವ ಕೊಳೆಯನ್ನು ತೆಗೆದು ಹಾಕಲು ಸಹಾಯ ಮಾಡುತ್ತದೆ.ಇದಲ್ಲದೆ, ಯಕೃತ್ತಿನ ಕಾರ್ಯವನ್ನು ಸುಧಾರಿಸುತ್ತದೆ.
4. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಹಾಗಲಕಾಯಿ ರಸವನ್ನು ಕುಡಿಯುವುದರಿಂದ ತೂಕವನ್ನು ಕಳೆದುಕೊಳ್ಳಬಹುದು.
5. ಹಾಗಲಕಾಯಿಯ ರಸವನ್ನು ಸೇವಿಸುವುದರಿಂದ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಬಹುದು.
ಅಧಿಕ ಯೂರಿಕ್ ಆಸಿಡ್ ಸಮಸ್ಯೆಯಲ್ಲಿ ಹಾಗಲಕಾಯಿ ರಸವನ್ನು ಸೇವಿಸುವುದು ತುಂಬಾ ಪ್ರಯೋಜನಕಾರಿಯಾಗಿದೆ. ಆದರೆ ನಿಮ್ಮ ಸಮಸ್ಯೆ ಹೆಚ್ಚಾಗುತ್ತಿದ್ದರೆ, ವೈದ್ಯರನ್ನು ಸಂಪರ್ಕಿಸುವುದು ಸೂಕ್ತ.
ಇದನ್ನೂ ಓದಿ : ನಿಮಗೆ ಹಸಿವೇ ಆಗುತ್ತಿಲ್ಲವೇ? ಹಸಿವಿನ ಕೊರತೆ ನೀಗಿಸಲು ಸಿಂಪಲ್ ಮನೆಮದ್ದುಗಳಿವು!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.