ಕರಾವಳಿ ಕರ್ನಾಟಕ, ಗೋವಾದಲ್ಲಿ ಇಂದು ಭಾರಿ ಮಳೆ ಸಾಧ್ಯತೆ

ಪೂರ್ವ-ಮಧ್ಯ ಅರೇಬಿಯನ್ ಸಮುದ್ರ ಮತ್ತು ಪಕ್ಕದ ಕರ್ನಾಟಕ ಮತ್ತು ದಕ್ಷಿಣ ಕೊಂಕಣ ಕರಾವಳಿಯಲ್ಲಿ 45-55 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಕೆಲ ದಿನಗಳವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.   

Last Updated : Oct 18, 2019, 10:42 AM IST
ಕರಾವಳಿ ಕರ್ನಾಟಕ, ಗೋವಾದಲ್ಲಿ ಇಂದು ಭಾರಿ ಮಳೆ ಸಾಧ್ಯತೆ title=

ನವದೆಹಲಿ: ಕರಾವಳಿ ಕರ್ನಾಟಕ, ಕೊಂಕಣ ಮತ್ತು ಗೋವಾದ ಪ್ರತ್ಯೇಕ ಪ್ರದೇಶಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಶುಕ್ರವಾರ ತಿಳಿಸಿದೆ.

ದಕ್ಷಿಣ-ಮಧ್ಯ ಮಹಾರಾಷ್ಟ್ರ, ತಮಿಳುನಾಡು, ಪುದುಚೇರಿಯಲ್ಲೂ ಮಳೆಯಾಗಲಿದ್ದು,  ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ್, ಪಂಜಾಬ್, ಉತ್ತರ ಹರಿಯಾಣ ಮತ್ತು ಚಂಡೀಗಢದ ಪ್ರತ್ಯೇಕ ಪ್ರದೇಶಗಳಲ್ಲಿ ಮಿಂಚಿನೊಂದಿಗೆ ಗುಡುಗು ಸಹಿತ ಮಳೆಯಾಗಿದೆ. 

ಪೂರ್ವ-ಮಧ್ಯ ಅರೇಬಿಯನ್ ಸಮುದ್ರ ಮತ್ತು ಪಕ್ಕದ ಕರ್ನಾಟಕ ಮತ್ತು ದಕ್ಷಿಣ ಕೊಂಕಣ ಕರಾವಳಿಯಲ್ಲಿ 45-55 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಕೆಲ ದಿನಗಳವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. 

ಮುಂದಿನ 3-4 ದಿನಗಳಲ್ಲಿ ಪರ್ಯಾಯ ದ್ವೀಪ ಭಾರತದ ಪ್ರಮುಖ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿ ಕರ್ನಾಟಕದ ಮೇಲೆ ಭಾರೀ ಮಳೆಯಾಗಲಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.
 
Trending News