ನವದೆಹಲಿ: ಐಎನ್‌ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಹಣಕಾಸು ಸಚಿವ ಮತ್ತು ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ, ಅವರ ಪುತ್ರ ಕಾರ್ತಿ, ಪೀಟರ್ ಮುಖರ್ಜಿಯಾ, ಇಂದ್ರಾಣಿ ಮುಖರ್ಜಿಯಾ ಮತ್ತು ಇತರ 10 ಆರೋಪಿಗಳ ವಿರುದ್ಧ ಸಿಬಿಐ ಶುಕ್ರವಾರ ಚಾರ್ಜ್ ಶೀಟ್ ಸಲ್ಲಿಸಿದೆ. ಈ ಸಂಬಂಧ ಅಕ್ಟೋಬರ್ 21ರಂದು ನ್ಯಾಯಾಲಯ ವಿಚಾರಣೆ ನಡೆಸಲಿದೆ.
ಆಗಸ್ಟ್ 21, 2019ರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ತಿಂಗಳಿಂದ ತಿಹಾರ್ ಜೈಲಿನಲ್ಲಿ ಬಂಧಿತರಾಗಿದ್ದ ಚಿದಂಬರಂ ಅವರನ್ನು ವಿಚಾರಣೆಗೆ ಒಳಪಡಿಸುವಂತೆ ಆದೇಶಿಸಿ, ದೆಹಲಿ ಹೈಕೋರ್ಟ್ ಅಕ್ಟೋಬರ್ 24ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದೆ.
ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವಚಿದಮ್ಬರಂ ಅವರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅಕ್ಟೋಬರ್ 16ರಂದು ಬಂಧಿಸಿದೆ.