ನವದೆಹಲಿ: ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು ಕಳೆದ ಆರು ತಿಂಗಳಿನಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ ಎಂದು ಬುಧವಾರ ಬಹಿರಂಗಪಡಿಸಿದ್ದಾರೆ. ಹೀಗಾಗಿ ಮುಂಬರುವ ಲೋಕಸಭೆ ಚುನಾವಣೆಯಿಂದ ಹಿಂದೆ ಸರಿಯುವ ಕಠಿಣ ನಿರ್ಧಾರ ಕೈಗೊಂಡಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು "ನಾನು ಕಳೆದ 6 ತಿಂಗಳಿಂದ ಕ್ಯಾನ್ಸರ್ನೊಂದಿಗೆ ಹೋರಾಡುತ್ತಿದ್ದೇನೆ.ಈಗ ಜನರಿಗೆ ಹೇಳುವ ಸಮಯ ಬಂದಿದೆ ಎಂದು ನಾನು ಭಾವಿಸುತ್ತೇನೆ.ಲೋಕಸಭೆ ಚುನಾವಣೆಯಲ್ಲಿ ನಾನೇನೂ ಮಾಡಲು ಸಾಧ್ಯವಿಲ್ಲ. ಎಲ್ಲವನ್ನೂ ಪ್ರಧಾನಿ ಅವರಿಗೆ ತಿಳಿಸಿದ್ದೇನೆ' ಎಂದು ಅವರು ಟ್ವೀಟ್ ಮಾಡಿದ್ದಾರೆ.
पिछले 6 माह से कैंसर से संघर्ष कर रहा हूँ । अब लगा कि लोगों को बताने का समय आ गया है । लोक सभा चुनाव में कुछ कर नहीं पाऊँगा ।
PM को सब कुछ बता दिया है ।
देश, बिहार और पार्टी का सदा आभार और सदैव समर्पित |— Sushil Kumar Modi (मोदी का परिवार ) (@SushilModi) April 3, 2024
ಇದನ್ನೂ ಓದಿ- ಧಾರವಾಡದ ಪ್ರತಿ ಹಳ್ಳಿಗೂ ಒಂದೂವರೆ ವರ್ಷದಲ್ಲಿ ಮಲಪ್ರಭಾ ನೀರು ಕೊಟ್ಟೇ ಕೊಡುವೆ: ಸಚಿವ ಪ್ರಹ್ಲಾದ ಜೋಶಿ ಭರವಸೆ
ಕಳೆದು ಮೂರು ದಶಕಗಳಿಂದ ರಾಜಕೀಯದಲ್ಲಿ ಸಕ್ರಿಯವಾಗಿರುವ ಬಿಹಾರ್ ರಾಜಕೀಯದಲ್ಲಿ ಒಂದು ರೀತಿ ಬಿಜೆಪಿಯ ಪೋಸ್ಟರ್ ಬಾಯ್ ಎಂದೇ ಅವರನ್ನು ಪರಿಗಣಿಸಲಾಗಿದೆ.
बिहार के पूर्व उप मुख्यमंत्री और भाजपा के वरिष्ठ नेता माननीय सुशील कुमार मोदी जी के स्वास्थ्य को लेकर आई ख़बर से स्तब्ध हूँ।
ईश्वर से प्रार्थना है कि वे जल्द पूर्णतः स्वस्थ और सक्रिय हों ताकि उनके अनुभव, समाज और शासन को लेकर उनकी गहरी समझ का लाभ मुझ जैसे पार्टी के अनगिनत…
— Vijay Kumar Sinha (मोदी का परिवार) (@VijayKrSinhaBih) April 3, 2024
ಈ ಕುರಿತಾಗಿ ಪ್ರತಿಕ್ರಿಯಿಸಿರುವ ಬಿಹಾರದ ಉಪ ಮುಖ್ಯಮಂತ್ರಿ ವಿಜಯಕುಮಾರ್ ಸಿನ್ಹಾ “ಬಿಹಾರದ ಮಾಜಿ ಉಪಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕ, ಗೌರವಾನ್ವಿತ ಸುಶೀಲ್ ಕುಮಾರ್ ಮೋದಿ ಜಿ ಅವರ ಆರೋಗ್ಯದ ಸುದ್ದಿಯಿಂದ ನಾನು ಆಘಾತಕ್ಕೊಳಗಾಗಿದ್ದೇನೆ. ನನ್ನಂತಹ ಅಸಂಖ್ಯಾತ ಪಕ್ಷದ ಕಾರ್ಯಕರ್ತರು ಅವರ ಅನುಭವ ಮತ್ತು ಸಮಾಜ ಮತ್ತು ಆಡಳಿತದ ಆಳವಾದ ತಿಳುವಳಿಕೆಯಿಂದ ಯಾವಾಗಲೂ ಪ್ರಯೋಜನ ಪಡೆಯುವಂತೆ ಅವರು ಶೀಘ್ರದಲ್ಲೇ ಸಂಪೂರ್ಣ ಆರೋಗ್ಯವಂತರಾಗಿ ಮತ್ತು ಸಕ್ರಿಯರಾಗಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ" ಎಂದು ಸಿನ್ಹಾ ಉಲ್ಲೇಖಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.