ಇಂದೋರ್: ಮಧ್ಯಪ್ರದೇಶದ ಇಂದೋರ್ನ ಗೋಲ್ಡನ್ ಗೇಟ್ ಹೋಟೆಲ್ನಲ್ಲಿ ಸೋಮವಾರ ಬೆಳಿಗ್ಗೆ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಆ ಪ್ರದೇಶದ ನಿವಾಸಿಗಳಲ್ಲಿ ಕೆಲ ಕಾಲ ಆಂತಕ ಸೃಷ್ಟಿಯಾಗಿತ್ತು.
ಇಂದೋರ್ನ ವಿಜಯನಗರದ ವಾಣಿಜ್ಯ ಪ್ರದೇಶದಲ್ಲಿರುವ ಸುಮಾರು ಐದು ಅಂತಸ್ತಿನ ಈ ಹೋಟೆಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಸ್ಥಳಕ್ಕಾಗಮಿಸಿದ ರಕ್ಷಣಾ ತಂಡ ಮತ್ತು ಅಗ್ನಿಶಾಮಕ ದಳ ರಕ್ಷಣಾ ಕಾರ್ಯಾಚರಣೆ ಮೂಲಕ ಹೋಟೆಲ್ ನಲ್ಲಿದ್ದ ಸುಮಾರು 12 ಅತಿಥಿಗಳನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎನ್ನಲಾಗಿದೆ.
Madhya Pradesh: Fire breaks out at a hotel in Indore. More details awaited. pic.twitter.com/gzdsJuQo9J
— ANI (@ANI) October 21, 2019
ಪೊಲೀಸರ ಪ್ರಕಾರ, ಹಲವಾರು ಜನರನ್ನು ರಕ್ಷಿಸಲಾಗಿದ್ದರೂ, ಕಟ್ಟಡದೊಳಗೆ ಮತ್ತಷ್ಟು ಜನ ಸಿಕ್ಕಿಬಿದ್ದಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಹೆಚ್ಚುವರಿ ಹಾನಿಯನ್ನು ತಡೆಯಲು ಮುನ್ನೆಚ್ಚರಿಕಾ ಅಕ್ರಮವಾಗಿ ಆ ಪ್ರದೇಶದಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗಿದೆ. ಬೆಂಕಿ ಅನಾಹುತದಿಂದಾಗಿ ಲಕ್ಷಾಂತರ ಮೌಲ್ಯದ ಆಸ್ತಿ ನಾಶವಾಗಿದೆ. ಆದರೆ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎಂಬುದು ತಿಳಿದಿಲ್ಲ.