ನವದೆಹಲಿ: ಸ್ವಹಿತಾಸಕ್ತಿಗಳ ದೃಷ್ಟಿಯಿಂದ ಭಾರತ ಹೆಚ್ಚು ಹೆಚ್ಚು ರಾಷ್ಟ್ರಗಳೊಂದಿಗೆ ಒಪ್ಪಂದಗಳನ್ನು ಮಾಡಿಕೊಳ್ಳಬೇಕು ಎಂಬ ವಿಚಾರಕ್ಕೆ ತಮ್ಮ ಪಕ್ಷ ಮುಕ್ತವಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಸೋಮವಾರ ಹೇಳಿದ್ದಾರೆ.
ಯುಎಸ್-ಇಂಡಿಯಾ ಸ್ಟ್ರಾಟೆಜಿಕ್ ಪಾರ್ಟ್ನರ್ಶಿಪ್ ಫೋರಂನಲ್ಲಿ ಮಾತನಾಡಿದ ಮಾಧವ್, "ನಾವು ಹೆಚ್ಚು ಹೆಚ್ಚು ರಾಷ್ಟ್ರಗಳೊಂದಿಗೆ ತೊಡಗಿಸಿಕೊಳ್ಳಬೇಕು. ಹೊಸ ಸಂಬಂಧಗಳನ್ನು ಬೆಳೆಸಿಕೊಳ್ಳುವಾಗ ನಮ್ಮ ಹಿತಾಸಕ್ತಿಗಳನ್ನು ಸಹ ನೋಡಿಕೊಳ್ಳಬೇಕು ಎಂದಿದ್ದಾರೆ.
"ನಾವು ಆಸಿಯಾನ್ನೊಂದಿಗೆ ವ್ಯಾಪಾರ ಒಪ್ಪಂದವನ್ನು ಹೊಂದಿದ್ದೇವೆ, ನಾವು ಜಪಾನ್ನೊಂದಿಗೆ ಮುಕ್ತ ವ್ಯಾಪಾರ ಒಪ್ಪಂದವನ್ನು ಹೊಂದಿದ್ದೇವೆ ಮತ್ತು ಇನ್ನೂ ಕೆಲವು ದೊಡ್ಡ ರಾಷ್ಟ್ರಗಗಳು ಈ ಒಪ್ಪಂದದ (ಆರ್ಸಿಇಪಿ) ಭಾಗವಾಗಲಿವೆ. ಇದಕ್ಕೆ ಸಂಬಂಧಿಸಿದಂತೆ ಕೆಲವು ಸಮಸ್ಯೆಗಳಿವೆ" ಎಂದು ಮಾಧವ್ ತಿಳಿಸಿದ್ದಾರೆ.