How To control Bad Cholestrol: ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹಲವು ರೀತಿಯ ಆರೋಗ್ಯ ಸಮಸ್ಯೆಗಳಿಗೆ ಆಹ್ವಾನ ನೀಡುತ್ತದೆ. ಹಾಗಾಗಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವುದು ಬಹಳ ಮುಖ್ಯ. ಆರೋಗ್ಯ ತಜ್ಞರ ಪ್ರಕಾರ, ನಿತ್ಯ ಕೆಲವು ಜ್ಯೂಸ್ ಗಳನ್ನು ಕುಡಿಯುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣ ಬಲು ಸುಲಭ ಎಂದು ಹೇಳಲಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಬದಲಾಗುತ್ತಿರುವ ಜೀವನಶೈಲಿ, ಕಳಪೆ ಆಹಾರಪದ್ದತಿಯು ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಲು ಪ್ರಮುಖ ಕಾರಣ. ಆದರೆ, ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಪ್ರಯತ್ನಿಸದಿದ್ದರೆ ಭವಿಷ್ಯದಲ್ಲಿ ದೇಹವು ಖಾಯಿಲೆಗಳ ಉಗ್ರಾಣವಾಗಬಹುದು. ಆರೋಗ್ಯ ತಜ್ಞರ ಪ್ರಕಾರ, ನಿತ್ಯ ಕೆಲವು ಜ್ಯೂಸ್'ಗಳನ್ನು ಸೇವಿಸುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಸುಲಭವಾಗಿ ನಿಯಂತ್ರಿಸಬಹುದು. ಅವುಗಳೆಂದರೆ...
ಭಾರತದ ಪ್ರಸಿದ್ಧ ಪೌಷ್ಟಿಕತಜ್ಞ ನಿಖಿಲ್ ವಾಟ್ಸ್ ಅವರ ಪ್ರಕಾರ, ಪ್ರತಿ ದಿನ ಒಂದು ಗ್ಲಾಸ್ ಬೀಟ್ರೂಟ್ ಜ್ಯೂಸ್ ಕುಡಿಯುದರಿಂದ ದೇಹದಲ್ಲಿ ಸಂಗ್ರಹವಾಗಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಬಹುದು.
ಪ್ರತಿ ಮನೆಯಲ್ಲೂ ಸುಲಭವಾಗಿ ಲಭ್ಯವಿರುವ ಟೊಮಾಟೊವನ್ನು ಜ್ಯೂಸ್ ತಯಾರಿಸಿ ಸೇವಿಸುವುದರಿಂದ ಕೆಟ್ಟ ಕೊಲೆಸ್ಟ್ರಾಲ್ನ ಸಮಸ್ಯೆಯನ್ನು ಸುಲಭವಾಗಿ ನಿಯಂತ್ರಿಸಬಹುದು.
ಸಾಮಾನ್ಯವಾಗಿ ತೂಕ ಇಳಿಕೆಗಾಗಿ ಹೆಚ್ಚು ಪ್ರಸಿದ್ದಿಯಾಗಿರುವ ಚಿಯಾ ಸೀಡ್ಸ್ ಪಾನೀಯವನ್ನು ಪ್ರತಿ ದಿನ ಕುಡಿಯುವುದರಿಂದ ದೇಹದಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಬಹುದು.
ಪ್ರತಿದಿನ ಬೆಳಿಗ್ಗೆ ಉಪಾಹಾರದೊಂದಿಗೆ ದಾಳಿಂಬೆ ಜ್ಯೂಸ್ ಕುಡಿಯುವುದರಿಂದ ರಕ್ತಹೀನತೆ ಸಮಸ್ಯೆಯಿಂದ ಪರಿಹಾರ ದೊರೆಯುವುದರೊಂದಿಗೆ, ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಕೂಡ ತುಂಬಾ ಪ್ರಯೋಜನಕಾರಿ ಆಗಿದೆ.
ಪ್ರತಿ ದಿನ ಒಂದು ಲೋಟ ಕಿತ್ತಳೆ ಹಣ್ಣಿನ ಜ್ಯೂಸ್ ಕುಡಿಯುವುದರಿಂದ ಕೊಲೆಸ್ಟ್ರಾಲ್ ಕಡಿಮೆ ಆಗುವುದರ ಜೊತೆಗೆ ಕಣ್ಣಿನ ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿ ಆಗಿದೆ. ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.