Cardamom To control uric acid: ಯುರಿಕ್ ಆಸಿಡ್ ದೇಹದಲ್ಲಿ ಹೆಚ್ಚಾದರೆ ಅದು ಕೀಲು ನೋವಿಗೆ ಕಾರಣವಾಗುತ್ತದೆ. ಗಂಟುಗಳಲ್ಲಿ ಯುರಿಕ್ ಆಸಿಡ್ ಅಂಟಿಕೊಳ್ಳುತ್ತದೆ. ಇದರಿಂದ ತೀವ್ರವಾದ ನೋವು ಬಾಧಿಸುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಏಲಕ್ಕಿಯಲ್ಲಿ ಯುರಿಕ್ ಆಸಿಡ್ ಸಮಸ್ಯೆಯನ್ನು ಗುಣಪಡಿಸುವ ಶಕ್ತಿಯಿದೆ. ಇದರಲ್ಲಿ ಲಿಮೋನೆನ್ ಮತ್ತು ಮೆಂಥೋಫೋನ್ನಂತಹ ಫೈಟೊಕೆಮಿಕಲ್ಗಳು ಕಂಡುಬರುತ್ತವೆ. ಯೂರಿಕ್ ಆಮ್ಲವನ್ನು ನಿಯಂತ್ರಿಸಲು ಇವು ಪ್ರಯೋಜನಕಾರಿಯಾಗಿದೆ.
ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಕಬ್ಬಿಣ ಮತ್ತು ಮೆಗ್ನೀಸಿಯಮ್ ಇದರಲ್ಲಿ ಹೇರಳವಾಗಿ ಕಂಡುಬರುತ್ತದೆ. ಇದು ಕೀಲು ನೋವು ಮತ್ತು ಊತವನ್ನು ಕಡಿಮೆ ಮಾಡುತ್ತವೆ.
ರಾತ್ರಿ ಮಲಗುವ ಮೊದಲು 4-5 ಸಣ್ಣ ಏಲಕ್ಕಿಗಳನ್ನು ಪುಡಿ ಮಾಡಿ. ಒಂದು ಲೋಟ ನೀರಿನಲ್ಲಿ ಏಲಕ್ಕಿ ಪುಡಿ ಬೆರೆಸಿಡಿ. ಬೆಳಿಗ್ಗೆ ಎದ್ದ ಕೂಡಲೇ ಮೊದಲು ಈ ನೀರನ್ನು ಕುಡಿಯಿರಿ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಕೀಲು ನೋವು ನಿವಾರಣೆಯಾಗುತ್ತದೆ.
ನಿಮ್ಮ ಕೆಟ್ಟ ಕೊಲೆಸ್ಟ್ರಾಲ್ ಅಧಿಕವಾಗಿದ್ದರೆ 2 ಏಲಕ್ಕಿಯನ್ನು ಚೆನ್ನಾಗಿ ಅಗಿದು ಪ್ರತಿದಿನ ತಿನ್ನಿರಿ. ಇದು ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿಡುತ್ತದೆ.
ಆಂಟಿಆಕ್ಸಿಡೆಂಟ್ ಮತ್ತು ಆ್ಯಂಟಿಬಯೋಟಿಕ್ ಗುಣಗಳಿಂದ ಸಮೃದ್ಧವಾಗಿರುವ ಏಲಕ್ಕಿ ಹೃದ್ರೋಗಿಗಳಿಗೂ ತುಂಬಾ ಪ್ರಯೋಜನಕಾರಿ.
ನೀವು ಹೆಚ್ಚಿನ ಒತ್ತಡದಿಂದ ಬಳಲುತ್ತಿದ್ದರೆ ಏಲಕ್ಕಿಯನ್ನು ಸೇವಿಸುವುದು ನಿಮಗೆ ಪ್ರಯೋಜನಕಾರಿಯಾಗಿದೆ.
ಏಲಕ್ಕಿ ಮೌತ್ ಫ್ರೆಶ್ನರ್ ಆಗಿಯೂ ಕೆಲಸ ಮಾಡುತ್ತದೆ. ನಾಯಿಯ ದುರ್ವಾಸನೆ ತಡೆಗಟ್ಟುತ್ತದೆ.
ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.