Indian Railway Recruitment 2024: ರೈಲ್ವೆ ಇಲಾಖೆಯಲ್ಲಿ ಉದ್ಯೋಗಾವಕಾಶ, ಇಂದೇ ಅರ್ಜಿ ಸಲ್ಲಿಸಿರಿ

Indian Railway jobs 2024: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 12, 2024ಕ್ಕೆ ಕನಿಷ್ಠ 15 ವರ್ಷ ಮತ್ತು ಗರಿಷ್ಠ 24 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

Written by - Puttaraj K Alur | Last Updated : Apr 13, 2024, 03:25 PM IST
  • ಆಗ್ನೇಯ ಮಧ್ಯ ರೈಲ್ವೆ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
  • ಒಟ್ಟು 733 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು
  • ಏಪ್ರಿಲ್ 19 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆನ್‌ಲೈನ್‌ ಮೂಲಕ ಅಪ್ಲೈ ಮಾಡಬಹುದು
Indian Railway Recruitment 2024: ರೈಲ್ವೆ ಇಲಾಖೆಯಲ್ಲಿ ಉದ್ಯೋಗಾವಕಾಶ, ಇಂದೇ ಅರ್ಜಿ ಸಲ್ಲಿಸಿರಿ   title=
Indian Railway Recruitment 2024

Indian Railway Recruitment 2024: ಆಗ್ನೇಯ ಮಧ್ಯ ರೈಲ್ವೆ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 733 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಮಾರ್ಚ್​ 12ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಏಪ್ರಿಲ್ 19 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ರೈಲ್ವೆ ಇಲಾಖೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಅಭ್ಯರ್ಥಿಗಳು ಆನ್​​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಹುದ್ದೆಯ ಮಾಹಿತಿ: 38 ಕಾರ್ಪೆಂಟರ್, 100 COPA, 10 ಡ್ರಾಫ್ಟ್ಸ್​ಮ್ಯಾನ್, 137 ಎಲೆಕ್ಟ್ರಿಷಿಯನ್‌, 5 ಎಲೆಕ್ಟ್ರಿಷಿಯನ್​ (ಮೆಕ್ಯಾನಿಕ್), 187 ಫಿಟ್ಟರ್, 4 ಮೆಷಿನಿಸ್ಟ್​, 42 ಪೈಂಟರ್, 25 ಪ್ಲಂಬರ್, 15 ಮೆಕ್ಯಾನಿಕ್(RAC), 4 SMW, 27 ಸ್ಟೆನೊ(ಇಂಗ್ಲಿಷ್), 19 ಸ್ಟೆನೊ (ಹಿಂದಿ), 12 ಡೀಸೆಲ್ ಮೆಕ್ಯಾನಿಕ್, 4 ಟರ್ನರ್, 4 ವೆಲ್ಡರ್, 80 ವೈರ್​​ಮ್ಯಾನ್​, 4 ಕೆಮಿಕಲ್ ಲ್ಯಾಬೊರೇಟರಿ ಅಸಿಸ್ಟೆಂಟ್ ಮತ್ತು 2 ಡಿಜಿಟಲ್ ಫೋಟೋಗ್ರಾಫರ್ ಹುದ್ದೆಗಳು ಖಾಲಿ ಇವೆ.

ಇದನ್ನೂ ಓದಿ: Daily GK Quiz: "ರೋಮಿಯೋ ಮತ್ತು ಜೂಲಿಯೆಟ್" ನಾಟಕವನ್ನು ಬರೆದವರು ಯಾರು?

ವಿದ್ಯಾರ್ಹತೆ: ಆಗ್ನೇಯ ಮಧ್ಯ ರೈಲ್ವೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, ಐಟಿಐ ಪೂರ್ಣಗೊಳಿಸಿರಬೇಕು.

ವಯೋಮಿತಿ: ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 12, 2024ಕ್ಕೆ ಕನಿಷ್ಠ 15 ವರ್ಷ ಮತ್ತು ಗರಿಷ್ಠ 24 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಉದ್ಯೋಗದ ಸ್ಥಳ: ಛತ್ತೀಸ್​ಗಢದ ಬಿಲಸ್ಪುರ

ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ರೀತಿಯ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ: ಶಾರ್ಟ್​ಲಿಸ್ಟಿಂಗ್, ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 

ಅರ್ಜಿ ಸಲ್ಲಿಸುವುದು ಹೇಗೆ?: ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇರವಾಗಿ ಅರ್ಜಿ ಸಲ್ಲಿಸಲು ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. 

ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಕೊಳವೆ ಬಾವಿ ಅಪಘಾತ : ರಕ್ಷಣಾ ಕಾರ್ಯಾಚರಣೆ ಆರಂಭ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News