ಬೆಂಗಳೂರು: ಎರಡು ದಿನಗಳ ಕಾರ್ಯಕ್ರಮಗಳ ನಿಮಿತ್ತ ನಗರಕ್ಕೆ ಭೇಟಿ ನೀಡಿರುವ ರಾಷ್ಟ್ರಪತಿ ರಾಮನಾಥ ಕೊವಿಂದ್ ಅವರನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಭವನದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.
ಸುಪ್ರೀಂಕೋರ್ಟ್ ಆದೇಶದ ಹಿನ್ನಲೆಯಲ್ಲಿ ರಾಜ್ಯದ ಸಾವಿರಾರು ಪರಿಶಿಷ್ಟ ಜಾತಿ ಹಾಗೂ ಜನಾಂಗದ ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ಕಡಿತ ಆಗುವುದನ್ನು ತಪ್ಪಿಸಲು ವಿಧಾನಮಂಡಲ ಅಂಗೀಕರಿಸಿರುವ ಬಡ್ತಿ ಮೀಸಲಾತಿ ಸಂರಕ್ಷಣೆ ವಿಧೇಯಕಕ್ಕೆ ಅಂಕಿತ ಹಾಕುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಸ್ಸಿದ್ದರಾಮಯ್ಯ ಮನವಿ ಮಾಡಿದರು.
ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿರುವ ಪ್ರಕಾರ, ಬಡ್ತಿ ಮೀಸಲಾತಿ ವಿಧೇಯಕಕ್ಕೆ ಅಂಕಿತ ಹಾಕಲು ಕೋವಿಂದ್ ಅವರು ಧನಾತ್ಮಕ ಪ್ರತಿಕ್ರಿಯೆಯನ್ನು ನೀಡಿದ್ದಾರೆಂದು ತಿಳಿದುಬಂದಿದೆ.
ಇದಕ್ಕೂ ಮೊದಲು ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೋವಿಂದ್ ಅವರನ್ನು ರಾಜ್ಯಪಾಲ ವಜುಭಾಯಿವಾಲಾ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು.