ಸಿಖ್ ವಿರೋಧಿ ಗಲಭೆ ಪ್ರಕರಣ: ಸಜ್ಜನ್ ಕುಮಾರ್‌ಗೆ ಸದ್ಯಕ್ಕೆ ಸಿಗದ ಜಾಮೀನು

ಸಜ್ಜನ್ ಕುಮಾರ್ ಅನಾರೋಗ್ಯದ ಹಿನ್ನೆಲೆಯಲ್ಲಿ ಜಾಮೀನು ನೀಡುವಂತೆ ನ್ಯಾಯಾಲಯದಲ್ಲಿ ಮನವಿ ಮಾಡಿದ್ದರು.

Last Updated : Nov 6, 2019, 01:00 PM IST
ಸಿಖ್ ವಿರೋಧಿ ಗಲಭೆ ಪ್ರಕರಣ: ಸಜ್ಜನ್ ಕುಮಾರ್‌ಗೆ ಸದ್ಯಕ್ಕೆ ಸಿಗದ ಜಾಮೀನು title=

ನವದೆಹಲಿ: 1984 ರ ಸಿಖ್ ವಿರೋಧಿ ಗಲಭೆ(1984 Anti Sikh riots) ಪ್ರಕರಣದಲ್ಲಿ ಸೆರೆವಾಸ ಅನುಭವಿಸುತ್ತಿರುವ ಕಾಂಗ್ರೆಸ್ ಮಾಜಿ ನಾಯಕ ಸಜ್ಜನ್ ಕುಮಾರ್(Sajjan Kumar), ಅನಾರೋಗ್ಯದ ಕಾರಣ ಒಡ್ಡಿ ಜಾಮೀನು ನೀಡುವಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಸಜ್ಜನ್ ಕುಮಾರ್‌ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸುವಂತೆ ಆದೇಶಿಸಿದೆ.

ಇಂದು ಸಜ್ಜನ್ ಕುಮಾರ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯ,  ಜೈಲಿನಲ್ಲಿರುವ ಸಜ್ಜನ್ ಕುಮಾರ್ ಅವರ ವೈದ್ಯಕೀಯ ಪರೀಕ್ಷೆಗಾಗಿ ವೈದ್ಯಕೀಯ ಸಮಿತಿಯನ್ನು ರಚಿಸುವಂತೆ ಏಮ್ಸ್ ನಿರ್ದೇಶಕರಿಗೆ ಸೂಚಿಸಿದೆ. ಅಲ್ಲದೆ, ಮಂಡಳಿಯು 4 ವಾರಗಳಲ್ಲಿ ವರದಿ ಸಲ್ಲಿಸಬೇಕು ಎಂದು ಉನ್ನತ ನ್ಯಾಯಾಲಯ ಹೇಳಿದೆ.  ನ್ಯಾಯಾಲಯದ ಈ ಆದೇಶದಿಂದಾಗಿ ಸದ್ಯಕ್ಕೆ ಸಜ್ಜನ್ ಕುಮಾರ್ ಅವರಿಗೆ ಜಾಮೀನು ದೊರೆಯದ ಕಾರಣ, ಅವರು ಜೈಲಿನಲ್ಲೇ ಇರಬೇಕಾಗಿದೆ.

1984 ರ ಸಿಖ್ ವಿರೋಧಿ ಗಲಭೆಯ ದೆಹಲಿ ಕ್ಯಾಂಟ್ ಪ್ರಕರಣದಲ್ಲಿ ಸಜ್ಜನ್ ಕುಮಾರ್ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಸಿಖ್ ವಿರೋಧಿ ಗಲಭೆ ಪ್ರಕರಣದಲ್ಲಿ ಕುಮಾರ್ ಅವರನ್ನು 2018 ರ ಡಿಸೆಂಬರ್‌ನಲ್ಲಿ ದೆಹಲಿ ಹೈಕೋರ್ಟ್ ಶಿಕ್ಷೆಗೊಳಪಡಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ನಿರ್ಧಾರವನ್ನು ಪ್ರಶ್ನಿಸಿ ಅವರು ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಇನ್ನೂ ಬಾಕಿ ಉಳಿದಿದೆ.

Trending News