Watermelon seeds health benefits: ಕಲ್ಲಂಗಡಿ ಬೀಜಗಳಲ್ಲಿನ ಮೆಗ್ನೀಸಿಯಮ್, ಕಾರ್ಬೋಹೈಡ್ರೇಟ್ಗಳು ಚಯಾಪಚಯ ಕ್ರಿಯೆಗೆ ಸಹಾಯ ಮಾಡುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟದ ಮೇಲೆ ಪರಿಣಾಮ ಬೀರುತ್ತದೆ. ಕಲ್ಲಂಗಡಿ ಬೀಜಗಳು ಟೈಪ್-2 ಮಧುಮೇಹವನ್ನು ತಡೆಯುತ್ತದೆ.
Health Benefits Watermelon Seeds: ಅನೇಕರು ಕಲ್ಲಂಗಡಿ ಹಣ್ಣು ಸೇವಿಸಲು ಇಷ್ಟಪಡುತ್ತಾರೆ. ಬೇಸಿಗೆಯಲ್ಲಿ ಕಲ್ಲಂಗಡಿ ಹಣ್ಣು ಸೇವಿಸುವುದು ಆರೋಗ್ಯದ ದೃಷ್ಟಿಯಿಂದ ತುಂಬಾ ಉತ್ತಮ. ಕಲ್ಲಂಗಡಿ ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು. ಕಲ್ಲಂಗಡಿಯಲ್ಲಿ ಶೇ.೯೦ರಷ್ಟು ನೀರಿನಂಶವಿದ್ದು, ಇದು ದೇಹವನ್ನು ಹೈಡ್ರೇಟ್ ಆಗಿ ಇರಿಸುತ್ತದೆ. ಬಹುತೇಕರು ಕಲ್ಲಂಗಡಿ ಹಣ್ಣು ಸೇವಿಸುತ್ತಾರೆ. ಆದರೆ ಅದರ ಬೀಜಗಳನ್ನು ಎಸೆದುಬಿಡುತ್ತಾರೆ. ಆದರೆ ಕಲ್ಲಂಗಡಿ ಹಣ್ಣಿನಂತೆ ಅದರ ಬೀಜಗಳ ಸೇವನೆಯೂ ಸಹ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿವೆ. ಕಲ್ಲಂಗಡಿ ಬೀಜಗಳ ಮತ್ತಷ್ಟು ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಕಲ್ಲಂಗಡಿ ಬೀಜಗಳಲ್ಲಿನ ಮೆಗ್ನೀಸಿಯಮ್, ಕಾರ್ಬೋಹೈಡ್ರೇಟ್ಗಳು ಚಯಾಪಚಯ ಕ್ರಿಯೆಗೆ ಸಹಾಯ ಮಾಡುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟದ ಮೇಲೆ ಪರಿಣಾಮ ಬೀರುತ್ತದೆ. ಕಲ್ಲಂಗಡಿ ಬೀಜಗಳು ಟೈಪ್-2 ಮಧುಮೇಹವನ್ನು ತಡೆಯುತ್ತದೆ.
ಕಲ್ಲಂಗಡಿ ಬೀಜಗಳಲ್ಲಿ ಪ್ರೋಟೀನ್, ಮೆಗ್ನೀಸಿಯಮ್, ಸತು, ಕಬ್ಬಿಣ ಮತ್ತು ಆರೋಗ್ಯಕರ ಕೊಬ್ಬುಗಳಿವೆ. ಇವು ದೇಹದಲ್ಲಿ ಪೌಷ್ಟಿಕಾಂಶದ ಕೊರತೆಯನ್ನು ತುಂಬುವುದರ ಜೊತೆಗೆ ಆರೋಗ್ಯ ಪ್ರಯೋಜನ ಒದಗಿಸುತ್ತವೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಅನೇಕ ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ.
ಕಲ್ಲಂಗಡಿ ಬೀಜಗಳಲ್ಲಿ ವಿಟಮಿನ್ ʼಸಿʼ ಮತ್ತು ಆಂಟಿ-ಆಕ್ಸಿಡೆಂಟ್ಗಳು ಸಮೃದ್ಧವಾಗಿವೆ. ಇವು ಚರ್ಮವನ್ನು ಸ್ವಚ್ಛವಾಗಿಡಲು ಸಹಾಯ ಮಾಡುತ್ತವೆ. ಅಕಾಲಿಕ ವಯಸ್ಸಾಗುವಿಕೆಯನ್ನು ತಡೆಯುತ್ತದೆ. ಇದು ಒಣ ತ್ವಚೆ ಮತ್ತು ತುರಿಕೆ ಸಮಸ್ಯೆಯನ್ನೂ ನಿವಾರಿಸುತ್ತದೆ. ಕಲ್ಲಂಗಡಿ ಬೀಜಗಳು ಚರ್ಮದ ಮೇಲೆ ಮಾಯಿಶ್ಚರೈಸರ್ ಆಗಿ ಕಾರ್ಯನಿರ್ವಹಿಸುತ್ತವೆ.
ಕಲ್ಲಂಗಡಿ ಬೀಜಗಳಲ್ಲಿ ಪ್ರೋಟೀನ್, ಕಬ್ಬಿಣ, ಸತು, ಮೆಗ್ನೀಸಿಯಮ್ ಹೇರಳವಾಗಿದೆ. ಈ ಪದಾರ್ಥಗಳು ಕೂದಲಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಕಲ್ಲಂಗಡಿ ಬೀಜಗಳು ಕೂದಲು ಉದುರುವಿಕೆಯನ್ನು ಕಡಿಮೆ ಮಾಡುತ್ತದೆ ಮತ್ತು ಕೂದಲು ಹಾನಿಯಾಗದಂತೆ ರಕ್ಷಿಸುತ್ತದೆ.
ಕಲ್ಲಂಗಡಿ ಬೀಜಗಳು ಏಕಾಪರ್ಯಾಪ್ತ ಮತ್ತು ಬಹುಅಪರ್ಯಾಪ್ತ ಕೊಬ್ಬಿನಾಮ್ಲಗಳನ್ನು ಹೊಂದಿರುತ್ತವೆ. ಈ ಆರೋಗ್ಯಕರ ಕೊಬ್ಬುಗಳು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದು ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ. ಇದಲ್ಲದೆ ಕಲ್ಲಂಗಡಿ ಬೀಜಗಳಲ್ಲಿರುವ ಮೆಗ್ನೀಸಿಯಮ್ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಈ ಬೀಜಗಳು ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡುತ್ತದೆ.