Heat Waves Alert : ರಾಜ್ಯದಲ್ಲಿ ದಿನೇ ದಿನೇ ಸೂರ್ಯನ ತಾಪ ಹೆಚ್ಚಾಗುತ್ತಿದೆ. ಬಿಸಿಲಿನಿಂದ ತತ್ತರಿಸಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.ಆದರೆ ಇದೀಗ ರಾಜ್ಯದಲ್ಲಿ ಉಷ್ಣ ಅಲೆ ಹೆಚ್ಚಾಗಲಿದೆ ಎನ್ನುವ ಮಾಹಿತಿ ಬಂದಿದೆ.ಮುಂದಿನ ನಾಲ್ಕು ದಿನಗಳಲ್ಲಿ ರಾಜ್ಯದ ಕೆಲವು ಭಾಗಗಳಲ್ಲಿ ಉಷ್ಣ ಅಲೆ ಹೆಚ್ಚಾಗಲಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಲಬುರ್ಗಿ, ಬಾಗಲಕೋಟೆ, ತುಮಕೂರು, ಕೋಲಾರ ಸೇರಿದಂತೆ ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಉಷ್ಣ ಅಲೆ ಏಳಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಬಾಗಲಕೋಟೆ, ಕಲಬುರಗಿ, ಬೆಳಗಾವಿ, ರಾಯಚೂರು ಜಿಲ್ಲೆಗಳಲ್ಲಿ ಬೆಚ್ಚನೆಯ ವಾತಾವರಣವಿರಲಿದೆ.ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರಲಿದ್ದು, ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.ರಾಯಚೂರಿನಲ್ಲಿ 43.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಇದನ್ನೂ ಓದಿ : ಲಚ್ಯಾಣ : ಮಹಾರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಮೂವರ ಸಾವು
ರಾಜ್ಯದ ವಿವಿಧೆಡೆ ದಾಖಲಾಗಿರುವ ಉಷ್ಣಾಂಶ :
ಹೆಚ್ಎಎಲ್ ನಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ
ನಗರದಲ್ಲಿ 38.5ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,
ಕೆಐಎಎಲ್ ನಲ್ಲಿ 38.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ
ಜಿಕೆವಿಕೆಯಲ್ಲಿ 37.0ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 34.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,
ಕಾರವಾರದಲ್ಲಿ 36.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 29.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,
ಶಿರಾಲಿಯಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,
ಪಣಂಬೂರಿನಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 27.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಇದನ್ನೂ ಓದಿ : Loksabha election : ಶಾಂತಿಯುತವಾಗಿ ಚಾಮರಾಜನಗರದ ಇಂಡಿಗನತ್ತ ಗ್ರಾಮದಲ್ಲಿ ಮರುಮತದಾನ
ಬೀದರ್ ನಲ್ಲಿ 39.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,
ಬಾಗಲಕೋಟೆಯಲ್ಲಿ 42.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 28.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,
ಧಾರವಾಡದಲ್ಲಿ 39.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,
ಗದಗದಲ್ಲಿ 40.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಾಮರಾಜನಗರದಲ್ಲಿ 40.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,
ಚಿತ್ರದುರ್ಗದಲ್ಲಿ 39.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.