Handloom Technology: ಬಳ್ಳಾರಿ: 2024-25ನೇ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಕೋರ್ಸ್ ಕಲಿಕೆಗಾಗಿ 44 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ, ಪ್ರತಿ ತಿಂಗಳು ರೂ.2,500 ರಂತೆ ಶಿಷ್ಯವೇತನ ನೀಡಲಾಗುವುದು ಹಾಗೂ ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.
ಸಾಮಾನ್ಯ ವರ್ಗದ ಅಭ್ಯರ್ಥಿಗಳು ಜು.01ಕ್ಕೆ ಅನ್ವಯಿಸುವಂತೆ 15 ರಿಂದ 23 ವರ್ಷ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ವರ್ಗದ ಅಭ್ಯರ್ಥಿಗಳು 15 ರಿಂದ 25ರ ವಯೋಮಿತಿಯಲ್ಲಿರಬೇಕು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೂಢೀಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತದೆ.
ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಮೇ 28 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು.
ಅರ್ಜಿಗಳನ್ನು https://khtigadag.ac.in/Admissionform.pdf ಲಿಂಕ್ನಲ್ಲಿ ಡೌನ್ಲೊಡ್ ಮಾಡಿಕೊಳ್ಳಬಹುದು.
ಡಿಪ್ಲೋಮಾ ಕೋರ್ಸ್ಗಳಿಗೆ ಲಭ್ಯವಿರುವ ಸಂಸ್ಥೆಗಳ ವಿವರ:
ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ-ಬೆಟಗೇರಿ (ಕರ್ನಾಟಕ) - 22 ಅಭ್ಯರ್ಥಿಗಳು, ಭಾರತಿಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸೇಲಂ (ತಮಿಳುನಾಡು) - 17 ಅಭ್ಯರ್ಥಿಗಳು, ಎಸ್.ಪಿ.ಕೆ.ಎಂ. ಭಾರತಿಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ (ನೆಲ್ಲೂರು ಜಿಲ್ಲೆ, ಆಂಧ್ರಪ್ರದೇಶ) - 03 ಅಭ್ಯರ್ಥಿಗಳು, ಭಾರತಿಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು (ಕೇರಳ) - 02 ಅಭ್ಯರ್ಥಿಗಳು ಸೇರಿದಂತೆ ಒಟ್ಟು 44 ಅಭ್ಯರ್ಥಿಗಳ ಸೀಟ್ಗಳನ್ನು ಕಾಯ್ದಿರಿಸಲಾಗಿದೆ.
ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೋಮಾ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಲಿಂಗ್ಗಾಗಿ ಕರೆಯಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಫಾರಂಗಳಿಗಾಗಿ ನಗರದ ಅನಂತಪುರ ರಸ್ತೆಯ ಹೊಸ ಜಿಲ್ಲಾಡಳಿತ ಭವನದ ‘ಎ’ ಬ್ಲಾಕ್ನ 1ನೇ ಮಹಡಿಯ ಕೊಠಡಿ ಸಂಖ್ಯೆ 29ರ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರವರ ಕಚೇರಿ ಅಥವಾ ಮೊ.9902772936, 9844837264 ಮತ್ತು 9041840918 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.