ಮಹಾರಾಷ್ಟ್ರದಲ್ಲಿ BJP-NCP ಸರ್ಕಾರ ರಚನೆ: ಫಡ್ನವೀಸ್, ಅಜಿತ್ ಪವಾರ್ ಅಭಿನಂದಿಸಿದ ಮೋದಿ

ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಎನ್‌ಸಿಪಿ ಸರ್ಕಾರ ರಚನೆಯಾದ ಬಳಿಕ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರನ್ನು ಟ್ವೀಟ್ ಮಾಡಿ ಅಭಿನಂದಿಸಿದ್ದಾರೆ.  

Last Updated : Nov 23, 2019, 09:49 AM IST
ಮಹಾರಾಷ್ಟ್ರದಲ್ಲಿ BJP-NCP ಸರ್ಕಾರ ರಚನೆ: ಫಡ್ನವೀಸ್, ಅಜಿತ್ ಪವಾರ್ ಅಭಿನಂದಿಸಿದ ಮೋದಿ title=

ಮುಂಬೈ: ಮಹಾರಾಷ್ಟ್ರ(Maharashtra)ದಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಎನ್‌ಸಿಪಿ(NCP) ಸಹಯೋಗದೊಂದಿಗೆ ಬಿಜೆಪಿ (BJP) ಸರ್ಕಾರ ರಚಿಸಿದ್ದು, ದೇವೇಂದ್ರ ಫಡ್ನವೀಸ್(Devendra Fadnavis) ರಾಜ್ ಭವನದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಎನ್‌ಸಿಪಿಯ  ಅಜಿತ್ ಪವಾರ್(Ajit pawar) ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಇಬ್ಬರಿಗೂ ಪ್ರಮಾಣ ವಚನ ಬೋಧಿಸಿದರು. ರಾಜ್ಯದಲ್ಲಿ ಬಿಜೆಪಿ-NCP  ರಚನೆ ಬಳಿಕ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ(Narendra Modi)ಸಿಎಂ ದೇವೇಂದ್ರ ಫಡ್ನವೀಸ್ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರನ್ನು ಅಭಿನಂದಿಸಿದ್ದಾರೆ.

ಮಹಾರಾಷ್ಟ್ರದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದೇವೇಂದ್ರ ಫಡ್ನವಿಸ್ ಜಿ ಮತ್ತು ಅಜಿತ್ ಪವಾರ್ ಜಿ ಅವರಿಗೆ ಅಭಿನಂದನೆಗಳು ಎಂದು ಅವರು ಬರೆದಿದ್ದಾರೆ. ಮಹಾರಾಷ್ಟ್ರದ ಉಜ್ವಲ ಭವಿಷ್ಯಕ್ಕಾಗಿ ಅವರು ಶ್ರದ್ಧೆಯಿಂದ ಕೆಲಸ ಮಾಡುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದವರು ತಿಳಿಸಿದ್ದಾರೆ.

ಮಹಾರಾಷ್ಟ್ರದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಅವರನ್ನು ಬಿಜೆಪಿ ಅಧ್ಯಕ್ಷ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಅವರೂ ಅಭಿನಂದಿಸಿದರು. ಅವರು ಟ್ವೀಟ್ ನಲ್ಲಿ, 'ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದೇವೇಂದ್ರ ಫಡ್ನವೀಸ್ ಮತ್ತು ರಾಜ್ಯದ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಅಜಿತ್ ಪವಾರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಈ ಸರ್ಕಾರವು ಮಹಾರಾಷ್ಟ್ರದ ಅಭಿವೃದ್ಧಿ ಮತ್ತು ಕಲ್ಯಾಣಕ್ಕೆ ನಿರಂತರವಾಗಿ ಬದ್ಧವಾಗಿರುತ್ತದೆ ಮತ್ತು ರಾಜ್ಯದ ಪ್ರಗತಿಯ ಹೊಸ ಮಾನದಂಡಗಳನ್ನು ಹೊಂದಿಸುತ್ತದೆ ಎಂದು ನನಗೆ ವಿಶ್ವಾಸವಿದೆ' ಎಂದಿದ್ದಾರೆ.

ಅದೇ ಸಮಯದಲ್ಲಿ, ಪ್ರಮಾಣವಚನ ಸ್ವೀಕರಿಸಿದ ನಂತರ, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮಹಾರಾಷ್ಟ್ರದಲ್ಲಿ ಸ್ಪಷ್ಟವಾದ ಜನಾದೇಶವನ್ನು ನೀಡಿದ್ದಾರೆ. ಆದರೆ ನಮ್ಮೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡು ಹೋರಾಡಿದ ಶಿವಸೇನೆ ಜನಾದೇಶವನ್ನು ತಿರಸ್ಕರಿಸಿದರು. ಅಲ್ಲದೆ ಬೇರೆ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಪ್ರಯತ್ನಿಸಿತು. ಆದರೆ ಅಂತಹ ಮೈತ್ರಿಯಿಂದ ರಾಜ್ಯದಲ್ಲಿ ಸ್ಥಿರ ಸರ್ಕಾರ ಸಾಧ್ಯವಿರಲಿಲ್ಲ. ಅದಕ್ಕಾಗಿ ನಾವು ಎನ್‌ಜಿಪಿ ಜೊತೆಗೆ ಮೈತ್ರಿ ಮಾಡಿಕೊಂಡೆವು. ರಾಜ್ಯದಲ್ಲಿ ಬಿಜೆಪಿ-NCP ಮೈತ್ರಿ ಸರ್ಕಾರ ಶಾಶ್ವತ ಮತ್ತು ಸ್ಥಿರ ಸರ್ಕಾರವನ್ನು ನೀಡಲಿದೆ. ನಮ್ಮೊಂದಿಗೆ ಕೈಜೋಡಿಸಿದ್ದಕ್ಕಾಗಿ ಅಜಿತ್ ಪವಾರ್ ಅವರಿಗೆ ಧನ್ಯವಾದಗಳು ಎಂದರು.
 

Trending News