ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ ಟಿ ೨೦ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ 10 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
WHAT. A. CHASE 🧡
A 🔟-wicket win for @SunRisers with more than 🔟 overs to spare!
Scorecard ▶️ https://t.co/46Rn0QwHfi#TATAIPL | #SRHvLSG pic.twitter.com/kOxzoKUpXK
— IndianPremierLeague (@IPL) May 8, 2024
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್ ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿತು.ಲಕ್ನೋ ತಂಡದ ಪರವಾಗಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಆಯುಶ್ ಬದೊನಿ ಕೇವಲ 30 ಎಸೆತಗಳಲ್ಲಿ 55 ರನ್ ಗಳಿಸುವ ಮೂಲಕ ತಂಡಕ್ಕೆ ಆಸರೆಯಾದರು.ಇನ್ನೊಂದೆಡೆಗೆ ಪೂರಣ್ 26 ಎಸೆತಗಳಲ್ಲಿ ಆರು ಬೌಂಡರಿ ಹಾಗೂ 1 ಸಿಕ್ಸರ್ ಗಳ ನೆರವಿನಿಂದ 48 ರನ್ ಗಳಿಸಿದರು.ಇದರಿಂದಾಗಿ 20 ಓವರ್ ಗಳಲ್ಲಿ ಲಕ್ನೋ ತಂಡವು ನಾಲ್ಕು ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿತು.
The Punch.ev Electric Striker of the Match between Sunrisers Hyderabad & Lucknow Super Giants goes to Travis Head.#TATAIPL | @Tataev | #PunchevElectricStriker | #BeyondEveryday | #SRHvLSG pic.twitter.com/5vbnhxYlx9
— IndianPremierLeague (@IPL) May 8, 2024
ಲಕ್ನೋ ತಂಡವು ನೀಡಿದ ಈ ಸಾಧಾರಣ ಮೊತ್ತವನ್ನು ಬೆನ್ನತ್ತಿದ ಸನ್ ರೈಸರ್ಸ್ ಹೈದರಾಬಾದ್ ತಂಡವು 9.4 ಓವರ್ ಗಳಲ್ಲಿ 167 ರನ್ ಗಳಿಸುವ ಮೂಲಕ ಐತಿಹಾಸಿಕ ಗೆಲುವನ್ನು ದಾಖಲಿಸಿತು.ಹೈದರಾಬಾದ್ ತಂಡದ ಪರವಾಗಿ ಸ್ಪೋಟಕ ಬ್ಯಾಟಿಂಗ್ ಪದರ್ಶನ ನೀಡಿದ ಟ್ರಾವಿಸ್ ಹೆಡ್ ಕೇವಲ 30 ಎಸೆತಗಳಲ್ಲಿ ಎಂಟು ಬೌಂಡರಿ ಹಾಗೂ ಎಂಟು ಸಿಕ್ಸರ್ ಗಳ ನೆರವಿನಿಂದ 89 ರನ್ ಗಳಿಸಿದರೆ ಇನ್ನೊಂದೆಡೆಗೆ ಅಭಿಷೇಕ್ ಶರ್ಮಾ 28 ಎಸೆತಗಳಲ್ಲಿ ಎಂಟು ಬೌಂಡರಿ ಹಾಗೂ ಆರು ಸಿಕ್ಸರ್ ಗಳ ನೆರವಿನಿಂದ 75 ರನ್ ಗಳಿಸಿದರು.ಆ ಮೂಲಕ ಹೈದರಾಬಾದ್ ತಂಡವು ಐತಿಹಾಸಿಕ ಗೆಲುವನ್ನು ಸಾಧಿಸಿತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.