ನವದೆಹಲಿ: ಮಹಾರಾಷ್ಟ್ರದಲ್ಲಿ ಬಿಜೆಪಿಯಿಂದ ಸರ್ಕಾರ ರಚನೆಯ ವಿರುದ್ಧ ವಿರೋಧ ಪಕ್ಷಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಂಗಳವಾರ ಭಾರತದ ಸಂವಿಧಾನದ ಮುನ್ನುಡಿ ಓದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸಭೆಯನ್ನುದ್ದೇಶಿಸಿ ಮಾತನಾಡಿದ 'ಸಂವಿಧಾನ ದಿನಾಚರಣೆಯ' ಸಂಸತ್ತಿನ ಜಂಟಿ ಸಭೆ ನಡೆಯುತ್ತಿರುವುದರಿಂದ ಪ್ರತಿಪಕ್ಷ ಪಕ್ಷಗಳ ನಾಯಕರು ಪ್ರತಿಭಟನೆ ನಡೆಸಿದರು.
#WATCH #ConstitutionDay: Congress interim President Sonia Gandhi reads a copy of Indian Constitution in front of the Ambedkar Statue in the Parliament. Leaders of Opposition parties are protesting in Parliament premises today, opposing govt formation in Maharashtra by BJP. pic.twitter.com/5QQiN7TMvh
— ANI (@ANI) November 26, 2019
'ಸ್ಟಾಪ್ ಮರ್ಡರ್ ಆಫ್ ಡೆಮಾಕ್ರಸಿ' 'ನಮ್ಮ ಸಂವಿಧಾನವನ್ನು ಉಳಿಸಿ' ಮತ್ತು 'ಸಂವಿಧಾನದಲ್ಲಿ ಬಿಕ್ಕಟ್ಟು' ಎನ್ನುವ ಫಲಕಗಳನ್ನು ಸದಸ್ಯರು ಹಿಡಿದು ಪ್ರತಿಭಟನೆಯಲ್ಲಿ ಭಾಗವಹಿಸಿದರು.ರಾಹುಲ್ ಗಾಂಧಿ, ಗುಲಾಮ್ ನಬಿ ಆಜಾದ್, ಎ.ಕೆ. ಆಂಟನಿ ಸೇರಿದಂತೆ ಹಲವಾರು ಕಾಂಗ್ರೆಸ್ ಮುಖಂಡರು ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚಿಸುವುದನ್ನು ವಿರೋಧಿಸಿ ಅಂಬೇಡ್ಕರ್ ಪ್ರತಿಮೆಯ ಮುಂದೆ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಏತನ್ಮಧ್ಯೆ, ಕಾಂಗ್ರೆಸ್-ಎನ್‌ಸಿಪಿ-ಶಿವಸೇನೆ ಜಂಟಿಯಾಗಿ ಸಲ್ಲಿಸಿದ್ದ ಮನವಿಯನ್ನು ಆಲಿಸಿದ ಸುಪ್ರೀಂಕೋರ್ಟ್ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬುಧವಾರ ಸದನದ ಪರೀಕ್ಷೆ ನಡೆಸಬೇಕೆಂದು ಸುಪ್ರೀಂ ಕೋರ್ಟ್ ತಿಳಿಸಿದೆ.