ದಕ್ಷಿಣ ರೈಲ್ವೆ (Southern Railway, RRB) ಅಪ್ರೆಂಟಿಸ್ ಅಡಿಯಲ್ಲಿ ಫಿಟ್ಟರ್, ವೆಲ್ಡರ್, ಎಲೆಕ್ಟ್ರಿಷಿಯನ್, ಮೆಕ್ಯಾನಿಕ್ ಮತ್ತು ಇತರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 667 ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಲಾಗುವುದು ಎಂದು ತಿಳಿಸಲಾಗಿದೆ. ಇದಕ್ಕಾಗಿ ಅರ್ಜಿ ಸಲ್ಲಿಸಲು ಡಿಸೆಂಬರ್ 31, 2019 ಕೊನೆಯ ದಿನಾಂಕವಾಗಿದ್ದು, ಈ ಹುದ್ದೆಗಳಿಗೆ 10 ನೇ ತರಗತಿ ಮತ್ತು ಐಟಿಐ ಉತ್ತೀರ್ಣರಾದವರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ಹುದ್ದೆ ಹೆಸರು ಮತ್ತು ಸಂಖ್ಯೆ:
ಫಿಟ್ಟರ್, ವೆಲ್ಡರ್, ಎಲೆಕ್ಟ್ರಿಷಿಯನ್, ಮೆಕ್ಯಾನಿಕ್ ಮತ್ತು ಇತರರು.
ಹುದ್ದೆಗಳ ಸಂಖ್ಯೆ - 667
ಅರ್ಹತೆ:
10 ನೇ ತರಗತಿ ಮತ್ತು ಐಟಿಐ ಉತ್ತೀರ್ಣರಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಕೆಲವು ಹುದ್ದೆಗಳಿಗೆ 12ನೇ ತರಗತಿಯಲ್ಲಿ ಕಡ್ಡಾಯವಾಗಿ ವಿಜ್ಞಾನ ವಿಭಾಗದಲ್ಲಿ ಓದಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 15 ವರ್ಷ ಮತ್ತು ಗರಿಷ್ಠ 23 ವರ್ಷ ವಯೋಮಾನದವರು ಅರ್ಜಿ ಸಲ್ಲಿಸಬಹುದು. ಕಾಯ್ದೆಯ ಪ್ರಕಾರ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.
ಅರ್ಜಿ ಶುಲ್ಕ:
100 ರೂಪಾಯಿ
ಆಯ್ಕೆ ಪ್ರಕ್ರಿಯೆ:
10ನೇ ತರಗತಿ ಮತ್ತು ಐಟಿಐನಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಮಾಡಲಾಗುವುದು. ಇದರ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಗೆ ಯಾವುದೇ ಪರೀಕ್ಷೆ ಇರುವುದಿಲ್ಲ.
ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ srindianrailways.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.