Prajwal Revanna Arrest: ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ 34 ದಿನಗಳ ನಂತರ ವಿದೇಶದಿಂದ ಹಿಂದಿರುಗಿದ್ದಾರೆ. ಗುರುವಾರ(ಮೇ 30) ತಡರಾತ್ರಿ ಪ್ರಜ್ವಲ್ ರೇವಣ್ಣ ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Kempegowda International Airport) ಬಂದಿಳಿದ ಕೂಡಲೇ ಎಸ್ಐಟಿ ಅವರನ್ನು ಬಂಧಿಸಿದೆ.
ಜರ್ಮನಿಯ ಮ್ಯೂನಿಕ್ ನಗರದಿಂದ ಗುರುವಾರ (ಮೇ 30) ಮಧ್ಯಾಹ್ನ ಹೊರಟಿದ್ದ ಪ್ರಜ್ವಲ್ ರೇವಣ್ಣ ರಾತ್ರಿ 12:40ಕ್ಕೆ ಬೆಂಗಳೂರಿಗೆ ಆಗಮಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿಯೇ ಅವರನ್ನು ವಶಕ್ಕೆ ಪಡೆದುಕೊಂಡ ಎಸ್ಐಟಿ ವಿಮಾನ ನಿಲ್ದಾಣದಿಂದ ಎಸ್ಐಟಿ ಕಚೇರಿಗೆ ಕರೆತಂದಿದೆ. ಪ್ರಜ್ವಲ್ ರೇವಣ್ಣ ಬಂಧನ (Prajwal Revanna Arrest) ಹಿನ್ನಲೆಯಲ್ಲಿ ಚಾಲುಕ್ಯ ಸರ್ಕಲ್ ಎಸ್ಐಟಿ ಕಚೇರಿ ಬಳಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.
ಇದನ್ನೂ ಓದಿ- ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ರದ್ದುಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ಎಸ್ಐಟಿ ಮನವಿ
ಇಂದು ವೈದ್ಯಕೀಯ ಪರೀಕ್ಷೆಗೆ ಒಳಗಾಗಲಿರುವ ಪ್ರಜ್ವಲ್ ರೇವಣ್ಣ:
ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನಕ್ಕೊಳಗಾಗಿರುವ ಪ್ರಜ್ವಲ್ ರೇವಣ್ಣ ಅವರನ್ನು ಎಸ್ಐಟಿ ತಂಡ ಇಂದು ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಿದ್ದು, ನಂತರ ಕೋರ್ಟ್ ಗೆ ಹಾಜರುಪಡಿಸಿ ವಿಚಾರಣೆಗಾಗಿ ಕಸ್ಟಡಿಗೆ ಪಡೆಯಲು ತಯಾರಿ ನಡೆಸಿದೆ.
ಇಂದಿನಿಂದ ಶುರುವಾಗುತ್ತೆ ಎಸ್ಐಟಿ ಅಸಲಿ ತನಿಖೆ:
ಲೈಂಗಿಕ ದೌರ್ಜನ್ಯ (Sexual Assault), ಅತ್ಯಾಚಾರ ಆರೋಪದಲ್ಲಿ ಬಂಧನವಾಗಿರುವ ಸಂಸದ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಹಲವು ನೋಟೀಸ್ ಜಾರಿ ಮಾಡಿದರೂ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ತನಿಖೆಯಲ್ಲಿ ಸಾಕಷ್ಟು ಹಿನ್ನೆಡೆ ಉಂಟಾಗಿತ್ತು. ಇಡೀ ಪ್ರಕರಣದ ಮುಖ್ಯ ಆರೋಪಿ ಆಗಿರೋ ಪ್ರಜ್ವಲ್ ರೇವಣ್ಣನನ್ನು ಇಂದು ಬೆಳಗ್ಗೆಯಿಂದ ತೀವ್ರವಾಗಿ ವಿಚಾರಣೆಗೆ ಒಳಪಡಿಸಲಿದ್ದಾರೆ.
ಅತ್ಯಾಚಾರ ಮಾಡಿದ್ದಾರೆ ಎನ್ನಲಾದ ಎಲ್ಲ ಸ್ಥಳಗಳಲ್ಲಿ ಪ್ರಜ್ವಲ್ ರೇವಣ್ಣನಿಗೆ ಸಂಬಂಧಿಸಿದಂತಹ ಎಲ್ಲ ವಸ್ತುಗಳನ್ನು ಹಾಗೂ ಪ್ರಜ್ವಲ್ ವಿದೇಶದಿಂದ ಬರುವಾಗ ತಂದಿದ್ದ ವಸ್ತುಗಳನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಅವರು ಬಳಸುತ್ತಿದ್ದ ಮೊಬೈಲ್ ಅನ್ನೂ ಎಸ್ಐಟಿ ವಶಕ್ಕೆ ಪಡೆದಿದೆ.
ಇದನ್ನೂ ಓದಿ- ಪ್ರಜ್ವಲ್.. ನೀನು ಎಲ್ಲೇ ಇದ್ದರೂ ವಾಪಸ್ ಬಾ.. : ಹೆಚ್.ಡಿ.ಕುಮಾರಸ್ವಾಮಿ
ಈಗಾಗಲೇ ಪ್ರಜ್ವಲ್ ರೇವಣ್ಣರನ್ನ ವಿಚಾರಣೆಗೆ ಒಳಪಡಿಸಲು ಎಸ್ಪಿಪಿ ಜಗದೀಶ್ ಹಾಗೂ ತನಿಖಾ ತಂಡವು ಎರಡು ಆಯಾಮಗಳಲ್ಲಿ ಪ್ರಶ್ನೆಗಳನ್ನು ಸಿಡ್ಡಪಡಿಸಿದೆ. ವಿಚಾರಣೆ ವೇಳೆ ತನಿಖಾ ಹಂತದಲ್ಲಿ ತಲೆಮರೆಸಿಕೊಂಡಿದ್ದ ಬಗ್ಗೆಯೂ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.