Prajwal Revanna Arrest: ಪ್ರಜ್ವಲ್ ರೇವಣ್ಣನನ್ನು ಮಹಿಳಾ ಅಧಿಕಾರಿಗಳೇ ಬಂಧಿಸಿದ್ದು ಏಕೆ?

MP Prajwal Revanna Arrest: ಲೋಕಸಭಾ ಚುನಾವಣೆ ಮುಗಿಸಿ ಏಪ್ರಿಲ್ 27ರಂದು ಜರ್ಮನಿಗೆ ತೆರಳಿದ್ದ 33 ವರ್ಷದ ಪ್ರಜ್ವಲ್ ರೇವಣ್ಣ ಇಂದು ಬೆಳಗ್ಗೆ ಮ್ಯೂನಿಚ್‌ನಿಂದ ವಾಪಸ್ಸಾದರು. ವಿಮಾನ ನಿಲ್ದಾಣದಲ್ಲಿಯೇ ಪ್ರಜ್ವಲ್‌ನನ್ನು ಬಂಧಿಸಿ ವಿಚಾರಣೆಗೆ ಸಿಐಡಿ ಕಚೇರಿಗೆ ಕರೆದೊಯ್ಯಲಾಯಿತು.

Written by - Puttaraj K Alur | Last Updated : May 31, 2024, 06:48 PM IST
  • ಹಲವಾರು ಮಹಿಳೆಯರ ಮೇಲೆ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ
  • ಜೂನ್ 6ರವರೆಗೆ ಸಂಸದ ಪ್ರಜ್ವಲ್ ರೇವಣ್ಣನನ್ನು SIT ಕಸ್ಟಡಿಗೆ ಒಪ್ಪಿಸಿದ 42ನೇ ACMM ನ್ಯಾಯಾಲಯ
  • ವಾದ-ವಿವಾದ ಆಲಿಸಿದ ನ್ಯಾಯಾಲಯವು 1 ವಾರ ಕಸ್ಟಡಿಯಲ್ಲಿರಿಸಿಕೊಳ್ಳಲು ಅವಕಾಶ ನೀಡಿದೆ
Prajwal Revanna Arrest: ಪ್ರಜ್ವಲ್ ರೇವಣ್ಣನನ್ನು ಮಹಿಳಾ ಅಧಿಕಾರಿಗಳೇ ಬಂಧಿಸಿದ್ದು ಏಕೆ? title=
ಪ್ರಜ್ವಲ್‌ನನ್ನು ಮಹಿಳಾ ಅಧಿಕಾರಿಗಳು ಬಂಧಿಸಿದ್ದು ಏಕೆ?

Prajwal Revanna Arrest: ಹಲವಾರು ಮಹಿಳೆಯರ ಮೇಲೆ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣನನ್ನು ಜೂನ್ 6ರವರೆಗೆ ವಿಶೇಷ ತನಿಖಾ ದಳ(SIT)ದ ಕಸ್ಟಡಿಗೆ ಒಪ್ಪಿಸಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಶುಕ್ರವಾರ ಆದೇಶಿಸಿದೆ.

ಶುಕ್ರವಾರ ಬೆಳ್ಳಂಬೆಳಗ್ಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆದ SIT ಅಧಿಕಾರಿಗಳು, ವೈದ್ಯಕೀಯ ಪರೀಕ್ಷೆ ಬಳಿಕ ಕೋರ್ಟ್ ಮುಂದೆ ವಿಚಾರಣೆಗೆ ಹಾಜರುಪಡಿಸಿತು. ಹೆಚ್ಚಿನ ವಿಚಾರಣೆಗೆ 15 ದಿನ ತನ್ನ ವಶಕ್ಕೆ ನೀಡುವಂತೆ SIT ಮನವಿ ಮಾಡಿಕೊಂಡಿತ್ತು. ವಾದ-ವಿವಾದ ಆಲಿಸಿದ ನ್ಯಾಯಾಲಯವು 1 ವಾರ ಕಸ್ಟಡಿಯಲ್ಲಿರಿಸಿಕೊಳ್ಳಲು ಅವಕಾಶ ನೀಡಿದೆ.

ಇದನ್ನೂ ಓದಿ: Photos: ಕನ್ಯಾಕುಮಾರಿಯಲ್ಲಿ 45 ಗಂಟೆಗಳ ಧ್ಯಾನ ಆರಂಭಿಸಿದ ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಮುಗಿಸಿ ಏಪ್ರಿಲ್ 27ರಂದು ಜರ್ಮನಿಗೆ ತೆರಳಿದ್ದ 33 ವರ್ಷದ ಪ್ರಜ್ವಲ್ ರೇವಣ್ಣ ಇಂದು ಬೆಳಗ್ಗೆ ಮ್ಯೂನಿಚ್‌ನಿಂದ ವಾಪಸ್ಸಾದರು. ವಿಮಾನ ನಿಲ್ದಾಣದಲ್ಲಿಯೇ ಪ್ರಜ್ವಲ್‌ನನ್ನು ಬಂಧಿಸಿ ವಿಚಾರಣೆಗೆ ಸಿಐಡಿ ಕಚೇರಿಗೆ ಕರೆದೊಯ್ಯಲಾಯಿತು. ನಂತರ ಹೆಚ್ಚಿನ ವಿಚಾರಣೆಗೆ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. SIT ಪರ ನ್ಯಾಯವಾದಿಗಳು ಮತ್ತು ಪ್ರಜ್ವಲ್ ಪರ ವಕೀಲ ಅರುಣ್ ವಾದ ಮಂಡಿಸಿದರು. ವಾದ-ವಿವಾದ ಆಲಿಸಿದ ಬಳಿಕ ನ್ಯಾಯಾಧೀಶರು ಹೆಚ್ಚಿನ ವಿಚಾರಣೆಗೆ ಜೂನ್ 6ರವರೆಗೆ SIT ಕಸ್ಟಡಿಗೆ ಒಪ್ಪಿಸಿದರು.  

ಮಹಿಳಾ ಅಧಿಕಾರಿಗಳೇ ಬಂಧಿಸಿದ್ದು ಏಕೆ?

ಇದನ್ನೂ ಓದಿ: ಪ್ರಧಾನಿ ಮೋದಿ ಧ್ಯಾನ ಮಾಡಲು ಕನ್ಯಾಕುಮಾರಿಯ ವಿವೇಕಾನಂದ ಶಿಲಾ ಸ್ಮಾರಕವನ್ನು ಆರಿಸಿಕೊಂಡಿದ್ದೇಕೆ?

ಇನ್ನೂ ಬಂಧನದ ಭೀತಿಯಿಂದ ತಲೆಮರೆಸಿಕೊಂಡಿದ್ದ ಪ್ರಜ್ವಲ್‌ ರೇವಣ್ಣ 35 ದಿನಗಳ ಬಳಿಕ ಕೊನೆಗೂ ಅರೆಸ್ಟ್‌ ಆಗಿದ್ದಾರೆ. ಜರ್ಮನಿಯಿಂದ ಬೆಂಗಳೂರು ಏರ್‌ಪೋರ್ಟ್‌ಗೆ ಆಗಮಿಸುತ್ತಿದ್ದಂತೆ ಪ್ರಜ್ವಲ್‌ನನ್ನು ಮಹಿಳಾ ಅಧಿಕಾರಿಗಳೇ ಬಂಧಿಸಿದರು. ಮೂವರು ಮಹಿಳಾ ಅಧಿಕಾರಿಗಳು ಆರೋಪಿಯನ್ನು ಬಂಧಿಸಿ ಜೀಪ್‌ನಲ್ಲಿ ಕರೆದೊಯ್ದರು. ಪ್ರಜ್ವಲ್‌ ಬಂಧನದ ವೇಳೆ ಜೀಪ್‌ ಚಾಲಕರನ್ನು ಹೊರತುಪಡಿಸಿದರೆ, ಉಳಿದವರೆಲ್ಲ ಮಹಿಳಾ ಅಧಿಕಾರಿಗಳೇ ಇದ್ದರು. ಸಂತ್ರಸ್ತ ಮಹಿಳೆಯರಿಗೆ ನಾವಿದ್ದೇವೆ ಅಂತಾ ಧೈರ್ಯ ತುಂಬುವ ಉದ್ದೇಶದಿಂದ ಈ ರೀತಿ ಪ್ರಜ್ವಲ್‌ನನ್ನು ಮಹಿಳಾ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News