ವಿಧಾನಸಭೆ ಚುನಾವಣೆ ಮಾದರಿಯಲ್ಲಿ ಈಗಲೂ ಎಕ್ಸಿಟ್ ಪೋಲ್ ಸುಳ್ಳಾಗಲಿವೆ: ಡಿಸಿಎಂ ಡಿ.ಕೆ.ಶಿವಕುಮಾರ್

"ಕಳೆದ ವರ್ಷ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಚುನಾವಣೋತ್ತರ ಸಮೀಕ್ಷೆಗಳು ಸುಳ್ಳಾದಂತೆ, ಈ ಬಾರಿಯೂ ಸಮೀಕ್ಷೆಗಳು ಸುಳ್ಳಾಗಲಿವೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

Written by - Prashobh Devanahalli | Edited by - Manjunath N | Last Updated : Jun 2, 2024, 06:53 PM IST
  • ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಭವಿಷ್ಯ ನುಡಿದಿದ್ದ ಸಮೀಕ್ಷೆ ಸುಳ್ಳಾಯಿತು.
  • ಆ ಚುನಾವಣೆಯಲ್ಲಿ ನನ್ನ ಭವಿಷ್ಯವೇ ನಿಜವಾಗಿತ್ತು
  • ಸಮೀಕ್ಷೆ ನಡೆಸುವ ಸಂಸ್ಥೆಗಳು ಐದು ಸಾವಿರದಷ್ಟು ಜನರ ಅಭಿಪ್ರಾಯ ಮಾತ್ರ ಸಂಗ್ರಹ ಮಾಡಿರುತ್ತವೆ
  • ಹೀಗಾಗಿ ಸಮೀಕ್ಷೆಗಳ ಮೇಲೆ ನನಗೆ ನಂಬಿಕೆಯಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಎರಡಂಕಿ ಸ್ಥಾನಗಳನ್ನು ದಾಟಲಿದೆ.
ವಿಧಾನಸಭೆ ಚುನಾವಣೆ ಮಾದರಿಯಲ್ಲಿ ಈಗಲೂ ಎಕ್ಸಿಟ್ ಪೋಲ್ ಸುಳ್ಳಾಗಲಿವೆ: ಡಿಸಿಎಂ ಡಿ.ಕೆ.ಶಿವಕುಮಾರ್ title=

ಬೆಂಗಳೂರು, ಜೂನ್ 2: "ಕಳೆದ ವರ್ಷ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಚುನಾವಣೋತ್ತರ ಸಮೀಕ್ಷೆಗಳು ಸುಳ್ಳಾದಂತೆ, ಈ ಬಾರಿಯೂ ಸಮೀಕ್ಷೆಗಳು ಸುಳ್ಳಾಗಲಿವೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಹೇಳಿದ್ದಿಷ್ಟು;

ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಭವಿಷ್ಯ ನುಡಿದಿದ್ದ ಸಮೀಕ್ಷೆ ಸುಳ್ಳಾಯಿತು. ಆ ಚುನಾವಣೆಯಲ್ಲಿ ನನ್ನ ಭವಿಷ್ಯವೇ ನಿಜವಾಗಿತ್ತು.

ಸಮೀಕ್ಷೆ ನಡೆಸುವ ಸಂಸ್ಥೆಗಳು ಐದು ಸಾವಿರದಷ್ಟು ಜನರ ಅಭಿಪ್ರಾಯ ಮಾತ್ರ ಸಂಗ್ರಹ ಮಾಡಿರುತ್ತವೆ. ಹೀಗಾಗಿ ಸಮೀಕ್ಷೆಗಳ ಮೇಲೆ ನನಗೆ ನಂಬಿಕೆಯಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಎರಡಂಕಿ ಸ್ಥಾನಗಳನ್ನು ದಾಟಲಿದೆ.

ಇದನ್ನೂ ಓದಿ:  ನಾಗೇಂದ್ರರ ವಜಾ ಯಾಕಿಲ್ಲ? ಹಗರಣ ಸಿಬಿಐ ತನಿಖೆಗೇಕೆ ಕೊಟ್ಟಿಲ್ಲ? ಸಿಟಿ ರವಿ ಪ್ರಶ್ನೆ

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ 80 ರಿಂದ 85 ಸ್ಥಾನ ಮಾತ್ರ ಕೊಟ್ಟಿದ್ದರು. 136 ಸ್ಥಾನ ಗೆಲ್ಲುತ್ತೇವೆ ಎಂದು ನನ್ನ ರಾಜಕೀಯ ಅನುಭವದ ಮೇಲೆ ಹೇಳಿದ್ದೆ. ಜೊತೆಗೆ ನಾನು ನಡೆಸಿದ್ದ ಖಾಸಗಿ ಸಮೀಕ್ಷೆ ಪ್ರಕಾರದಂತೆ ಜನ ನಮಗೆ 136 ಸ್ಥಾನ ನೀಡಿದರು. 

ಕರ್ನಾಟಕದ ಜನತೆಗೆ ಅದರಲ್ಲೂ ವಿಶೇಷವಾಗಿ ಮಹಿಳೆಯರಿಗೆ ಕಾಂಗ್ರೆಸ್ ಗ್ಯಾರಂಟಿಗಳ ಮೇಲೆ ನಂಬಿಕೆ ಬಂದಿದೆ. ಇವು ನಮ್ಮ ಕೈ ಹಿಡಿಯಲಿವೆ. ಮೊದಲ ಹಂತದ ಚುನಾವಣೆಗಿಂತ ಎರಡನೇ ಹಂತದ ಚುನಾವಣೆಯಲ್ಲಿ ಎಐಸಿಸಿ ನೀಡಿದ ಗ್ಯಾರಂಟಿಗಳ ಜನರನ್ನು ಹೆಚ್ಚು ಪರಿಣಾಮಕಾರಿಯಾಗಿ ತಲುಪಿವೆ. ಗ್ಯಾರಂಟಿಗಳು ದೇಶದ ಜನರ ಮನಸ್ಸು ಗೆದ್ದಿವೆ.

ಕಾಂಗ್ರೆಸ್ ಅಭಿವೃದ್ಧಿ ವಿಚಾರಗಳ ಮೇಲೆ ಹಾಗೂ ಬಿಜೆಪಿಯವರು ಭಾವನಾತ್ಮಕ ವಿಚಾರಗಳ ಮೇಲೆ ರಾಜಕೀಯ ಮಾಡುತ್ತಾರೆ. ದೇಶದ ವಿಚಾರ ಹೇಳುವುದಿಲ್ಲ, ಕರ್ನಾಟಕದಲ್ಲಿ ಎರಡಂಕಿ ದಾಟುತ್ತೇವೆ ಎನ್ನುವ ಆತ್ಮ ವಿಶ್ವಾಸವಿದೆ".

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

 

Trending News