ತಮ್ಮ ಸಮಾಧಿಯ ಜಾಗವನ್ನು ತಾವೇ ಆಯ್ಕೆ ಮಾಡಿಕೊಂಡಿದ್ದರು ರಾಮೋಜಿ ರಾವ್! ಅದು ಎಲ್ಲಿದೆ, ಯಾಕೆ ಆ ಜಾಗ ಗೊತ್ತಾ?

Ramoji Rao : ರಾಮೋಜಿ ರಾವ್ ಅವರು ಮಾಧ್ಯಮ ಕ್ಷೇತ್ರ ಮಾತ್ರವಲ್ಲದೆ ಸಿನಿಮಾ ಕ್ಷೇತ್ರದಲ್ಲೂ ತಮ್ಮದೇ ಆದ ಛಾಪು ಮೂಡಿಸಿ,  ಉಷಾ ಕಿರಣ್ ಮೂವೀಸ್ ಬ್ಯಾನರ್ ಅಡಿಯಲ್ಲಿ ಹಲವು ಚಿತ್ರಗಳನ್ನ ನಿರ್ಮಿಸಿ ಬಹುಮುಖ ಪ್ರತಿಭೆಯಾಗಿ ಹೊರ ಹೊಮ್ಮಿದವರು ಇವರು. ಪತ್ರಿಕೆ ಸಂಪಾದಕರಾಗಿ, ಸ್ಟುಡಿಯೋ ಸಂಸ್ಥಾಪಕರಾಗಿ, ಚಲನಚಿತ್ರ ನಿರ್ಮಾಪಕರಾಗಿ ಮತ್ತು ಉದ್ಯಮಿಯಾಗಿ ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿದರು

Written by - Zee Kannada News Desk | Last Updated : Jun 8, 2024, 04:44 PM IST
  • ರಾಮೋಜಿ ರಾವ್ ಅವರು ಪತ್ರಿಕಾ ಮತ್ತು ಡಿಜಿಟಲ್ ಕ್ಷೇತ್ರದಲ್ಲಿ ಹಲವು ವಿನೂತನ ಪ್ರಯೋಗಗಳನ್ನು ಸೃಷ್ಟಿಸಿ ಹೊಸ ಟ್ರೆಂಡ್ ಸೃಷ್ಟಿಸಿದರು.
  • ಚಲನಚಿತ್ರ ನಿರ್ಮಾಪಕರಾಗಿ ಮತ್ತು ಉದ್ಯಮಿಯಾಗಿ ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿದರು
  • ಉಷಾ ಕಿರಣ್ ಮೂವೀಸ್ ಬ್ಯಾನರ್ ಅಡಿಯಲ್ಲಿ ಹಲವು ಚಿತ್ರಗಳನ್ನ ನಿರ್ಮಿಸಿ ಬಹುಮುಖ ಪ್ರತಿಭೆಯಾಗಿ ಹೊರ ಹೊಮ್ಮಿದವರು
ತಮ್ಮ ಸಮಾಧಿಯ ಜಾಗವನ್ನು ತಾವೇ ಆಯ್ಕೆ ಮಾಡಿಕೊಂಡಿದ್ದರು ರಾಮೋಜಿ ರಾವ್! ಅದು ಎಲ್ಲಿದೆ, ಯಾಕೆ ಆ ಜಾಗ ಗೊತ್ತಾ?  title=

Ramoji Rao had chosen his burial place :  ಮಾಧ್ಯಮ ಲೋಕದಲ್ಲಿ ಹೊಸ ಕ್ರಾಂತಿಯನ್ನೇ ಹುಟ್ಟು ಹಾಕಿದ ಉದ್ಯಮಿ ರಾಮೋಜಿ ರಾವ್ (87) ಶನಿವಾರ ಜೂನ್‌ 08 ರಂದು ಚಿರ ನಿದ್ರೆಗೆ ಜಾರಿದ್ದಾರೆ. ರಾಮೋಜಿ ರಾವ್ ನವೆಂಬರ್ 16, 1936 ರಂದು ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಪೆದಪರುಪುಡಿ ಎಂಬ ಹಳ್ಳಿಯಲ್ಲಿ ಸಾಮಾನ್ಯ ರೈತನ ಮಗನಾಗಿ ಜನಿಸಿದರು.

ರಾಮೋಜಿ ರಾವ್ ಅವರು ಪತ್ರಿಕಾ ಮತ್ತು ಡಿಜಿಟಲ್ ಕ್ಷೇತ್ರದಲ್ಲಿ ಹಲವು ವಿನೂತನ ಪ್ರಯೋಗಗಳನ್ನು ಸೃಷ್ಟಿಸಿ ಹೊಸ ಟ್ರೆಂಡ್ ಸೃಷ್ಟಿಸಿದರು. ಉಷಾ ಕಿರಣ್ ಮೂವೀಸ್ ಅನೇಕ ಹೊಸ ನಟರನ್ನು ಬೆಳ್ಳಿತೆರೆಗೆ ಪರಿಚಯಿಸಿದೆ. ಹೈದರಾಬಾದಿನಲ್ಲಿ ಹಾಲಿವುಡ್ ಮಾದರಿಯ ಫಿಲ್ಮ್ ಸಿಟಿ ನಿರ್ಮಿಸಬೇಕೆಂಬುದು ಅವರ ಬಹುದಿನಗಳ ಆಸೆಯಾಗಿತ್ತು. ಆ ಕನಸನ್ನು ನನಸು ಮಾಡಲು ಅವರು ರಾಮೋಜಿ ಫಿಲ್ಮ್ ಸಿಟಿಯನ್ನು ನಿರ್ಮಿಸಿದರು. .

ಇದನ್ನು ಓದಿ : ಪ್ರಧಾನಿ ಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಭಾಗವಹಿಸಲಿರುವ ವಿದೇಶಿ ನಾಯಕರ ಸಂಪೂರ್ಣ ಪಟ್ಟಿ ಇಲ್ಲಿದೆ ನೋಡಿ!! 

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಹೈದರಾಬಾದ್‌ನ ಆಸ್ಪತ್ರೆಗೆ ದಾಖಲಿಸಲಿದ್ದರು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಕೊನೆಯುಸಿರೆಳೆದಿದ್ದಾರೆ. ರಾಮೋಜಿ ನಿಧನಕ್ಕೆ ಹಲವು ರಾಜಕೀಯ, ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ರಾಮೋಜಿ ರಾವ್ ಬಗ್ಗೆ ಹಲವು ಕುತೂಹಲಕಾರಿ ವಿಷಯಗಳು ಹೊರ ಬರುತ್ತಿವೆ. ಸಾಯುವ ಮುನ್ನ ಸಮಾಧಿ ನಿರ್ಮಿಸುವ ಸ್ಥಳವನ್ನು ಆಯ್ಕೆ ಮಾಡಿಕೊಂಡಿರುವುದು ಇತ್ತೀಚೆಗೆ ಬೆಳಕಿಗೆ ಬಂದಿದೆ

ಮೂರು ದಿನಗಳ ಹಿಂದೆ ವೈದ್ಯರು ರಾಮೋಜಿ ರಾವ್ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಿ ಸಾಹಸ ಪ್ರದರ್ಶಿಸಿದ್ದರು. ವೈದ್ಯರ ನಿಗಾದಲ್ಲಿದ್ದ ರಾಮೋಜಿ ರಾವ್ ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ತೀವ್ರ ಅಸ್ವಸ್ಥರಾಗಿದ್ದರು. ವೈದ್ಯರು ಅವರಿಗೆ ವೆಂಟಿಲೇಟರ್ ಅಳವಡಿಸಿದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮುಂಜಾನೆ 4.50ಕ್ಕೆ ಕೊನೆಯುಸಿರೆಳೆದಿದ್ದಾರೆ.

ರಾಮೋಜಿ ರಾವ್ ನಿಧನಕ್ಕೆ ಸಿಎಂ ರೇವಂತ್ ರೆಡ್ಡಿ ಸಂತಾಪ ಸೂಚಿಸಿದ್ದಾರೆ. ತೆಲಂಗಾಣ ಸರ್ಕಾರ ರಾಮೋಜಿ ಅವರ ಅಂತಿಮ ಸಂಸ್ಕಾರವನ್ನು ಅಧಿಕೃತ ವಿಧಿಗಳೊಂದಿಗೆ ನಡೆಸಲು ನಿರ್ಧರಿಸಿದೆ. ಅಂತ್ಯಕ್ರಿಯೆಯ ವ್ಯವಸ್ಥೆಗಳ ಮೇಲ್ವಿಚಾರಣೆಗಾಗಿ ಸಿಎಸ್ ಮೂಲಕ ರಂಗಾ ರೆಡ್ಡಿ ಜಿಲ್ಲಾಧಿಕಾರಿ ಮತ್ತು ಸೈಬರಾಬಾದ್ ಆಯುಕ್ತರಿಗೆ ಸಿಎಂ ಸೂಚನೆ ನೀಡಿದ್ದಾರೆ.  

ಇದನ್ನು ಓದಿ : ಮಾದಪ್ಪನ ಬೆಟ್ಟದ ತಪ್ಪಲಲ್ಲಿ ನಾಲ್ವರಿಂದ ವಿಷ ಸೇವನೆ

ಮುದ್ರಣ ಮಾಧ್ಯಮದಲ್ಲಿ ಹೊಸ ಟ್ರೆಂಡ್ ಸೃಷ್ಟಿಸಿದ ಅವರು ಸಿನಿಮಾ ಕ್ಷೇತ್ರದಲ್ಲಿ ಹಲವು ಅತ್ಯುತ್ತಮ ಚಿತ್ರಗಳ ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದರು. ಅದೂ ಅಲ್ಲದೆ ರಾಮೋಜಿ ಫಿಲಂ ಸಿಟಿ ದೇಶದಲ್ಲೇ ಅತ್ಯುತ್ತಮ ಚಿತ್ರ ನಿರ್ಮಿಸಿದೆ. ಅಲ್ಲಿ ಅವರ ಸಮಾಧಿಗೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿದುಬಂದಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News