ಲಕ್ನೋ: ಪೌರತ್ವ ತಿದ್ದುಪಡಿ ಕಾಯ್ದೆ (CAA) ವಿರೋಧದ ಹೆಸರಿನಲ್ಲಿ ಉಪದ್ರವಕ್ಕೆ ಕಾರಣವಾಗುತ್ತಿರುವ ಅಸ್ತವ್ಯಸ್ತವಾಗಿರುವ ಅಂಶಗಳನ್ನು ಕಟ್ಟುನಿಟ್ಟಾಗಿ ಎದುರಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚನೆ ನೀಡಿದ್ದಾರೆ. ಮೌನಲ್ಲಿ ಎನ್ಆರ್ಸಿ ಮತ್ತು ಸಿಎಎ ವಿರುದ್ಧ ನಡೆದ ಪ್ರತಿಭಟನೆ ಸಂದರ್ಭದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಅಜಮ್ಗಢದ ಡಿಐಜಿ ಮನೋಜ್ ತಿವಾರಿ ವಿರುದ್ಧ ಕ್ರಮ ಕೈಗೊಂಡಿದ್ದಾರೆ.
ಆಡಳಿತಾಧಿಕಾರಿಗಳಿಗೆ ಯೋಗಿ ಕಟ್ಟು ನಿಟ್ಟಿನ ಸೂಚನೆ:
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath), ವಿಡಿಯೋಕಾನ್ಫರೆನ್ಸಿಂಗ್ ಮೂಲಕ ರಾಜ್ಯದ ಎಲ್ಲಾ ಎಡಿಜಿಗಳು, ಆಯುಕ್ತರು, ಐಜಿಗಳು, ಡಿಎಂಗಳು ಮತ್ತು ಎಸ್-ಎಸ್ಎಸ್ಪಿಗಳೊಂದಿಗೆ ಸಂವಹನ ನಡೆಸಿದರು. ಈ ಸಂದರ್ಭದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದ ವದಂತಿಯನ್ನು ಹೆಚ್ಚಿಸುವ ಅಂಶಗಳನ್ನು ಮೇಲ್ವಿಚಾರಣೆ ಮಾಡಲು ನಿರ್ದೇಶಿಸಿದರು. ಈ ವೇಳೆ ಕಾನೂನಿನೊಂದಿಗೆ ಆಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.
ಪ್ರತಿಭಟನೆಗೆ ಅನುಮತಿಸದಂತೆ ಸೂಚನೆ:
ಲಕ್ನೋ, ಅಲಿಗಢ, ಮೀರತ್, ಸಹರಾನ್ಪುರ್ ಮತ್ತು ಮೌಗಳಲ್ಲಿ ಧರಣಿ, ಮೆರವಣಿಗೆ ಅಥವಾ ಯಾವುದೇ ರೀತಿಯ ಪ್ರತಿಭಟನೆಗೆ ಅವಕಾಶ ನೀಡದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮೌ ಘಟನೆಯ ಬಗ್ಗೆ, ಮುಖ್ಯಮಂತ್ರಿಗಳು ಪೊಲೀಸ್-ಆಡಳಿತದ ಕ್ರಮಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು ಮತ್ತು ಅಂತಹ ಘಟನೆಗಳನ್ನು ಕಟ್ಟುನಿಟ್ಟಾಗಿ ಎದುರಿಸುವಂತೆ ನಿರ್ದೇಶಿಸಿದರು.
ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಹಿಂಸಾತ್ಮಕ ಪ್ರತಿಭಟನೆ:
ಅಲಿಗಢದಿಂದ ಪ್ರಾರಂಭವಾದ ಪೌರತ್ವ ತಿದ್ದುಪಡಿ ಕಾಯ್ದೆ(CAA)ಯ ವಿರೋಧದ ಬೆಂಕಿ ಸೋಮವಾರ ಅನೇಕ ಜಿಲ್ಲೆಗಳಲ್ಲಿ ಹರಡಿತು. ಮೌನಲ್ಲಿ, ಜನಸಮೂಹವು ಪೊಲೀಸ್ ಠಾಣೆಗೆ ಪ್ರವೇಶಿಸಿ ಅಗ್ನಿಸ್ಪರ್ಶ ಮತ್ತು ವಿಧ್ವಂಸಕ ಕೃತ್ಯಗಳನ್ನು ನಡೆಸಿತು. ಗ್ರಾಮಸ್ಥರು ಎರಡು ಬಸ್ಗಳ ಮೇಲೆ ಕಲ್ಲು ಎಸೆದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸರು ಮತ್ತು ಮಾಧ್ಯಮ ಸಿಬ್ಬಂದಿ ಕಾರುಗಳಿಗೆ ಬೆಂಕಿ ಹಚ್ಚಲಾಗಿದೆ. ಪರಿಸ್ಥಿತಿಯನ್ನು ತಹಬದಿಗೆ ತರಲು ಈ ಪ್ರದೇಶದಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಜೊತೆಗೆ, ಇಡೀ ಜಿಲ್ಲೆಯಲ್ಲಿ ಇಂಟರ್ನೆಟ್ ಸೇವೆಯನ್ನು ಸಹ ನಿಲ್ಲಿಸಲಾಯಿತು. ದಿಯೋಬಂದ್ನಲ್ಲಿ ದಾರುಲ್ ಉಲೂಮ್ ಕ್ಯಾಂಪಸ್ನ ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗಿದರು. ಮುನ್ನೆಚ್ಚರಿಕಾ ಕ್ರಮವಾಗಿ ಅಲಹಾಬಾದ್ ವಿಶ್ವವಿದ್ಯಾಲಯದಲ್ಲಿ ರಜೆ ಘೋಷಿಸಲಾಯಿತು.