ICC T20 World Cup 2024: ಟೀಮ್ ಇಂಡಿಯಾದ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ ಪಾಕ್ ತಂಡ, ಮೆನ್ ಇನ್ ಬ್ಲೂ ಗೆ 6 ರನ್ ಗಳ ರೋಚಕ ಗೆಲುವು

ಇಲ್ಲಿನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಟಿ ೨೦ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ತಂಡವು ಪಾಕ್ ವಿರುದ್ಧ ಆರು ರನ್ ಗಳ ರೋಚಕ ಗೆಲುವನ್ನು ಸಾಧಿಸಿದೆ.

Written by - Manjunath N | Last Updated : Jun 10, 2024, 01:52 AM IST
  • ಇದಾದ ನಂತರ ಕೇವಲ 19 ರನ್ ಗಳಾಗುವಷ್ಟರಲ್ಲಿ ರೋಹಿತ್ ಶರ್ಮಾ ಕೂಡ ಔಟಾದರು.
  • ಇನ್ನೊಂದೆಡೆಗೆ ಇವರಿಗೆ ಸಾಥ್ ನೀಡಿದ ರಿಶಬ್ ಪಂತ್ 20 ರನ್ ಗಳಿಸಿದರು.
  • ನಂತರ ಬಂದಂತಹ ಯಾವುದೇ ಆಟಗಾರ ಕೂಡ ಎರಡು ಅಂಕಿಗಳ ಮೊತ್ತ ವನ್ನು ಗಳಿಸಲಿಲ್ಲ
 ICC T20 World Cup 2024: ಟೀಮ್ ಇಂಡಿಯಾದ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದ ಪಾಕ್ ತಂಡ, ಮೆನ್ ಇನ್ ಬ್ಲೂ ಗೆ 6 ರನ್ ಗಳ ರೋಚಕ ಗೆಲುವು title=

ನ್ಯೂಯಾರ್ಕ್ : ಇಲ್ಲಿನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಟಿ ೨೦ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ತಂಡವು ಪಾಕ್ ವಿರುದ್ಧ ಆರು ರನ್ ಗಳ ರೋಚಕ ಗೆಲುವನ್ನು ಸಾಧಿಸಿದೆ.

ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಪಾಕ್ ತಂಡವು ತನ್ನ ನಿರ್ಧಾರ ಸರಿ ಎನ್ನುವಂತೆ ಟೀಮ್ ಇಂಡಿಯಾದ ಬ್ಯಾಟ್ಸ್ಮನ್ ಗಳನ್ನು ನಿಯಂತ್ರಿಸುವಲ್ಲಿ ಬೌಲರ್ ಗಳು ಯಶಸ್ವಿಯಾದರು.ಒಂದೆಡೆ ಮೊದಲು ಬ್ಯಾಟಿಂಗ್ ಆರಂಭಿಸಿದ ಟೀಮ್ ಇಂಡಿಯಾಗೆ ಆರಂಭದಲ್ಲಿಯೇ ತಂಡದ ಮೊತ್ತ 12 ರನ್ ಗಳಾಗಿದ್ದಾಗ ವಿರಾಟ್ ಕೊಹ್ಲಿ ಅವರ ವಿಕೆಟ್ ಕಳೆದುಕೊಂಡು ಆಘಾತವನ್ನು ಎದುರಿಸಿತು.

ಇದಾದ ನಂತರ ಕೇವಲ 19 ರನ್ ಗಳಾಗುವಷ್ಟರಲ್ಲಿ ರೋಹಿತ್ ಶರ್ಮಾ ಕೂಡ ಔಟಾದರು. ಒಂದೆಡೆ ವಿಕೆಟ್ ಹೋಗುತ್ತಿದ್ದರೆ ಇನ್ನೊಂದೆಡೆಗೆ ಸ್ಪೋಟಕ ಬ್ಯಾಟಿಂಗ್ ಗೆ ಮುಂದಾದ ರಿಶಬ್ ಪಂತ್ ಕೇವಲ 31 ಎಸೆತಗಳಲ್ಲಿ ಆರು ಬೌಂಡರಿಗಳ ನೆರವಿನೊಂದಿಗೆ 42 ರನ್ ಗಳಿಸಿದರು.ಇನ್ನೊಂದೆಡೆಗೆ ಇವರಿಗೆ ಸಾಥ್ ನೀಡಿದ ಅಕ್ಸರ್ ಪಟೇಲ್ 20 ರನ್ ಗಳಿಸಿದರು. ತದನಂತರ ಬಂದಂತಹ ಯಾವುದೇ ಆಟಗಾರ ಕೂಡ ಎರಡು ಅಂಕಿಗಳ ಮೊತ್ತ ವನ್ನು ಗಳಿಸಲಿಲ್ಲ ಅಂತಿಮವಾಗಿ ಟೀಮ್ ಇಂಡಿಯಾ 19 ಓವರ್ ಗಳಲ್ಲಿ ಎಲ್ಲ ವಿಕೆಟ್ ಗಳನ್ನು ಕಳೆದುಕೊಂಡು 119 ರನ್ ಗಳ ಸಾಧಾರಣ ಮೊತ್ತವನ್ನು ಗಳಿಸಿತು.ಪಾಕ್ ತಂಡದ ಪರವಾಗಿ ಮಾರಕ ಬೌಲಿಂಗ್ ದಾಳಿ ಮಾಡಿದ ನಾಸಿಮ್ ಶಾ ಹಾಗೂ ಹರೀಶ್ ರಾವಫ್ ತಲಾ ಮೂರು ವಿಕೆಟ್ ಗಳನ್ನು ಕಬಳಿಸುವ ಮೂಲಕ ಭಾರತದ ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಕಟ್ಟಿ ಹಾಕುವಲ್ಲಿ ಯಶಸ್ವಿಯಾದರು.

ಇನ್ನೊಂದೆಡೆಗೆ ಸಾಧಾರಣ ಗೆಲುವಿನ ಗುರಿಯನ್ನು ಬೆನ್ನತ್ತಿದ್ದ ಪಾಕ್ ತಂಡಕ್ಕೆ ಟೀಮ್ ಇಂಡಿಯಾದ ಬೌಲರ್ ಗಳು ಮಾರಕವಾಗಿ ಪರಿಣಮಿಸಿದರು.ಭಾರತದ ಪರವಾಗಿ ಬಿಗುವಿನ ಬೌಲಿಂಗ್ ದಾಳಿ ನಡೆಸಿದ ಜಸ್ಪ್ರೀತ್ ಬುಮ್ರಾ ಮೂರು ವಿಕೆಟ್ ಹಾಗೂ ಹಾರ್ದಿಕ್ ಪಾಂಡ್ಯ ಎರಡು ವಿಕೆಟ್ ಗಳನ್ನು ಕಬಳಿಸುವ ಮೂಲಕ ಪಾಕ್ ತಂಡದ ರನ್ ಗತಿಗೆ ಕಡಿವಾಣ ಹಾಕಿದರು.ಅಂತಿಮವಾಗಿ ಕೊನೆಯ ಓವರ್ ನಲ್ಲಿ ಕೇವಲ 6 ಎಸೆತಗಳಲ್ಲಿ 18 ರನ್ ಗಳ ಅಗತ್ಯ ಇದ್ದಾಗ ಪಾಕ್ ಕೇವಲ 13 ರನ್ ಗಳನ್ನು ಮಾತ್ರಗಳಿಸುವಲ್ಲಿ ಯಶಸ್ವಿಯಾಯಿತು.ಇದರಿಂದಾಗಿ ಪಾಕ್ ತಂಡವು 20 ಓವರ್ ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 113 ರನ್ ಗಳನ್ನು ಮಾತ್ರ ಗಳಿಸಿದ್ದರಿಂದಾಗಿ ಆರು ರನ್ ಗಳ ಅಂತರದಲ್ಲಿ ಸೋಲನ್ನು ಅನುಭವಿಸಿತು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

Trending News