Reason for Yuva Rajkumar Sridevi Divorce: ಯುವರಾಜ್ ಕುಮಾರ್ ಹಾಗೂ ಶ್ರೀದೇವಿ ವಿಚ್ಛೇದನದ ಸುದ್ದಿ ಚಂದನವನದಲ್ಲಿ ಭಾರೀ ಸದ್ದು ಮಾಡುತ್ತಿದೆ. ಇದೀಗ ಈ ಸುದ್ದಿಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಈ ವಿಚ್ಛೇದನದ ಹಿಂದೆ ಖ್ಯಾತ ನಟಿಯ ಕೈವಾಡ ಇದೆ ಎಂಬುದಾಗಿ ತಿಳಿದುಬಂದಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಯುವರಾಜ್ ಕುಮಾರ್ ಹಾಗೂ ಶ್ರೀದೇವಿ ವಿಚ್ಛೇದನದ ಸುದ್ದಿ ಚಂದನವನದಲ್ಲಿ ಭಾರೀ ಸದ್ದು ಮಾಡುತ್ತಿದೆ. ಇದೀಗ ಈ ಸುದ್ದಿಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಈ ವಿಚ್ಛೇದನದ ಹಿಂದೆ ಖ್ಯಾತ ನಟಿಯ ಕೈವಾಡ ಇದೆ ಎಂಬುದಾಗಿ ತಿಳಿದುಬಂದಿದೆ.
ಯುವ ಮತ್ತು ಶ್ರೀದೇವಿ ಡಿವೋರ್ಸ್ ಪಡೆಯುತ್ತಿರುವುದು ದೊಡ್ಮೆನಯಲ್ಲಿ ಯಾರಿಗೂ ಇಷ್ಟವಿಲ್ಲ ಎಂದು ಹೇಳಲಾಗುತ್ತಿದೆ. ರಾಘವೇಂದ್ರ ರಾಜ್ ಕುಮಾರ್ ಮತ್ತು ಮಂಗಳಮ್ಮ ಮಾತ್ರ ಒಪ್ಪಿಗೆ ನೀಡಿದ್ದು, ಅಶ್ವಿನಿ ಪುನೀತ್ ರಾಜ್ಕ ಕುಮಾರ್, ಶಿವರಾಜ್ ಕುಮಾರ್, ಗೀತಾ ಸೇರಿದಂತೆ ಯಾರಿಗೂ ಇಷ್ಟವಿಲ್ಲ ಎಂಬ ಮಾತುಗಳು ಕೇಳಿಬರುತ್ತಿದೆ.
ಮೂಲಗಳ ಪ್ರಕಾರ, ಖ್ಯಾತ ನಟಿಯೊಬ್ಬಳ ಜೊತೆ ಯುವ ರಾಜ್ಕುಮಾರ್ ಆಪ್ತತೆ ಹೆಚ್ಚಿಸಿಕೊಂಡಿದ್ದೇ ಈ ವಿಚ್ಛೇದನಕ್ಕೆ ಕಾರಣ ಎನ್ನಲಾಗುತ್ತಿತ್ತು.
ಇದೀಗ ಶ್ರೀದೇವಿ ಕಳುಹಿಸಿರುವ ಲೀಗಲ್ ನೋಟಿಸ್’ನ ಪ್ರತಿಕ್ರಿಯೆ ಪ್ರತಿಯಲ್ಲಿ ಓರ್ವ ನಟಿಯ ಹೆಸರನ್ನು ಉಲ್ಲೇಖಿಸಿದ್ದಾರೆ. ಅಷ್ಟಕ್ಕೂ ಆಕೆ ಬೇರಾರು ಅಲ್ಲ, ಸಪ್ತಮಿ ಗೌಡ.
ನೋಟಿಸ್’ನಲ್ಲಿ ಉಲ್ಲೇಖಿಸಿರುವಂತೆ, “9 ವರ್ಷಗಳು… ಶ್ರೀದೇವಿ ತನ್ನ ಕುಟುಂಬದ ಹಿತಾಸಕ್ತಿಯನ್ನು ರಕ್ಷಿಸುವ ಉದ್ದೇಶದಿಂದ ಎಲ್ಲಾ ಮಾನಸಿಕ, ಆರ್ಥಿಕ ಮತ್ತು ದೈಹಿಕ ಕಿರುಕುಳವನ್ನು ಸಹಿಸಿಕೊಂಡು ಬಂದಿದ್ದಾರೆ. ನಿಮ್ಮ ಕಕ್ಷಿದಾರ, ಅವರ ಸಹ ನಟಿ ಸಪ್ತಮಿ ಗೌಡ ಜೊತೆ ಸಂಬಂಧ ಹೊಂದಿದ್ದರು. ಸುಮಾರು ಒಂದು ವರ್ಷದಿಂದ ಸಪ್ತಮಿ ಗೌಡ ಜೊತೆ ಸಂಬಂಧ ಹೊಂದಿದ್ದಾರೆ. ಕಾನೂನು ನೋಟಿಸ್ ನೀಡುವ ಮೂಲಕ ನಮ್ಮ ಕಕ್ಷಿದಾರರ ವಿರುದ್ಧ ತನ್ನ ಕ್ರೂರ ಉದ್ದೇಶವನ್ನು ದೃಢಪಡಿಸಿದ್ದಾರೆ” ಎಂದು ವಕೀಲರ ಮೂಲಕ ಹೇಳಿಕೆ ಬಿಡುಗಡೆಗೊಳಿಸಿದ್ದಾರೆ.
ರಾಜ್ ಕುಟುಂಬದಲ್ಲಿ ವಿಚ್ಛೇದನವೆಂಬ ಬಿರುಗಾಳಿ ಎದ್ದಿದ್ದು ಇದೇ ಮೊದಲ ಬಾರಿ. ಈ ನೋಟಿಸ್’ಗೆ ಯುವರಾಜ್ ಆಗಲಿ, ದೊಡ್ಮನೆ ಕುಟುಂಬದವರಾಗಲಿ ಇನ್ನೇನು ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.