United States vs India: ನ್ಯೂಯಾರ್ಕ್: ಇಲ್ಲಿನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಟಿ 20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಯುಎಸ್ ವಿರುದ್ಧ ಏಳು ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.
ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಟೀಮ್ ಇಂಡಿಯಾ ತನ್ನ ಶಿಸ್ತುಬದ್ದ ಬೌಲಿಂಗ್ ದಾಳಿಯಿಂದ ಅಮೇರಿಕಾ ತಂಡವನ್ನು 20 ಓವರ್ ಗಳಲ್ಲಿ ಎಂಟು ವಿಕೆಟ್ ಗಳನ್ನು ಕಬಳಿಸಿ 110 ರನ್ ಗಳಿಗೆ ಕಟ್ಟಿ ಹಾಕಿತು,ಭಾರತದ ಪರವಾಗಿ ಮಾರಕ ಬೌಲಿಂಗ್ ದಾಳಿ ನಡೆಸಿದ ಆರ್ಶೀಪ್ ಸಿಂಗ್ ನಾಲ್ಕು ಓವರ್ ಗಳಲ್ಲಿ 9 ರನ್ ನೀಡಿ ನಾಲ್ಕು ವಿಕೆಟ್ ಗಳನ್ನು ಕಬಳಿಸುವ ಮೂಲಕ ಅಮೇರಿಕಾ ತಂಡದ ಬ್ಯಾಟಿಂಗ್ ಪಡೆಯನ್ನು ಕಟ್ಟಿ ಹಾಕುವಲ್ಲಿ ಯಶಸ್ವಿಯಾದರು. ಇನ್ನೊಂದೆಡೆಗೆ ಇವರಿಗೆ ಸಾಥ್ ನೀಡಿದ ಹಾರ್ದಿಕ್ ಪಾಂಡ್ಯ ಎರಡು ವಿಕೆಟ್ ಗಳನ್ನು ಕಬಳಿಸುವ ಮೂಲಕ ಯುಎಸ್ ತಂಡದ ರನ್ ವೇಗಕ್ಕೆ ಕಡಿವಾಣ ಹಾಕಿದರು.
Suryakumar Yadav's 18th T20I half-century is an @MyIndusIndBank Milestone Moment 🙌#USAvIND #T20WorldCup pic.twitter.com/ObXweIt3F3
— ICC (@ICC) June 12, 2024
ಅಮೇರಿಕಾ ತಂಡವು ನೀಡಿದ 111 ರನ್ ಗಳ ಸಾಧಾರಣ ಗೆಲುವಿನ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾಗೆ ಆರಂಭದಲ್ಲಿಯೇ ಯುಎಸ್ ಬೌಲರ್ ಗಳು ಶಾಕ್ ನೀಡಿದರು.ಅದರಲ್ಲೂ ತಂಡದ ಮೊತ್ತ 10 ರನ್ ಆಗುವಷ್ಟರಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರ ವಿಕೆಟ್ ಕಳೆದುಕೊಳ್ಳುವ ಮೂಲಕ ತಂಡವು ಆರಂಭಿಕ ಆಘಾತವನ್ನು ಎದುರಿಸಿತು.
New York 📍
Arshdeep Singh's scintillating four-wicket haul restricts USA to 110/8 at the halfway mark 👏#T20WorldCup | #USAvIND | 📝: https://t.co/TbtRddWHNK pic.twitter.com/AzA79zLe26
— ICC (@ICC) June 12, 2024
ಈ ಹಂತದಲ್ಲಿ ತಂಡಕ್ಕೆ ಆಸರೆಯಾದ ಸೂರ್ಯಕುಮಾರ್ ಯಾದವ್ ಭದ್ರವಾಗಿ ನೆಲೆಯೂರಿ 49 ಎಸೆತಗಳಲ್ಲಿ ಎರಡು ಬೌಂಡರಿ ಹಾಗೂ ಎರಡು ಭರ್ಜರಿ ಸಿಕ್ಸರ್ ಗಳ ನೆರವಿನಿಂದ ಅಜೇಯ 50 ರನ್ ಗಳಿಸಿದರೆ ಇನ್ನೊಂದೆಡೆಗೆ ಇವರ ಜೊತೆ ಉತ್ತಮ ಸಾಥ್ ನೀಡಿದ ಶಿವಂ ದುಬೆ ಸಹಿತ 35 ಎಸೆತಗಳಲ್ಲಿ ಒಂದು ಬೌಂಡರಿ ಹಾಗೂ ಒಂದು ಸಿಕ್ಸರ್ ಗಳ ನೆರವಿನಿಂದ 31 ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡಕ್ಕೆ ಸೇರಿಸುವಲ್ಲಿ ಯಶಸ್ವಿಯಾದರು. ಆ ಮೂಲಕ ಅಂತಿಮವಾಗಿ ಟೀಮ್ ಇಂಡಿಯಾ ಮೂರು ವಿಕೆಟ್ ಗಳ ನಷ್ಟಕ್ಕೆ ಇನ್ನೂ 10 ಎಸೆತಗಳು ಇರುವಂತೆಯೇ ಗೆಲುವನ್ನು ಸಾಧಿಸಿತು.