India vs Bangladesh, T20 world Cup 2024: 2024ರ ಟಿ-20 ವಿಶ್ವಕಪ್ನ ಸೂಪರ್-8ರ ಮಹತ್ವದ ಪಂದ್ಯದಲ್ಲಿ ಬಾಂಗ್ಲಾದೇಶಕ್ಕೆ ಟೀಂ ಇಂಡಿಯಾ 197 ರನ್ಗಳ ಟಾರ್ಗೆಟ್ ನೀಡಿದೆ. ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಫೀಲ್ಡಿಂಗ್ ಆಯ್ದುಕೊಂಡಿತು.
ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 196 ರನ್ಗಳ ಬೃಹತ್ ಮೊತ್ತವನ್ನು ಪೇರಿಸಿತು. ಟೀಂ ಇಂಡಿಯಾ ಪರ ಹಾರ್ದಿಕ್ ಪಾಂಡ್ಯ(ಅಜೇಯ 50) ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದರು. 27 ಎಸೆತಗಳನ್ನು ಎದುರಿಸಿದ ಅವರು 4 ಬೌಂಡರಿ ಮತ್ತು 3 ಸಿಕ್ಸರ್ ಸಿಡಿಸಿ ಸ್ಫೋಟಕ ಆಟವಾಡಿದರು.
A determined half-century from vice-captain Hardik Pandya 💪
He remains unbeaten on 50* off 27 deliveries, including 3 Sixes 💥
Follow The Match ▶️ https://t.co/QZIdeg3h22 #T20WorldCup | #TeamIndia | #INDvBAN | @hardikpandya7 pic.twitter.com/nlN1IMkQYI
— BCCI (@BCCI) June 22, 2024
ಇದನ್ನೂ ಓದಿ: IND vs BAN: ಅಜೇಯ ಭಾರತಕ್ಕೆ ಬಾಂಗ್ಲಾ ಸವಾಲು: ಉಭಯ ತಂಡಗಳ ಹೆಡ್ ಟು ಹೆಡ್ ರೆಕಾರ್ಡ್, ಪಿಚ್ ರಿಪೋರ್ಟ್ ಇಲ್ಲಿದೆ
ಇದಕ್ಕೂ ಮೊದಲು ಆರಂಭಿಕರಾಗಿ ಕಣಕ್ಕಿಳಿದ ನಾಯಕ ರೋಹಿತ್ ಶರ್ಮಾ(23) ಮತ್ತು ವಿರಾಟ್ ಕೊಹ್ಲಿ(37) ಉತ್ತಮ ಆರಂಭ ಒದಗಿಸಿದರು. ನಂತರ ಬಂದ ರಿಷಬ್ ಪಂತ್(36) ಮತ್ತು ಶಿವಂ ದುಬೆ(34) ಉತ್ತಮ ಆಟವಾಡಿದರು.
Innings Break!
A solid batting display from #TeamIndia! 💪
A cracking unbeaten half-century for @hardikpandya7 👌 👌
Some handy contributions from @imVkohli, @RishabhPant17, @IamShivamDube & captain @ImRo45
Over to our bowlers now! 👍
Scorecard ▶️ https://t.co/QZIdeg3h22… pic.twitter.com/e0dwlNEYcb
— BCCI (@BCCI) June 22, 2024
ಬಾಂಗ್ಲಾದೇಶ ಪರ ತಂಜಿಮ್ ಹಸನ್ ಸಾಕಿಬ್ ಮತ್ತು ರಿಶಾದ್ ಹೊಸೈನ್ ತಲಾ 2 ವಿಕೆಟ್ ಪಡೆದು ಮಿಂಚಿದರು. ಶಕೀಬ್ ಅಲ್ ಹಸನ್ 1 ವಿಕೆಟ್ ಕಬಳಿಸಿದರು. ಈ ಮಹತ್ವದ ಪಂದ್ಯವನ್ನು ಗೆದ್ದರೆ ಟೀಂ ಇಂಡಿಯಾ ಸೆಮಿಫೈನಲ್ಗೆ ಲಗ್ಗೆ ಇಡಲಿದೆ. ಬಾಂಗ್ಲಾ ಟೂರ್ನಿಯಿಂದ ಹೊರಬೀಳಲಿದೆ. ಹೀಗಾಗಿ ಟೀಂ ಇಂಡಿಯಾ ವಿರುದ್ಧ ಬಾಂಗ್ಲಾ ಯಾವರ ರೀತಿಯ ಬ್ಯಾಟಿಂಗ್ ಪ್ರದರ್ಶನ ನೀಡಲಿದೆ ಅನ್ನೋದು ಕುತೂಹಲ ಮೂಡಿಸಿದೆ. ಸದ್ಯದ ಮಾಹಿತಿ ಪ್ರಕಾರ ಬ್ಯಾಟಿಂಗ್ ಆರಂಭಿಸಿರುವ ಬಾಂಗ್ಲಾದೇಶ ಒಂದು ಓವರ್ಗೆ ವಿಕೆಟ್ ನಷ್ಟವಿಲ್ಲದೆ 5 ರನ್ ಗಳಿಸಿದೆ.
ಇದನ್ನೂ ಓದಿ: ಟೀಂ ಇಂಡಿಯಾದ ವೇಗಿ ದೀಪಕ್ ಚಹಾರ್ ಸಹೋದರಿ ಸಿನಿರಂಗವನ್ನೇ ಆಳುತ್ತಿರುವ ಖ್ಯಾತ ನಟಿ! ಯಾರೆಂದು ತಿಳಿಯಿತೇ?
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.