ICC Mens T20 World Cup 2024: 2024ರ ಟಿ-20 ವಿಶ್ವಕಪ್‌ನ ಸೂಪರ್-8ರ ಮಹತ್ವದ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಮಣಿಸಿದ ಟೀಂ ಇಂಡಿಯಾ ಸೆಮಿಫೈನಲ್‌ಗೆ ಎಂಟ್ರಿ ಕೊಟ್ಟಿದೆ. ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಫೀಲ್ಡಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 196 ರನ್‌ಗಳ ಬೃಹತ್ ಮೊತ್ತವನ್ನು ಪೇರಿಸಿತು.
ಗೆಲುವಿನ ಗುರಿ ಬೆನ್ನತ್ತಿದ ಬಾಂಗ್ಲಾ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 146 ರನ್ ಗಳಿಸಲಷ್ಟೇ ಶಕ್ತವಾಯಿತು. 50 ರನ್‌ಗಳಿಂದ ಗೆಲುವು ಸಾಧಿಸುವ ಮೂಲಕ ಟೀಂ ಇಂಡಿಯಾ ಗ್ರೂಪ್ ಒಂದರಲ್ಲಿ ಬಹುತೇಕ ಸೆಮಿಫೈನಲ್ ಪ್ರವೇಶಿಸಿದಂತಾಗಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತ ತಂಡವು ಬಾಂಗ್ಲಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿತು.
𝘼 𝙘𝙡𝙞𝙣𝙞𝙘𝙖𝙡 𝙨𝙝𝙤𝙬 𝙞𝙣 𝘼𝙣𝙩𝙞𝙜𝙪𝙖 𝙛𝙧𝙤𝙢 #𝙏𝙚𝙖𝙢𝙄𝙣𝙙𝙞𝙖! 👏 👏
A 5⃣0⃣-run win over Bangladesh for @ImRo45 & Co as they seal their 2️⃣nd win on the bounce in Super Eight. 🙌 🙌
Scorecard ▶️ https://t.co/QZIdeg3h22 #T20WorldCup | #INDvBAN pic.twitter.com/GJ4eZzDUaA
— BCCI (@BCCI) June 22, 2024
ಇದನ್ನೂ ಓದಿ: ಟೀಂ ಇಂಡಿಯಾದ ವೇಗಿ ದೀಪಕ್ ಚಹಾರ್ ಸಹೋದರಿ ಸಿನಿರಂಗವನ್ನೇ ಆಳುತ್ತಿರುವ ಖ್ಯಾತ ನಟಿ! ಯಾರೆಂದು ತಿಳಿಯಿತೇ?
ಟೀಂ ಇಂಡಿಯಾ ಪರ ಹಾರ್ದಿಕ್ ಪಾಂಡ್ಯ (ಅಜೇಯ 50) ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದರು. 27 ಎಸೆತಗಳನ್ನು ಎದುರಿಸಿದ ಪಾಂಡ್ಯ 4 ಬೌಂಡರಿ ಮತ್ತು 3 ಸಿಕ್ಸರ್ ಸಿಡಿಸಿ ಸ್ಫೋಟಕ ಆಟವಾಡಿದರು. ಇದಕ್ಕೂ ಮೊದಲು ಆರಂಭಿಕರಾಗಿ ಕಣಕ್ಕಿಳಿದ ನಾಯಕ ರೋಹಿತ್ ಶರ್ಮಾ(23) ಮತ್ತು ವಿರಾಟ್ ಕೊಹ್ಲಿ(37) ಉತ್ತಮ ಆರಂಭ ಒದಗಿಸಿದರು. ನಂತರ ಬಂದ ರಿಷಬ್ ಪಂತ್(36) ಮತ್ತು ಶಿವಂ ದುಬೆ(34) ಉತ್ತಮ ಆಟವಾಡಿದರು. ಬಾಂಗ್ಲಾದೇಶ ಪರ ತಂಜಿಮ್ ಹಸನ್ ಸಾಕಿಬ್ ಮತ್ತು ರಿಶಾದ್ ಹೊಸೈನ್ ತಲಾ 2 ವಿಕೆಟ್ ಪಡೆದು ಮಿಂಚಿದರು. ಶಕೀಬ್ ಅಲ್ ಹಸನ್ 1 ವಿಕೆಟ್ ಕಬಳಿಸಿದರು.
ಇನ್ನು ಗೆಲುವಿನ ಗುರಿ ಬೆನ್ನತ್ತಿದ ಬಾಂಗ್ಲಾ ಪರ ನಾಯಕ ನಜ್ಮುಲ್ ಹೊಸೈನ್ ಶಾಂಟೋ (40) ರನ್ ಗಳಿಸಿದರು. ಇನ್ನುಳಿದಂತೆ ತಂಜಿದ್ ಹಸನ್ (29), ರಿಶಾದ್ ಹೊಸೈನ್ (24), ಲಿಟ್ಟನ್ ದಾಸ್ (13), ಮಹಮ್ಮದುಲ್ಲಾ (13) ಮತ್ತು ಶಕೀಬ್ ಅಲ್ ಹಸನ್ (11) ರನ್ ಗಳಿಸಿದರು. ಭಾರತದ ಪರ ಬೌಲಿಂಗ್‌ನಲ್ಲಿ ಮಿಂಚಿದ ಕುಲದೀಪ್ ಯಾದವ್ 19ಕ್ಕೆ 3 ವಿಕೆಟ್ ಪಡೆದರು. ಅರ್ಷದೀಪ್ ಸಿಂಗ್ ಮತ್ತು ಜಸ್ಪ್ರೀತ್ ಬುಮ್ರಾ ತಲಾ 2 ವಿಕೆಟ್ ಹಾಗೂ ಹಾರ್ದಿಕ್ ಪಾಂಡ್ಯ ಒಂದು ವಿಕೆಟ್ ಪಡೆದು ಮಿಂಚಿದರು.
ಇದನ್ನೂ ಓದಿ: T20 World Cup 2024: ವಿಕೆಟ್ ಕೀಪಿಂಗ್‌ನಲ್ಲಿ ಕಿಂಗ್ ಎನಿಸಿಕೊಂಡ ರಿಷಬ್ ಪಂತ್..!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.